AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಬ್ಬಿಣ ಕಾಯಿಸಿ ಮೈಮೇಲೆ ಬರೆ ಎಳೆದ ಮಲತಾಯಿ, ನಡೆಯಲು ಆಗದೆ ಪುಟ್ಟ ಬಾಲಕಿ ನರಳಾಟ

ಮಗಳ ಮೇಲೆ ಮಲತಾಯಿ ಕ್ರೌರ್ಯ ಮೆರೆದ ಪ್ರಕರಣ ಬೆಂಗಳೂರು ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ಬೆಳಕಿಗೆ ಬಂದಿದೆ. ಕಬ್ಬಿಣ ಕಾಸಿ ಬರೆ ಎಳೆದು ಮಲತಾಯಿ ಚಿತ್ರಹಿಂಸೆ ನೀಡುತ್ತಿದ್ದಾಳೆ. ತನಗೆ ಯಾಕೆ ಚಿತ್ರಹಿಂಸೆ ನೀಡುತ್ತಿದ್ದಾಳೆ ಎಂದು ಗೊತ್ತಿಲ್ಲ. ಶಾಲೆಯಲ್ಲಿ ಹೊಡೆದಿದ್ದಾರೆ ಎಂದು ತಂದೆಗೆ ತಾಯಿ ಹೇಳುತ್ತಿದ್ದಾಳೆ ಎಂದು ಬಾಲಕಿ ಹೇಳಿಕೊಂಡಿದ್ದಾಳೆ.

ಕಬ್ಬಿಣ ಕಾಯಿಸಿ ಮೈಮೇಲೆ ಬರೆ ಎಳೆದ  ಮಲತಾಯಿ, ನಡೆಯಲು ಆಗದೆ ಪುಟ್ಟ ಬಾಲಕಿ ನರಳಾಟ
ಕಾಯಿಸಿದ ಕಬ್ಬಿಣದಿಂದ ಬರೆ ಎಳೆದು ಮಗಳ ಮೇಲೆ ಕ್ರೌರ್ಯ ಮೆರೆದ ಮಲತಾಯಿಯನ್ನು ಬಂಧಿಸಿದ ಮದನಾಯಕನಹಳ್ಳಿ ಠಾಣಾ ಪೊಲೀಸರು
ಬಿ ಮೂರ್ತಿ, ನೆಲಮಂಗಲ
ಬಿ ಮೂರ್ತಿ, ನೆಲಮಂಗಲ| Edited By: Rakesh Nayak Manchi|

Updated on:Feb 25, 2024 | 11:56 AM

Share

ನೆಲಮಂಗಲ, ಫೆ.25: ಕಾಯಿಸಿದ ಕಬ್ಬಿಣದಿಂದ ಬರೆ ಎಳೆದು ಮಗಳಿಗೆ ಮೇಲೆ ಮಲತಾಯಿಯೊಬ್ಬಳು ಕ್ರೌರ್ಯ ಮೆರೆದ ಪ್ರಕರಣ ಬೆಂಗಳೂರು (Bengaluru) ಉತ್ತರ ತಾಲೂಕಿನ ಅಂಚೆಪಾಳ್ಯದಲ್ಲಿ ನಡೆದಿದೆ. ಪತಿ ಕೆಲಸಕ್ಕೆ ತೆರಳಿದ ಬಳಿಕ ಮಹಿಳೆ ಏನೇನೋ ನೆಪವೊಡ್ಡಿ ಬಾಲಕಿಗೆ ಚಿತ್ರಹಿಂಸೆ ನೀಡುತ್ತಿದ್ದಳು.

ಶ್ರೀನಿವಾಸ್​ ಪವಿತ್ರಾ ಎಂಬಾಕೆಯನ್ನು ವಿವಾಹವಾಗಿದ್ದರು. ದಂಪತಿಗೆ ಒಬ್ಬಳು ಹೆಣ್ಣು ಮಗು ಕೂಡ ಜನಿಸಿದೆ. ಐದು ವರ್ಷಗಳ ಹಿಂದೆ ಪವಿತಾಳಿಗೆ ಶ್ರೀನಿವಾಸ್ ವಿಚ್ಛೇದನವನ್ನೂ ನೀಡಿದ್ದರು. ಬಳಿಕ ಮಮತಾ ಎಂಬಾಕೆಯನ್ನು ಎರಡನೇ ಮದುವೆಯಾಗಿದ್ದರು. ಆದರೆ, ಏನೇನೋ ನೆಪವೊಡ್ಡಿ ನಾಲ್ಕನೇ ತರಗತಿ ಓದುತ್ತಿರುವ ಬಾಲಕಿಗೆ ಮಮತಾ ಚಿತ್ರಹಿಂಸೆ ನೀಡಲು ಆರಂಭಿಸಿದ್ದಾಳೆ. ಬಾಲಕಿ ತುಂಬ ಹಠ ಮಾಡುತ್ತಾಳೆ ಎಂದು ಗಂಡನಿಗೆ ದೂರು ನೀಡುವ ಆಕೆ, ಪತಿ ಕೆಲಸಕ್ಕೆ ತೆರಳಿದ ನಂತರ ಮಗು ಎಂಬುದನ್ನು ಮರೆದು ಕಬ್ಬಿಣ ಕಾಯಿಸಿ ಬಾಲಕಿ ಮೈಮೇಲೆ ಬರೆ ಎಳೆದು ಅಮಾನವೀಯವಾಗಿ ವರ್ತಿಸುತ್ತಿದ್ದಾಳೆ.

ಇದನ್ನೂ ಓದಿ: ಧಾರವಾಡ: ಮಕ್ಕಳ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ

ಹಲ್ಲೆ ನಡೆಸಿ ಪತಿಗೆ ಸುಳ್ಳು ಹೇಳುವ ಮಲತಾಯಿ

ಮಲತಾಯಿಯ ಚಿತ್ರಹಿಂಸೆ ಬಗ್ಗೆ ಮಾತನಾಡಿದ ಬಾಲಕಿ, ನನ್ನ ಮೇಲೆ ತಾಯಿ ಯಾಕೆ ಹಲ್ಲೆ ಮಾಡುತ್ತಿದ್ದಾರೆ ಎಂದು ಗೊತ್ತಿಲ್ಲ. ಶಾಲೆಯಲ್ಲಿ ಹೊಡೆದಿದ್ದಾರೆ ಎಂದು ತಾಯಿ ತಂದೆಗೆ ಸುಳ್ಳು ಹೇಳುತ್ತಿದ್ದಾಳೆ. ಅಜ್ಜಿ ಮನೆಯಲ್ಲಿ ಇದ್ದಾಗಲೂ ಗಲಾಟೆ ಮಾಡಿ ಕಡೆದುಕೊಂಡು ಬರಲು ತಾಯಿ ಹೇಳಿದ್ದಳು ಎಂದು ಹೇಳಿದ್ದಾಳೆ.

ಮಲತಾಯಿ ಮಗಳ ಮೇಲೆ ಕ್ರೌರ್ಯ ಮೆರೆದ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆಯನ್ನು ನಿನ್ನೆ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತ ಬಾಲಕಿಯನ್ನು ನಿನ್ನೆ ರಾತ್ರಿ ನೆಲಮಂಗಲದ ದತ್ತು ಕೇಂದ್ರದಲ್ಲಿ ಇರಿಸಲಾಗಿತ್ತು. ಇದೀಗ ವಿಚಾರಣೆಗೆಂದು ಬಾಲಕಿಯನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:55 am, Sun, 25 February 24

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್