ಕಿಡಿಗೇಡಿಗಳಿಂದ ಬೆಂಕಿ: ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಬೈಕ್ ಭಸ್ಮ
ನೆಲಮಂಗಲ: ಪೆಟ್ರೋಲ್ ಬಳಸಿ ಡಿಯೋ ಬೈಕಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಗರದ ಬಾಗಲಗುಂಟೆ ಬಳಿಯ ಶೆಟ್ಟಿಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಸೇರಿದ ಡಿಯೋ ಬೈಕ್ ಹಾಗು ಮನೆಗೆ ಹಾನಿಯಾಗಿದೆ. ಘಟನೆಯಲ್ಲಿ ಡಿಯೋ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಗೂ ಸಹ ಹಾನಿಯಾಗಿದೆ. ದಾಸರಹಳ್ಳಿಯ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಅವರಿಗೆ ಸೇರಿದ ಬೈಕ್ ಆಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ […]
ನೆಲಮಂಗಲ: ಪೆಟ್ರೋಲ್ ಬಳಸಿ ಡಿಯೋ ಬೈಕಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ನಗರದ ಬಾಗಲಗುಂಟೆ ಬಳಿಯ ಶೆಟ್ಟಿಹಳ್ಳಿಯಲ್ಲಿ ತಡರಾತ್ರಿ ನಡೆದಿದೆ. ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ಸೇರಿದ ಡಿಯೋ ಬೈಕ್ ಹಾಗು ಮನೆಗೆ ಹಾನಿಯಾಗಿದೆ.
ಘಟನೆಯಲ್ಲಿ ಡಿಯೋ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಮನೆಗೂ ಸಹ ಹಾನಿಯಾಗಿದೆ. ದಾಸರಹಳ್ಳಿಯ ಕಾಂಗ್ರೆಸ್ ಬ್ಲಾಕ್ ಸಮಿತಿ ಅಧ್ಯಕ್ಷ ನರಸಿಂಹ ಮೂರ್ತಿ ಅವರಿಗೆ ಸೇರಿದ ಬೈಕ್ ಆಗಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಉತ್ತರ ವಿಭಾಗದ ಡಿಸಿಪಿ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.