ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, 30 ಜನರಿಗೆ ಗಾಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್​ ಡಿಕ್ಕಿ ಹೊಡೆದಿವೆ. ಘಟನೆಯಲ್ಲಿ 30 ಜನರು ಗಾಯಗೊಂಡಿದ್ದಾರೆ.

ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ, 30 ಜನರಿಗೆ ಗಾಯ
ಸರಣಿ ಅಪಘಾತ
Follow us
ಬಿ ಮೂರ್ತಿ, ನೆಲಮಂಗಲ
| Updated By: ವಿವೇಕ ಬಿರಾದಾರ

Updated on:Dec 27, 2023 | 7:54 AM

ನೆಲಮಂಗಲ, ಡಿಸೆಂಬರ್​ 27: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ (Nelamangala) ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಸರಣಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ (Private Bus) ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಬಸ್​ನಲ್ಲಿದ್ದ 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ  ಅಪಘಾತ ಸಂಭವಿಸಿದೆ. ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್​ ಬಸ್​ ಹಿಂದೆಯೇ  ದುರ್ಗಾಂಬಾ ಬಸ್ ಬರುತ್ತಿತ್ತು. ಈ ಅಪಘಾತವನ್ನು ಕಂಡ ದುರ್ಗಾಂಬಾ ಬಸ್​ ಚಾಲಕ ಬಸ್​​ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದರು. ಆದರೆ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಓರ್ವ ವ್ಯಕ್ತಿ ಸಜೀವ ದಹನ

ಈ ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್​​ಗಳ ಮುಖಾಂತರ ಅಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬಳಿಕ ಬಸ್​ಗಳನ್ನು ಕ್ರೈನ್ ಬಳಸಿ ತೆರವು ಮಾಡಲಾಗಿದೆ.

ಕಾರು ಹರಿದು ಮೂರು ವರ್ಷದ ಮಗು ಮೃತ

ಬೀದರ್​​: ಕಾರು ಹರಿದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಬೀದರ್ ನಗರದ ಗುಂಪಾರಸ್ತೆಯಲ್ಲಿ ನಡೆದಿದೆ. ಬಸವಚೇತನ ಮೃತ ಮಗು. ಮೃತ ಬಸವಚೇತನ ಹಾರುಗೇರಿ ನಿವಾಸಿ ಸತೀಶ್ ಪಾಟೀಲ್ ಹಾಗೂ ಸಂಗಿತಾ ದಂಪತಿ ಪುತ್ರ. ಮಗುವಿನ ಮೇಲೆ ಕಾರು ಹರಿದ ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:44 am, Wed, 27 December 23

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ