ನೆಲಮಂಗಲ, ಡಿಸೆಂಬರ್ 27: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ (Nelamangala) ರಾಷ್ಟ್ರೀಯ ಹೆದ್ದಾರಿ 4ರ ತೋಣಚಿನ ಕುಪ್ಪೆ ಬಳಿ ಸರಣಿ ಅಪಘಾತ ಸಂಭವಿಸಿದೆ. ನಿಂತಿದ್ದ ಲಾರಿಗೆ ಮೂರು ಖಾಸಗಿ ಬಸ್ (Private Bus) ಡಿಕ್ಕಿ ಹೊಡೆದಿವೆ. ಅಪಘಾತದಲ್ಲಿ ಬಸ್ನಲ್ಲಿದ್ದ 30 ಜನರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಖಾಸಗಿ ಅಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಸರಣಿ ಅಪಘಾತದಿಂದ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ದುರ್ಗಾಂಬಾ, ಶಿವಗಂಗಾ, ದ್ಯಾನ್ ಹೆಸರಿನ ಖಾಸಗಿ ಬಸ್ಸುಗಳು ತುಮಕೂರು ಮಾರ್ಗವಾಗಿ ಬೆಂಗಳೂರು ಬರುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಲಾರಿಗೆ ಮೊದಲು ದ್ಯಾನ್ ಬಸ್ ಡಿಕ್ಕಿ ಹೊಡೆದಿದೆ. ದ್ಯಾನ್ ಬಸ್ ಹಿಂದೆಯೇ ದುರ್ಗಾಂಬಾ ಬಸ್ ಬರುತ್ತಿತ್ತು. ಈ ಅಪಘಾತವನ್ನು ಕಂಡ ದುರ್ಗಾಂಬಾ ಬಸ್ ಚಾಲಕ ಬಸ್ ಅನ್ನು ರಸ್ತೆ ಪಕ್ಕಕ್ಕೆ ನಿಲ್ಲಿಸಿದ್ದರು. ಆದರೆ ಹಿಂದೆ ಬರುತ್ತಿದ್ದ ಶಿವಗಂಗಾ ಬಸ್ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: ನೆಲಮಂಗಲ: ಚಲಿಸುತ್ತಿದ್ದ ಕಾರಿಗೆ ಆಕಸ್ಮಿಕ ಬೆಂಕಿ: ಓರ್ವ ವ್ಯಕ್ತಿ ಸಜೀವ ದಹನ
ಈ ಸರಣಿ ಅಪಘಾತದಲ್ಲಿ ಗಾಯಗೊಂಡ ಜನರನ್ನು ಏಳು ಆಂಬ್ಯುಲೆನ್ಸ್ಗಳ ಮುಖಾಂತರ ಅಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ಬಳಿಕ ಬಸ್ಗಳನ್ನು ಕ್ರೈನ್ ಬಳಸಿ ತೆರವು ಮಾಡಲಾಗಿದೆ.
ಬೀದರ್: ಕಾರು ಹರಿದು ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಬೀದರ್ ನಗರದ ಗುಂಪಾರಸ್ತೆಯಲ್ಲಿ ನಡೆದಿದೆ. ಬಸವಚೇತನ ಮೃತ ಮಗು. ಮೃತ ಬಸವಚೇತನ ಹಾರುಗೇರಿ ನಿವಾಸಿ ಸತೀಶ್ ಪಾಟೀಲ್ ಹಾಗೂ ಸಂಗಿತಾ ದಂಪತಿ ಪುತ್ರ. ಮಗುವಿನ ಮೇಲೆ ಕಾರು ಹರಿದ ಭಯಾನಕ ವಿಡಿಯೋ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಗಾಂಧಿಗಂಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:44 am, Wed, 27 December 23