AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಪೈಸ್​ಜೆಟ್ ಏರ್​ಲೈನ್ಸ್​ನ 3 ವಿಮಾನ ವಿಳಂಬ: ಬೆಂಗಳೂರು ಏರ್​​ಪೋರ್ಟ್​​​ನಲ್ಲಿ ಪ್ರಯಾಣಿಕರ ಪರದಾಟ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೈಸ್‌ ಜೆಟ್‌ನ ಮೂರು ವಿಮಾನಗಳ ಹಾರಾಟದಲ್ಲಿ ಭಾರೀ ವಿಳಂಬವಾದ ಘಟನೆ ನಡೆದಿದೆ. ತಾಂತ್ರಿಕ ದೋಷದಿಂದಾಗಿ ಬೋರ್ಡಿಂಗ್ ಪಾಸ್ ಸಹ ನೀಡದೆ ಸುಮಾರು 473 ಪ್ರಯಾಣಿಕರನ್ನು ಏರ್​ಪೋರ್ಟ್​ನಲ್ಲೇ ಗಂಟೆಗಟ್ಟಲೆ ಕಾಯಿಸಲಾಗಿದೆ. ಇದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಸ್ಪೈಸ್​ಜೆಟ್ ಏರ್​ಲೈನ್ಸ್​ನ 3 ವಿಮಾನ ವಿಳಂಬ: ಬೆಂಗಳೂರು ಏರ್​​ಪೋರ್ಟ್​​​ನಲ್ಲಿ ಪ್ರಯಾಣಿಕರ ಪರದಾಟ
ಪ್ರಯಾಣಿಕರ‌ ಪರದಾಟ
ನವೀನ್ ಕುಮಾರ್ ಟಿ.
| Edited By: |

Updated on: Oct 22, 2026 | 4:22 PM

Share

ಮುಖ್ಯಾಂಶಗಳು

  • ಸ್ಪೈಸ್ ಜೆಟ್ ಏರ್​ಲೈನ್ಸ್​ನ 3 ವಿಮಾನಗಳ ಹಾರಾಟದಲ್ಲಿ ವಿಳಂಬ
  • ತಾಂತ್ರಿಕ ಸಮಸ್ಯೆಯಿಂದ ಬೋರ್ಡಿಂಗ್ ಪಾಸ್ ಸಹ ನೀಡದೆ ವಿಳಂಬ
  • ಸ್ಪೈಸ್ ಜೆಟ್ ಏರ್​ಲೈನ್ಸ್​ ಸಿಬ್ಬಂದಿ ವಿರುದ್ಧ 473 ಪ್ರಯಾಣಿಕರ ಆಕ್ರೋಶ

ದೇವನಹಳ್ಳಿ, ಅಕ್ಟೋಬರ್​ 22: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ಏರ್​ಲೈನ್ಸ್​ನ 3 ವಿಮಾನಗಳ ಹಾರಾಟದಲ್ಲಿ ವಿಳಂಬ ಉಂಟಾಗಿದ್ದು, 473 ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ. ತಾಂತ್ರಿಕ ಸಮಸ್ಯೆಯಿಂದ ಬೋರ್ಡಿಂಗ್ ಪಾಸ್ ಸಹ ನೀಡದೆ, ಸಮರ್ಪಕ ಮಾಹಿತಿಯೂ ನೀಡದೆ ಗಂಟೆಗಟ್ಟಲೇ ಕಾಯಿಸಿದ್ದಾರೆಂದು ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಡೆದಿದ್ದೇನು?

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಡಬೇಕಿದ್ದ ಸ್ಪೈಸ್‌ ಜೆಟ್ ವಿಮಾನಗಳು ಭಾರೀ ವಿಳಂಬವಾಗಿದೆ. ಇನ್ನು ತಾಂತ್ರಿಕ ಸಮಸ್ಯೆಯಿಂದ ಬೋರ್ಡಿಂಗ್ ಪಾಸ್ ಕೂಡ ನೀಡಿಲ್ಲ. ಹೀಗಾಗಿ ನಿನ್ನೆ ರಾತ್ರಿಯಿಂದ ಕೆಂಪೇಗೌಡ ಏರ್​ಪೋರ್ಟ್​ನಲ್ಲೇ ಪ್ರಯಾಣಿಕರು ಪರದಾಡುವಂತಾಗಿದೆ.

ಇದನ್ನೂ ಓದಿ: ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನಕ್ಕೆ ಹಕ್ಕಿ ಡಿಕ್ಕಿ: ಸುರಕ್ಷಿತವಾಗಿ ಲ್ಯಾಂಡ್, ತಪ್ಪಿದ ಅನಾಹುತ

ಕೋಲ್ಕತ್ತಾ ಮತ್ತು ಮುಂಬೈಗೆ ಮೂರು ದೇಶೀಯ ವಿಮಾನಗಳು ತೆರಳಬೇಕಿತ್ತು. ಆದರೆ ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ನಿಗದಿತ ಸಮಯಕ್ಕಿಂತ ಮೂರು ಗಂಟೆಗೂ ಹೆಚ್ಚು ವಿಳಂಬ ಉಂಟಾಗಿದ್ದು, ಮೂರು ಹಸುಗೂಸು ಸೇರಿದಂತೆ ಒಟ್ಟು 473 ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ.

ಕೆಐಎಬಿಯಿಂದ ಕೋಲ್ಕತ್ತಾ, ಮುಂಬೈಗೆ ತೆರಳಬೇಕಿದ್ದ 3 ವಿಮಾನಗಳು ವಿಳಂಬ

SG-158 ಬೆಂಗಳೂರಿನಿಂದ ಕೋಲ್ಕತ್ತಾ: ಅಕ್ಟೋಬರ್ 21 ರಂದು ಸಂಜೆ 06:30ಕ್ಕೆ ಹೊರಡಬೇಕಿದ್ದ ಈ ವಿಮಾನದಲ್ಲಿ ಒಟ್ಟು 134 ಪ್ರಯಾಣಿಕರು ಪ್ರಯಾಣಿಸಬೇಕಿತ್ತು. ನಿಗದಿತ ಸಮಯಕ್ಕಿಂತ ಮೂರು ಗಂಟೆಗಳಿಗೂ ಹೆಚ್ಚು ವಿಳಂಬವಾಗಿದ್ದು, ಅಂದಾಜು ರಾತ್ರಿ 09:45ಕ್ಕೆ ವಿಮಾನ ಸಂಚಾರಕ್ಕೆ ಸಮಯ ನಿಗದಿಪಡಿಸಲಾಗಿದೆ.

LIVE TV

SG-647 ಬೆಂಗಳೂರಿನಿಂದ ಕೋಲ್ಕತ್ತಾ: ಒಂದು ಮಗು ಸೇರಿದಂತೆ 161 ಪ್ರಯಾಣಿಕರು ಈ ವಿಮಾನದ ಮೂಲಕ ಸಂಜೆ 07:45 ಗಂಟೆಗೆ ಹೊರಡಬೇಕಿತ್ತು. ಆದರೆ ಅಕ್ಟೋಬರ್ 21 ರಂದು ರಾತ್ರಿ ಅಂದಾಜು 10:20 ಗಂಟೆಗೆ ವಿಮಾನ ಟೇಕಾಪ್​​​​ಗೆ ಸಮಯ ನಿಗದಿಪಡಿಸಲಾಗಿದೆ. ಇದರಿಂದಾಗಿ ವಿಮಾನವು ಎರಡೂವರೆ ಗಂಟೆಗೂ ಹೆಚ್ಚು ಕಾಲ ವಿಳಂಬವಾಗಿದೆ.

SG-633 ಬೆಂಗಳೂರಿನಿಂದ ಮುಂಬೈ: ಈ ಫ್ಲೈಟ್​ ಅಕ್ಟೋಬರ್ 21 ರಂದು ರಾತ್ರಿ 11:45 ಗಂಟೆಗೆ ಕೆಂಪೇಗೌಡ ಏರ್​ಪೋರ್ಟ್​ನಿಂದ ಹೊರಡಬೇಕಿತ್ತು. ಆದರೆ ತಾಂತ್ರಿಕ ಸಮಸ್ಯೆ ಅಂತಾ ಅಕ್ಟೋಬರ್ 22 ರ ಬೆಳಗಿನ ಜಾವ 02:15 ಗಂಟೆಗೆ ಸಂಚಾರಕ್ಕೆ ಸಮಯ ನಿಗದಿಪಡಿಸಲಾಗಿದೆ. ಇದರಿಂದಾಗಿ ಪ್ರಯಾಣಿಕರು ತಡರಾತ್ರಿ ಎರಡೂವರೆ ಗಂಟೆಗಳ ಕಾಲ ಕೆಐಎಬಿನಲ್ಲಿ ಪರದಾಡಿದರು.

ಇದನ್ನೂ ಓದಿ: ಬೆಂಗಳೂರು ಏರ್‌ಪೋರ್ಟ್​ನಲ್ಲಿ ದಸರಾ ಸಂಭ್ರಮ: ರಂಗು ರಂಗಿನ ರಂಗೋಲಿಗೆ ಪ್ರಯಾಣಿಕರು ಫಿದಾ

ಇನ್ನು ಈ ಸಮಸ್ಯೆಗೆ ನಿರ್ದಿಷ್ಟ ಕಾರಣವಾದರೂ ಏನು ಎಂದು ಸ್ಪೈಸ್ ಜೆಟ್ ಏರ್​ಲೈನ್ಸ್​ ಸಂಸ್ಥೆಯು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ. ಇದು ಕೂಡ ನೂರಾರು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್​​ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ
ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು, ಗುಂಡಿಗಳ ಸಮಸ್ಯೆ
ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ಕೊಳಚೆ ನೀರು, ಗುಂಡಿಗಳ ಸಮಸ್ಯೆ
ಆಯುಧ ಪೂಜೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡ
ಆಯುಧ ಪೂಜೆ ದಿನ ಗಾಳಿಯಲ್ಲಿ ಗುಂಡು ಹಾರಿಸಿದ ಕಾಂಗ್ರೆಸ್ ಮುಖಂಡ