ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆಯಲು ಎಸ್​ಐಟಿ ಸಿದ್ಧತೆ: ಏರ್​ಪೋರ್ಟ್ ಭದ್ರತಾ ಪಡೆಗೆ ಪತ್ರ

ಹಾಸನ ಸಂಸದ ಪ್ರಜ್ವಲ್​​ ರೇವಣ್ಣ ಅವರದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ (Prajwal Revanna) ವಿದೇಶಕ್ಕೆ ಹೋಗಿ ತಲೆಮರೆಸಿಕೊಂಡಿದ್ದರು. ಇದೀಗ ಇಂದು(ಮೇ.30) ಮಧ್ಯರಾತ್ರಿ 12.30 ಕ್ಕೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದಾರೆ. ಈ ಹಿನ್ನಲೆ ಪ್ರಜ್ವಲ್​ ಬಂಧನಕ್ಕೆ ಎಸ್​ಐಟಿ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದಾರೆ. ಈಬ ಕುರಿತು ವಿವರ ಇಲ್ಲಿದೆ.

ಬೆಂಗಳೂರಿಗೆ ಆಗಮಿಸುತ್ತಿರುವ ಪ್ರಜ್ವಲ್ ರೇವಣ್ಣನನ್ನು ವಶಕ್ಕೆ ಪಡೆಯಲು ಎಸ್​ಐಟಿ ಸಿದ್ಧತೆ: ಏರ್​ಪೋರ್ಟ್ ಭದ್ರತಾ ಪಡೆಗೆ ಪತ್ರ
ಪ್ರಜ್ವಲ್​​ ರೇವಣ್ಣ ಬಂಧನಕ್ಕೆ ಎಸ್​ಐಟಿ ಸಿದ್ಧತೆ
Follow us
ನವೀನ್ ಕುಮಾರ್ ಟಿ
| Updated By: ಕಿರಣ್ ಹನುಮಂತ್​ ಮಾದಾರ್

Updated on: May 30, 2024 | 5:55 PM

ಬೆಂಗಳೂರು, ಮೇ.30: ಬೆಂಗಳೂರಿಗೆ ಇಂದು(ಮೇ.30) ಮಧ್ಯರಾತ್ರಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ(Prajwal Revanna) ಆಗಮಿಸುತ್ತಿದ್ದಾರೆ. ಈ ಹಿನ್ನಲೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸ್​ಐಟಿ(SIT)ತಂಡ ಬಂದಿದ್ದಾರೆ. ಮೊದಲು ವಿಮಾನ ಇಳಿದು ಇಮಿಗ್ರೇಷನ್​ಗೆ ಆಗಮಿಸುವ ಪ್ರಜ್ವಲ್ ರೇವಣ್ಣ, ಇಮಿಗ್ರೇಷನ್ ವೇಳೆಯೇ ಏರ್ಪೋರ್ಟ್ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ. ನಂತರ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಪೋಲೀಸರಿಗೆ ಒಪ್ಪಿಸಲಿದ್ದು, ಬಳಿಕ ಏರ್ಪೋರ್ಟ್ ಪೋಲೀಸರ ಮೂಲಕ ಎಸ್​ಐಟಿ ವಶಕ್ಕೆ ಪಡೆಯಲಿದೆ.

12:30 ಕ್ಕೆ ವಿಮಾನ ನಿಲ್ದಾಣಕ್ಕೆ ಆಗಮನ; ಏರ್​ಪೋರ್ಟ್ ಭದ್ರತಾ ಪಡೆಗೆ SIT ಅಧಿಕಾರಿಗಳು ಪತ್ರ

ಇನ್ನು ಮಧ್ಯರಾತ್ರಿ 12.30 ಕ್ಕೆ ಪ್ರಜ್ವಲ್​ ರೇವಣ್ಣ ಅವರು ಹತ್ತಿರುವ ವಿಮಾನ ಏರ್ಪೋರ್ಟ್​ಗೆ ಆಗಮಿಸಲಿದೆ. ಈ ವೇಳೆ ಏರ್ಪೋರ್ಟ್​ ರೀತಿ-ರಿವಾಜು ಮುಗಿಯುವುದಕ್ಕೆ ಕನಿಷ್ಠ 20 ರಿಂದ 30 ನಿಮಿಷ ಕಾಲಾವಕಾಶ ಇರಲಿದೆ. ನಂತರ ವಿಮಾನ ನಿಲ್ದಾಣದಿಂದ ಪ್ರಜ್ವಲ್ ಹೊರ ಬರಲಿದ್ದಾರೆ. ಈ ಹಿನ್ನಲೆ ಏರ್​ಪೋರ್ಟ್ ಟರ್ಮಿನಲ್ ಒಳಗೆ ತೆರಳಲು 8ರಿಂದ 10 ಅಧಿಕಾರಿಗಳಿಗೆ ಪಾಸ್ ನೀಡುವಂತೆ ಪತ್ರ ಏರ್​ಪೋರ್ಟ್ ಭದ್ರತಾ ಪಡೆಗೆ ಎಸ್ಐಟಿ ಅಧಿಕಾರಿಗಳು ಪತ್ರ ಬರೆದಿದ್ದಾರೆ.

ಇದನ್ನೂ ಓದಿ:ಪ್ರಜ್ವಲ್ ರೇವಣ್ಣ ಹಾಸಿಗೆ, ದಿಂಬನ್ನೇ ಕೊಂಡೊಯ್ದ ಎಸ್​ಐಟಿ!

ರಾತ್ರಿ 10ರ ಸುಮಾರಿಗೆ ವಿಮಾನ ನಿಲ್ದಾಣಕ್ಕೆ SIT ಅಧಿಕಾರಿಗಳ ಆಗಮನ

ಪಾಸ್ ನೀಡಿದ ನಂತರ ಅಂದರೆ ರಾತ್ರಿ 10 ಗಂಟೆಯ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ SIT ಅಧಿಕಾರಿಗಳು ಆಗಮಿಸಲಿದ್ದಾರೆ. ಈಗಾಗಲೇ ಅಧಿಕಾರಿಗಳ ಆಧಾರ್​ ಕಾರ್ಡ್ ಜೊತೆ ವಿವರಣೆ ನೀಡಿರುವ ಎಸ್​ಐಟಿ, ಪಾಸ್ ಮಾಡಿಕೊಡುವ ಕೆಲಸದಲ್ಲಿ ಏರ್ಪೋರ್ಟ್​ ಸಿಬ್ಬಂದಿ ನಿರತರಾಗಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಿಷ್ಟು

ಈ ಕುರಿತು ಶಿವಮೊಗ್ಗದಲ್ಲಿ ಮಾತನಾಡಿದ ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್, ‘ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬಂದ ತಕ್ಷಣ ಬಂಧಿಸಲಾಗುವುದು. ಅವರ ಬಂಧನಕ್ಕೆ ಈಗಾಗಲೇ ವಾರೆಂಟ್ ಸಿದ್ಧಪಡಿಸಲಾಗಿದೆ. ವಿಶೇಷ ತನಿಖಾ ತಂಡದ ಅಧಿಕಾರಿಗಳು ಮುಂದಿನ ಕ್ರಮಕೈಗೊಳ್ಳುತ್ತಾರೆ. ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಬರುತ್ತಿರುವ ಬಗ್ಗೆ ಮಾಹಿತಿಯಿದೆ. ಆದರೆ, ಬೆಂಗಳೂರಿಗೆ ಬಂದಾಗಲೇ ಖಚಿತವಾಗಲಿದೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ