AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತ್ಯೇಕ ಘಟನೆ: ನೆಲಮಂಗದಲ್ಲಿ 23 ಸಿಲಿಂಡರ್ ಸ್ಫೋಟದಲ್ಲಿ ದಂಪತಿ ಸಾವು; ಶೃಂಗೇರಿಯಲ್ಲಿ ನವವಿವಾಹಿತ ದಾರುಣ ಸಾವು

ಬೆಂಗಳೂರು ಉತ್ತರ ತಾಲೂಕಿನ ಕಮ್ಮಗೊಂಡನಹಳ್ಳಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ದಂಪತಿ ಮೃತಪಟ್ಟಿರುವ ಘಟನೆ ನಡೆದಿದೆ. ನೆಲಮಹಡಿಯ ಮಳಿಗೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಅಗ್ನಿ ಅನಾಹುತ ಸಂಭವಿಸಿದೆ. ಮತ್ತೊಂದು ಪ್ರಕರಣದಲ್ಲಿ 5 ದಿನಗಳ ಹಿಂದೆಯಷ್ಟೇ ಮದುವೆಯಾಗಿದ್ದ ವ್ಯಕ್ತಿ KSRTC ಬಸ್​ ಅಪಘಾತದಲ್ಲಿ ಸಜೀವದಹನವಾದ ಘಟನೆ ಶೃಂಗೇರಿಯಲ್ಲಿ ನಡೆದಿದೆ.

ಪ್ರತ್ಯೇಕ ಘಟನೆ: ನೆಲಮಂಗದಲ್ಲಿ 23 ಸಿಲಿಂಡರ್ ಸ್ಫೋಟದಲ್ಲಿ ದಂಪತಿ ಸಾವು; ಶೃಂಗೇರಿಯಲ್ಲಿ ನವವಿವಾಹಿತ ದಾರುಣ ಸಾವು
ಸಿಲಿಂಡರ್ ಸ್ಫೋಟ, ಮೃತ ನವವಿವಾಹಿತ
ಮಂಜುನಾಥ ಎಚ್​. ವಿ.
| Edited By: |

Updated on:Oct 26, 2026 | 5:05 PM

Share

ಮುಖ್ಯಾಂಶಗಳು

  • ನೆಲಮಹಡಿಯ ಮಳಿಗೆಯಲ್ಲಿ ಸಿಲಿಂಡರ್ ಸ್ಫೋಟದಿಂದ ಅಗ್ನಿ ಅನಾಹುತ
  • ಬೆಂಗಳೂರು ಉತ್ತರ ತಾಲೂಕಿನ ಕಮ್ಮಗೊಂಡನಹಳ್ಳಿಯಲ್ಲಿ ನಡೆದಿದ್ದ ಘಟನೆ
  • ಶೃಂಗೇರಿಯಲ್ಲಿ ನವವಿವಾಹಿತ ದಾರುಣ ಸಾವು

ನೆಲಮಂಗಲ, ಅಕ್ಟೋಬರ್​ 26: ಸಿಲಿಂಡರ್ ಸ್ಫೋಟಗೊಂಡು ದಂಪತಿ ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಕಮ್ಮಗೊಂಡನಹಳ್ಳಿಯಲ್ಲಿ ನಡೆದಿದೆ. ಮೊದಲ ಮಹಡಿಯಲ್ಲಿ ವಾಸವಿದ್ದ ಪತ್ನಿ ನಾಗರತ್ನ(26) ಮತ್ತು ಆಕಾಶ್(32) ಮೃತ ದಂಪತಿ. ನೆಲಮಹಡಿಯ ಮಳಿಗೆಯಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ದಂಪತಿ ವಾಸವಿದ್ದ ಮೊದಲ ಮಹಡಿಗೂ ಬೆಂಕಿ ವ್ಯಾಪಿಸಿ ಅಗ್ನಿ ಅನಾಹುತ ಸಂಭವಿಸಿದೆ. ಗಂಗಮ್ಮಗುಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ನಡೆದಿದ್ದೇನು?

ಬೆಂಗಳೂರು ಉತ್ತರ ತಾಲೂಕಿನ ಕಮ್ಮಗೊಂಡನಹಳ್ಳಿಯಲ್ಲಿ ಅ.24ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನೂರಾನಿ ಮಸೀದಿ ಪಕ್ಕದಲ್ಲಿದ ನೆಲಮಹಡಿಯ ಮಳಿಗೆಯಲ್ಲಿದ್ದ ಸಿಲಿಂಡರ್​ಗಳು​​ ರಾತ್ರಿ ಲೀಕೇಜ್​ ಆಗಿದ್ದು, 6 ಕೆ.ಜಿ ತೂಕದ 23 ಸಿಲಿಂಡರ್​​ಗಳು ಸ್ಫೋಟಗೊಂಡಿವೆ. ದಂಪತಿ ವಾಸವಿದ್ದ ಮೊದಲ ಮಹಡಿಗೂ ಬೆಂಕಿ ವ್ಯಾಪಿಸಿದೆ. ಬೆಂಕಿಗೆ ಹೆದರಿದ ದಂಪತಿ ಮನೆಯ ಬಾಗಿಲು ಕ್ಲೋಸ್‌ ಮಾಡಿಕೊಂಡಿದ್ದಾರೆ. ಹೀಗಾಗಿ ಹೊಗೆಯಿಂದ ಉಸಿರುಗಟ್ಟಿ ಮನೆಯ ರೂಂ ನಲ್ಲಿ ಮೃತಪಟ್ಟಿರುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ಕಮ್ಮಗೊಂಡನಹಳ್ಳಿಯ ಅಂಗಡಿಯಲ್ಲಿ ಏಕಕಾಲಕ್ಕೆ 23 ಸಿಲಿಂಡರ್​​ಗಳು ಸ್ಫೋಟ: ಭಾರಿ ಅಗ್ನಿ ಅನಾಹುತ

ಇನ್ನು ಮಸೀದಿಯಲ್ಲಿದ್ದವರಿಗೆ ಮೃತದೇಹಗಳ ವಾಸನೆ ಬಂದಿದ್ದು, ಕಿಟಕಿ ತೆಗೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಗಂಗಮ್ಮಗುಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಎರಡು ಮೃತದೇಹಗಳನ್ನ ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಶವಾಗಾರಕ್ಕೆ ರವಾನಿಸಲಾಗಿದೆ.

LIVE TV

ಕೆಎಸ್​ಆರ್​ಟಿಸಿ ಬಸ್​ ಡಿಕ್ಕಿಯಾಗಿ ಬೈಕ್​ನಲ್ಲಿ ನವವಿವಾಹಿತ ಸಾವು

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮೆಣಸೆ ಬಳಿ ಭೀಕರ ಘಟನೆಯೊಂದು ನಡೆದಿದೆ. ಕೆಎಸ್​​ಆರ್​​ಟಿಸಿ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ ಹೊತ್ತಿ ಉರಿದಿದ್ದು, ಕೇವಲ ಐದು ದಿನದ ಹಿಂದಷ್ಟೇ ಮದುವೆಯಾಗಿದ್ದ ನವವಿವಾಹಿತ ಸಜೀವದಹನ ಆಗಿದ್ದಾರೆ. ನಾಗರಾಜ್ (32) ಮೃತ ದುರ್ದೈವಿ. ಸದ್ಯ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ಶೃಂಗೇರಿ ತಾಲೂಕಿನ ಕುಂಚೇಬೈಲು ನಿವಾಸಿ ನಾಗರಾಜ್ ಬೈಕ್​​ನಲ್ಲಿ ತೆರಳುತ್ತಿದ್ದರು. ಇತ್ತ ಜಯಪುರದಿಂದ ಶೃಂಗೇರಿಗೆ ಕಡೆಗೆ ತೆರಳುತ್ತಿದ್ದ ಕೆಎಸ್​​ಆರ್​​ಟಿಸಿ ಬಸ್​​ ಬೈಕ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ರಸ್ತೆ ಮಧ್ಯದಲ್ಲಿಯೇ ಬೈಕ್​ ಹೊತ್ತಿ ಉರಿದಿದೆ. ಬೆಂಕಿಯ ಕೆನ್ನಾಲಿಗೆ ಬೈಕ್​ ಸವಾರ ನಾಗರಾಜ್​​ ಅರ್ಧಂಬರ್ಧ ಸುಟ್ಟು ಸಜೀವದಹನವಾಗಿದ್ದಾರೆ. ಅಪಘಾತದ ಬಳಿಕ ರಸ್ತೆ ಬದಿಯ ಕಂದಕಕ್ಕೆ ಸರ್ಕಾರಿ ಬಸ್ ನುಗ್ಗಿದೆ.

ಭೀಕರ ರಸ್ತೆ ಅಪಘಾತ: ಎರಡು ಕಾರುಗಳ ಮುಖಾಮುಖಿ ಡಿಕ್ಕಿ; ಮಹಿಳೆ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ​ಆನಂದಪುರ ಸಮೀಪದ ಗಿಳಾಲಗುಂಡಿ ತಿರುವಿನಲ್ಲಿ 2 ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಸಾಗರದಿಂದ ಶಿವಮೊಗ್ಗದ ಕಡೆಗೆ ಒಂದು ಕಾರು ತೆರಳುತ್ತಿದ್ದು, ​ಶಿವಮೊಗ್ಗದಿಂದ ಆನಂದಪುರ ಕಡೆಗೆ ಮತ್ತೊಂದು ಕಾರು ಬರುತ್ತಿದ್ದ ವೇಳೆ ಭೀಕರ ಅಪಘಾತ ಸಂಭವಿಸಿದೆ. ಮೃತ ಮಹಿಳೆ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಆನಂದಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:03 pm, Mon, 26 October 26

Follow Us
ಮಂಜುನಾಥ ಎಚ್​. ವಿ.
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More