ಬೆಂಗಳೂರು ಏರ್ಪೋರ್ಟ್ನಲ್ಲಿ ಸಿಕ್ಕಿಬಿತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ
ಕುವೈತ್, ದುಬೈ, ಅಬುದಾಬಿ, ಬ್ಯಾಂಕಾಕ್ನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಏಳು ಪ್ರಯಾಣಿಕರನ್ನು ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಇನ್ನು ಪ್ರಯಾಣಿಕರ ಬಳಿ ಒಟ್ಟು 3.9 ಕೋಟಿ ರೂ. ಮೌಲ್ಯದ 5 ಕೆಜಿ 135 ಗ್ರಾಂ ಚಿನ್ನ ಸಿಕ್ಕಿದೆ.
ಬೆಂಗಳುರು, (ನವೆಂಬರ್ 10): ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಯಾಣಿಕರು ಸಿಕ್ಕಿಬಿದ್ದಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ(Bengaluru Airport) ವಶಕ್ಕೆ ಪಡೆಯಲಾಗಿದೆ. ಕೆಂಪೇಗೌಡ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ 3.9 ಕೋಟಿ ರೂ. ಮೌಲ್ಯದ 5 ಕೆಜಿ 135 ಗ್ರಾಂ ಚಿನ್ನ ಸಿಕ್ಕಿದೆ. ಇನ್ನು ಈ ಸಂಬಂಧ 7 ಪ್ರಯಾಣಿಕರನ್ನು ವಶಕ್ಕೆ ಪಡೆದುಕೊಂಡು ತನಿಖೆ ನಡೆಸಿದ್ದಾರೆ.
ಕುವೈತ್, ದುಬೈ, ಅಬುದಾಬಿ, ಬ್ಯಾಂಕಾಕ್ನಿಂದ 7 ಜನ ಪ್ರಯಾಣಿಕರು ಒಳ ಉಡುಪು, ಮಹಿಳೆಯರ ಪರ್ಸ್, ಹ್ಯಾಂಡ್ಬ್ಯಾಗ್ನಲ್ಲಿ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದರು. ಅನುಮಾನಗೊಂಡ ಕೆಂಪೇಗೌಡ ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಪರಿಶೀಲನೆ ಮಾಡಿದಾಗ ಚಿನ್ನ ಪತ್ತೆಯಾಗಿದೆ.
ಇದನ್ನೂ ಓದಿ: ಬೆಂಗಳೂರು: ವಿಮಾನದಲ್ಲಿ ಮಹಿಳೆಯ ಖಾಸಗಿ ಅಂಗಾಂಗ ಮುಟ್ಟಿ ಸಹಪ್ರಯಾಣಿಕನಿಂದ ಕಿರುಕುಳ; ದೂರು ದಾಖಲು
ದರೋಡೆಕೋರರ ಬಂಧನ
ಬೆಂಗಳೂರು: ಹೆದ್ದಾರಿಯಲ್ಲಿ ದರೋಡೆಗೆ ಯತ್ನಿಸುತ್ತಿದ್ದ ಮೂವರು ಆರೋಪಿಗಳನ್ನು ನೆಲಮಂಗಲ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆ ಕಿರಣ್(24), ಮೋಟಗಾನಹಳ್ಳಿ ಮಹದೇವ್(23), ಬೆಂಗಳೂರಿನ ಮಾಳಗಾಳ ನಿವಾಸಿ ರಕ್ಷಿತ್(23) ಬಂಧಿತರು. ಇನ್ನು ಪರಾರಿಯಾದ ನವೀನ್, ಪರ್ವೇಜ್ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.
ಬಂಧತ ಆರೋಪಿಗಳು ಹೆದ್ದಾರಿಯಲ್ಲಿ ಜನರನ್ನು ಹೆದರಿಸಿ, ಬೆದರಿಸಿ ದರೋಡೆ ಮಾಡುತ್ತಿದ್ದರು. ಇನ್ನು ಬಂಧಿತರಿಂದ ಮಚ್ಚು,ಚಾಕು, ರಾಡು, ಖಾರದಪುಡಿ ಸೇರಿದಂತೆ 2 ಬೈಕ್ ಜಪ್ತಿ ಮಾಡಿದ್ದಾರೆ. ಈ ಬಗ್ಗೆ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:40 am, Fri, 10 November 23