ದೇವನಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ನಡುವೆ ಗಲಾಟೆ; ಓರ್ವನ ಕೊಲೆ, ಮೂವರಿಗೆ ಚಾಕು ಇರಿತ

ದೇವನಹಳ್ಳಿ ತಾಲೂಕಿನ ಮಂಡಿಬೆಲೆ ಗ್ರಾಮದಲ್ಲಿ ಕಳೆದ ರಾತ್ರಿ‌ ಗ್ರಾಮದ ಗಜೇಂದ್ರ ಹಾಗೂ ಪಕ್ಕದ ಮನೆಯ ಮೋಹನ್ ವಿಜಿ‌ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ಮೋಹನ್ ವಿಜಿ ಹೊರಗಿನವರನ್ನ ಕರೆಸಿದ್ದು ಗಲಾಟೆ ಜೋರಾಗಿದೆ. ಮೊದಲು ಮೋಹನ್ ಹಾಗೂ ಮೂವರ ಮೇಲೆ ಗಜೇಂದ್ರ ಚಾಕು ಇರಿದಿದ್ದು ಚಾಕು ಇರಿಯುತ್ತಿದ್ದಂತೆ ಗಜೇಂದ್ರನ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ.

ದೇವನಹಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಗುಂಪುಗಳ ನಡುವೆ ಗಲಾಟೆ; ಓರ್ವನ ಕೊಲೆ, ಮೂವರಿಗೆ ಚಾಕು ಇರಿತ
ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
Follow us
ನವೀನ್ ಕುಮಾರ್ ಟಿ
| Updated By: ಆಯೇಷಾ ಬಾನು

Updated on: Sep 15, 2023 | 9:39 AM

ದೇವನಹಳ್ಳಿ, ಸೆ.15: ನಡೆದಾಡುವ ದಾರಿ ವಿಚಾರಕ್ಕೆ ಎರಡು‌ ಗುಂಪುಗಳ ನಡುವೆ ಗಲಾಟೆಯಾಗಿದ್ದು ಘಟನೆ ಕೊಲೆಯಲ್ಲಿ ಅಂತ್ಯವಾಗಿದೆ(Murder). ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಮಂಡಿಬೆಲೆ ಗ್ರಾಮದಲ್ಲಿ ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ದೊಣ್ಣೆ ಚಾಕುಗಳಿಂದ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಓರ್ವನ ಕೊಲೆಯಾಗಿದ್ದು ಮೂವರಿಗೆ ಚಾಕು ಇರಿಯಲಾಗಿದೆ. ನಿನ್ನೆ ರಾತ್ರಿ ಘಟನೆ ನಡೆದಿದ್ದು ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ದೇವನಹಳ್ಳಿ ತಾಲೂಕಿನ ಮಂಡಿಬೆಲೆ ಗ್ರಾಮದಲ್ಲಿ ಕಳೆದ ರಾತ್ರಿ‌ ಗ್ರಾಮದ ಗಜೇಂದ್ರ ಹಾಗೂ ಪಕ್ಕದ ಮನೆಯ ಮೋಹನ್ ವಿಜಿ‌ ನಡುವೆ ಗಲಾಟೆಯಾಗಿದೆ. ಗಲಾಟೆ ವೇಳೆ ಮೋಹನ್ ವಿಜಿ ಹೊರಗಿನವರನ್ನ ಕರೆಸಿದ್ದು ಗಲಾಟೆ ಜೋರಾಗಿದೆ. ಮೊದಲು ಮೋಹನ್ ಹಾಗೂ ಮೂವರ ಮೇಲೆ ಗಜೇಂದ್ರ ಚಾಕು ಇರಿದಿದ್ದು ಚಾಕು ಇರಿಯುತ್ತಿದ್ದಂತೆ ಗಜೇಂದ್ರನ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಕೊಲೆಯಾದ ಗಜೇಂದ್ರ ಮೃತದೇಹ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಗಾಯಗೊಂಡ ಮೋಹನ್, ವಿಜಿ, ಲಿಕಿತ್​ಗೆ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಎರಡು ಗುಂಪುಗಳ ನಡುವಿನ ಗಲಾಟೆಯಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ವಿಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ಆಗ್ರಾದ ಬಾಲಾಪರಾಧಿಗೃಹದಲ್ಲಿ ಆಘಾತಕಾರಿ ಘಟನೆ, ಮಕ್ಕಳನ್ನು ಮಂಚಕ್ಕೆ ಕಟ್ಟಿ, ಚಪ್ಪಲಿಯಿಂದ ಥಳಿಸುತ್ತಾರೆ ಅಧಿಕಾರಿಗಳು

ವೃದ್ಧೆ ಕಿವಿ ಓಲೆ ಕಿತ್ತುಕೊಂಡು ಪರಾರಿಯಾದ ಖದೀಮರು

ರಾಯಚೂರು ಜಿಲ್ಲೆ ಲಿಂಗಸುಗೂರು ಪಟ್ಟಣದಲ್ಲಿ ನಿನ್ನೆ ರಾತ್ರಿ ವೃದ್ಧೆಯೋರ್ವರಿಗೆ ಬಾಯಿಗೆ ಬಟ್ಟೆ ಇಟ್ಟು ಹಲ್ಲೆ ನಡೆಸಿ ಕಿವಿ ಓಲೆ ಕಿತ್ತುಕೊಂಡು ಹೋದ ಅಮಾನವೀಯ ಘಟನೆ ನಡೆದಿದೆ. ಪಾರ್ವತಮ್ಮ, ಹಲ್ಲೆಗೊಳಗಾದ ವೃದ್ಧೆ. ಪಾರ್ವತಮ್ಮ ಮನೆಯಲ್ಲಿ ಒಬ್ಬರೇ ಇರುತ್ತಿದ್ದದನ್ನು ಗಮನಿಸಿದ್ದ ಇಬ್ಬರು ಖದೀಮರು ನಿನ್ನೆ ರಾತ್ರಿ ಏಕಾಏಕಿ ಪಾರ್ವತಮ್ಮಳ ಮನೆಗೆ ನುಗ್ಗಿ ಬಾಯಿಗೆ ಬಟ್ಟೆ ಇಟ್ಟು, ಬಳಿಕ ಹಲ್ಲೆ ನಡೆಸಿ ನಂತರ ಆಕೆ ಕೊರಳಿದ್ದ ಬೋರಮಾಳ, ಕಿವಿ ಓಲೆ ಕಸಿದುಕೊಂಡು ಪರಾರಿಯಾಗಿದ್ದಾರೆ. ಈ ವೇಳೆ ಪಾರ್ವತಮ್ಮನವರು ಕಿರುಚಾಡಿದ್ದು ಸ್ಥಳೀಯರು ಸಹಾಯಕ್ಕೆ ಧಾವಿಸಿ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ದೂರು ದಾಖಲಿಸಿಕೊಂಡ ಲಿಂಗಸುಗೂರು ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಕಿವಿ ಓಲೆ ಕಿತ್ತು ಕೊಂಡ ಹಿನ್ನೆಲೆ ವೃದ್ಧೆ ಕಿವಿಗಳಿಗೆ ಗಾಯಗಳಾಗಿದ್ದು ವೃದ್ಧೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರಕ್ತಸಿಕ್ತವಾಗಿ ಗಾಯವಾಗಿರೊ ಕಿವಿಗಳಿಗೆ ವೈದ್ಯರು ಸ್ಟಿಚ್ ಹಾಕಿದ್ದಾರೆ. ವೃದ್ಧೆ ಪಾರ್ವತಮ್ಮ ಹೇಳಿಕೆ ಪಡೆದು ಲಿಂಗಸುಗೂರು ಪೊಲೀಸರು ತನಿಖೆಗೆ ಇಳಿದಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ