ಲಾಲ್‌ಬಾಗ್‌ನ ಕೆಂಪೇಗೌಡ ಗೋಪುರದ ಮೇಲೆ ಪಾಕಿಸ್ತಾನ: ಫೋಟೋ ಎಡಿಟ್ ಮಾಡಿದ ವಿದ್ಯಾರ್ಥಿ ಅರೆಸ್ಟ್

ಬೆಂಗಳೂರಿನ ಲಾಲ್‌ಬಾಗ್​ಗೆ ಭೇಟಿ ಕೊಟ್ಟಿದ್ದ ಮುಸ್ತಾಫ ಅಲ್ಲಿನ ಕೆಂಪೇಗೌಡ ಗೋಪುರದ ಫೋಟೋ ಕ್ಲಿಕ್ಕಿಸಿಕೊಂಡಿದ್ದ. ಬಳಿಕ ಪಿಜಿಗೆ ಬಂದು ಅದನ್ನು ಎಡಿಟ್ ಮಾಡಿ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ.

ಲಾಲ್‌ಬಾಗ್‌ನ ಕೆಂಪೇಗೌಡ ಗೋಪುರದ ಮೇಲೆ ಪಾಕಿಸ್ತಾನ: ಫೋಟೋ ಎಡಿಟ್ ಮಾಡಿದ ವಿದ್ಯಾರ್ಥಿ ಅರೆಸ್ಟ್
ಸಾಂದರ್ಭಿಕ ಚಿತ್ರImage Credit source: NDTV
Follow us
TV9 Web
| Updated By: ಆಯೇಷಾ ಬಾನು

Updated on:Sep 22, 2022 | 11:51 AM

ನೆಲಮಂಗಲ: ವಿಧ್ಯಾರ್ಥಿಯೊಬ್ಬ ಗೊಪುರದ ಮೇಲೆ ಪಾಕಿಸ್ತಾನದ ಬಾವುಟದ ಫೊಟೊ ಎಡಿಟ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಸ್ಟೆಟಸ್ ಹಾಕಿಕೊಂಡು ರಾಷ್ಟ್ರದ್ರೋಹ ವೆಸಗಿ ಇದೀಗ ಪೊಲೀಸರ ಅಥಿತಿಯಾಗಿದ್ದಾನೆ. ಲಾಲ್‌ಬಾಗ್‌ನ ಕೆಂಪೇಗೌಡ ಗೋಪುರದ ಮೇಲೆ ಪಾಕಿಸ್ತಾನ ಫೋಟೋ ಎಡಿಟ್ ಮಾಡಿ ಸೋಶಿಯಲ್ ಮೀಡಿಯಾ ಸ್ಟೇಟಸ್ ಹಾಕಿದ್ದ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಗುಲಾಮ್ ಮುಸ್ತಾಫ (19) ಬಂಧಿತ ಆರೋಪಿ.

ಬೆಂಗಳೂರು ಗ್ರಾಮಾಂತರ ನೆಲಮಂಗಲ ಸಮೀಪವಿರುವ ಸೊಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪಶ್ಚಿಮ ಬಂಗಾಳ ಮೂಲದ ಗುಲಾಮ್ ಮುಸ್ತಾಫ್ (19) ಎಂಬ ವಿದ್ಯಾರ್ಥಿ ಖಾಸಗಿ ಕಾಲೇಜಿನಲ್ಲಿ ಬಿ.ಫಾರ್ಮ್ ವ್ಯಾಸಂಗ ಮಾಡುತ್ತಿದ್ದು, ಚಿಕ್ಕಬಾಣವಾರದ ಪಿಜಿಯೊಂದರಲ್ಲಿ ವಾಸವಾಗಿದ್ದ. ನಿನ್ನೆ ಈತ ಲಾಲ್‌ಬಾಗ್‌ನ ಕೆಂಪೇಗೌಡ ಗೋಪುರ ಹಿಂದೆ ಬರುವಂತೆ ಫೋಟೋ ತೆಗೆದುಕೊಂಡು ಫೋಟೋದಲ್ಲಿ ಗೊಪುರದ ಮೇಲೆ ಪಾಕಿಸ್ತಾನ್ ಬಾವುಟ ಎಡಿಟ್ ಮಾಡಿ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟಿದ್ದ. ಫೋಟೋ ವೈರಲ್ ಹಾಗುತ್ತಿದ್ದಂತೆ ಈತನ ಸ್ನೇಹಿತರು ನೋಡಿ ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ಮಾಹಿತಿ ಸಿಗುತ್ತಿದ್ದಂತೆ ಆತನನ್ನು ಹಿಡಿದು ಫೋಟೋ ಡಿಲಿಟ್ ಮಾಡಿಸಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು ಘಟನೆ ಕುರಿತಂತೆ ಪಾಕಿಸ್ತಾನ ಧ್ವಜ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ ಗುಲಾಮ್ ಮುಸ್ತಾಫ ಮೇಲೆ 153A ಅಡಿ ಕೋಮುಗಳ ನಡುವೆ ಸಾಮರಸ್ಯ ಹಾಳುಮಾಡುತ್ತಿದ್ದ ಎನ್ನುವ ಪ್ರಕರಣವನ್ನು ಸೊಲದೇವನಹಳ್ಳಿ ಠಾಣೆ ಪೊಲೀಸರು ದಾಖಲಿಸಿಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.

ಮಂಗಳೂರು ಸೇರಿ ದೇಶಾದ್ಯಂತ ಪಿಎಫ್​ಐ, ಎಸ್​ಡಿಪಿಐ ಕಚೇರಿಗಳ ಮೇಲೆ ಎನ್​ಐಎ ದಾಳಿ

ಮಂಗಳೂರು: ರಾಷ್ಟ್ರೀಯ ತನಿಖಾ ದಳವು (National Investigation Agency – NIA) ನಗರದ ನೆಲ್ಲಿಕಾಯಿ ರಸ್ತೆಯಲ್ಲಿರುವ ಪಿಎಫ್​ಐ ಕಚೇರಿ (Popular Front of India – PFI) ಮೇಲೆ ಗುರುವಾರ ನಸುಕಿನ 3.30ರ ವೇಳೆಯಲ್ಲಿ ದಾಳಿ ನಡೆಸಿದೆ. ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು ಇದೀಗ ಕಚೇರಿಗೆ ಪ್ರವೇಶಿಸಿದ್ದಾರೆ. ದಾಳಿಯ ನಿಖರ ಕಾರಣ ತಿಳಿದುಬಂದಿಲ್ಲ. ಕೇರಳ, ಉತ್ತರ ಪ್ರದೇಶ, ಆಂಧ್ರ ಪ್ರದೇಶ ಸೇರಿದಂತೆ ದೇಶದ ವಿವಿಧೆಡೆ ಇರುವ ಎಸ್​ಡಿಪಿಐ ಕಚೇರಿಗಳ (Social Democratic Party of India – SDPI) ಮೇಲೆಯೂ ದಾಳಿ ನಡೆದಿದೆ. ಎಸ್​ಡಿಪಿಐ ಜಿಲ್ಲಾ ಘಟಕದ ಅಧ್ಯಕ್ಷ ಅಬೂಬಕರ್ ಕುಳಾಯಿ ಸೋದರನ ಮನೆಗೂ ಅಧಿಕಾರಿಗಳು ಪ್ರವೇಶಿಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ಎನ್​ಐಎ ತನಿಖೆ ನಡೆಸುತ್ತಿದೆ. ಮಂಗಳೂರಿನ ಸ್ಥಳೀಯ ಪೊಲೀಸರು ಸಹ ರಸ್ತೆಯಲ್ಲಿ ಉಪಸ್ಥಿತರಿದ್ದು ಭದ್ರತೆ ಒದಗಿಸಿದ್ದಾರೆ.

ಎನ್​ಐಎ ದಾಳಿ ಖಂಡಿಸಿ ಪಿಎಫ್​ಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನೆಲ್ಲಿಕಾಯಿ ರಸ್ತೆಯಲ್ಲಿ ಸಂಚಾರವನ್ನು ಪೊಲೀಸರು ನಿರ್ಬಂಧಿಸಿದ್ದಾರೆ. ಅರೆಮೀಸಲು ಪಡೆಯಿಂದ ಕಟ್ಟೆಚ್ಚರ ವಹಿಸಲಾಗಿದೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 10:26 am, Thu, 22 September 22

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!