AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು ಮಹಾರಾಜರಿಂದ ರಕ್ಷಿಸಲ್ಪಟ್ಟಿದ್ದ ಹೆಣ್ಣು ಚಿರತೆ ದಿಢೀರ್ ಸಾವು

ಬಂಡೀಪುರ ಅರಣ್ಯದಲ್ಲಿ ತಾಯಿಯಿಂದ ಬೇರ್ಪಟ್ಟಿದ್ದ ಮರಿ ಚಿರತೆಯೊಂದು ಮೈಸೂರು ಮಹಾರಾಜರ ಕುಟುಂಬದ ಕಣ್ಣಿಗೆ ಬಿದ್ದಿತ್ತು. ಅಂದು, ರಕ್ಷಣೆ ಮಾಡಿದ್ದ ಮೈಸೂರು ಸಂಸ್ಥಾನದ ಕುಟುಂಬಸ್ಥರು ಶ್ಯಾಡೋ ಎಂದು ನಾಮಕರಣ ಮಾಡಿ ಮೈಸೂರು ಮೃಗಾಲಯಕ್ಕೆ ಹಸ್ತಾಂತರ ಮಾಡಿದ್ದರು. ಬಳಿಕ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಕಳುಹಿಸಿದ್ದರು. ಆದರೆ, ಇದೀಗ ಶ್ಯಾಡೋ ಚಿರತೆ ಮೃತಪಟ್ಟಿದೆ.

ಮೈಸೂರು ಮಹಾರಾಜರಿಂದ ರಕ್ಷಿಸಲ್ಪಟ್ಟಿದ್ದ ಹೆಣ್ಣು ಚಿರತೆ ದಿಢೀರ್ ಸಾವು
ಮೃತ ಚಿರತೆ
ರಾಮು, ಆನೇಕಲ್​
| Edited By: |

Updated on: Mar 07, 2025 | 8:01 AM

Share

ಆನೆಕಲ್​, ಮಾರ್ಚ್​ 07: 2011 ರಲ್ಲಿ ಮೈಸೂರು ಮಹಾರಾಜರ ಕುಟುಂಬದಿಂದ ಬಂಡೀಪುರ ಅರಣ್ಯದಲ್ಲಿ (Bandipur Forest) ಸಂರಕ್ಷಿಸಲ್ಪಟ್ಟು, ಬಳಿಕ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನಿಸಿದ್ದ ಶ್ಯಾಡೋ ಚಿರತೆ (Shadow leopard) ಪಬ್ಲಿಕ್ ಪ್ರೆಂಡ್ಲಿಯಾಗಿ ಪ್ರವಾಸಿಗರ ಆಕರ್ಷಣೆಯಾಗಿತ್ತು. ಹೀಗಾಗಿಯೇ ಮುಂಜಾಗ್ರತಾ ಕ್ರಮವಾಗಿ ಬಂಡಿಪುರದಿಂದ ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನದ ರೆಸ್ಕ್ಯೂ ಕೇಂದ್ರದಲ್ಲಿ ಹೆಣ್ಣು ಚಿರತೆ ಶ್ಯಾಡೋ ಅನ್ನು ಇರಿಸಲಾಗಿತ್ತು. ಆರೋಗ್ಯವಾಗಿದ್ದ ಚಿರತೆ ಶ್ಯಾಡೋ ದಿಢೀರ್ ಮೃತಪಟ್ಟಿದೆ. ಚಿರತೆ ಸಾವಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಅನನುಭವಿ ವೈದ್ಯರು ಮತ್ತು ಅಧಿಕಾರಿಗಳ ನಡುವಿನ ಭಿನ್ನಾಭಿಪ್ರಾಯಗಳು ಕಾರಣ ಎಂದು ಪ್ರಾಣಿ ಪ್ರಿಯರ ಆರೋಪವಾಗಿದೆ.

2 ಸಾವಿರಕ್ಕೂ ಅಧಿಕ ಅಪರೂಪದ ವ್ಯನ್ಯ ಜೀವಿಗಳ ತಾಣವಾಗಿರುವ ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ವರ್ಷಕ್ಕೆ 50 ಕೋಟಿ ರೂಪಾಯಿಗೂ ಅಧಿಕ ಹಣಸಂಗ್ರಹವಾಗುತ್ತಿದೆ. ಆದರೆ, ಪ್ರಾಣಿಗಳ ಪಾಲನೆ ಪೋಷಣೆಗಿರುವುದು ಓರ್ವ ವೈದ್ಯ ಮಾತ್ರ. ಅದು ಕೂಡ ಅನನುಭವಿ ಎನ್ನಲಾಗುತ್ತಿದೆ. ಎರಡು RFO ಮತ್ತು ಡೆಪ್ಯುಟಿ ಡೈರೆಕ್ಟರ್ ಹುದ್ದೆ ಖಾಲಿ ಇದೆ. DRFO ಗಳಿಗೆ ಹೆಚ್ಚುವರಿ ಜವಾಬ್ದಾರಿ ನೀಡಿ ಒತ್ತಡದಲ್ಲಿ ಕೆಲಸ ಮಾಡಿಸಲಾಗುತ್ತಿದೆ. ಅಲ್ಲದೆ 2024-25ನೇ ಸಾಲಿನಲ್ಲಿ 15 ಕೋಟಿಗೂ ಅಧಿಕ ಹಣವನ್ನು ಕಚೇರಿ (ಅಂದಾಜು 7ಕೋಟಿ) ಸೇರಿದಂತೆ ಅನಗತ್ಯ ಕಾಮಗಾರಿಗಳಿಗೆ ಹಣ ದುರ್ಬಳಕೆ ಮಾಡಲಾಗುತ್ತಿದೆ.

ಇದನ್ನೂ ನೋಡಿ: ಮನೆಗೆ ನುಗ್ಗಿ ನಾಯಿ ಹೊತ್ತೊಯ್ದಿದ್ದ ಚಿರತೆ

ಇದನ್ನೂ ಓದಿ
Image
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
Image
ಮರದ ಮೇಲೆ ಸಿಂಹ ಹಾಗೂ ಚಿರತೆಯ ಕಾದಾಟ
Image
ಬೆಂಗಳೂರಿಗೂ ಕಾಲಿಟ್ಟ ಚಿರತೆ: ಈ ಏರಿಯಾಕ್ಕೆ ಹೋಗಲು ಕ್ಯಾಬ್, ಆಟೋ ಹಿಂದೇಟು!
Image
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್​ನಲ್ಲಿ ಇಂದೂ ಪತ್ತೆಯಾಗದ ಚಿರತೆ

2000ಕ್ಕೂ ಅಧಿಕ ಪ್ರಾಣಿಗಳಿರುವ ಉದ್ಯಾನವನದಲ್ಲಿ ವರ್ಷಕ್ಕೆ ನೂರಕ್ಕೂ ಅಧಿಕ ಪ್ರಾಣಿಗಳು ಸಾಯುವುದು ಸರ್ವೆ ಸಾಮಾನ್ಯವಾಗಿದೆ. ಕಾಮಗಾರಿಗಳನ್ನು ಪ್ರಾಧಿಕಾರದ ಅನುಮತಿ ಪಡೆದು ನಡೆಸಲಾಗುತ್ತಿದೆ ಎಂದು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ ಸೂರ್ಯ ಸೇನ್ ಸಮರ್ಥಿಸಿಕೊಂಡಿದ್ದಾರೆ.

ಒಟ್ಟಿನಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ಅಪರೂಪದ ಪ್ರಾಣಿಗಳ ಆಶ್ರಯ ತಾಣ. ಪ್ರವಾಸಿಗರ ಅಚ್ಚುಮೆಚ್ಚಿನ ಪ್ರವಾಸಿ ತಾಣ. ಆದ್ರೆ, ಪ್ರಾಣಿಗಳು ಮತ್ತು ಪ್ರವಾಸಿಗರಿಗೆ ಪ್ರಿಯಾರಿಟಿ ನೀಡಬೇಕಿದ್ದ ಉದ್ಯಾನವನದ ಅಧಿಕಾರಿಗಳು ಕೋಟಿ ಕಾಮಗಾರಿಗಳಿಗೆ ಪ್ರಿಯಾರಿಟಿ ನೀಡುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಇನ್ನಾದರೂ ಅಪರೂಪದ ಪ್ರಾಣಿಗಳ ಪಾಲನೆ ಪೋಷಣೆಗೆ ಹೆಚ್ಚು ಗಮನ ನೀಡುತ್ತಾರಾ ಎಂಬುದನ್ನು ಕಾದುನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ