AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಅತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಉತ್ತರ ತಾಲೂಕಿನ ಮದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನೈಸ್ ಸಂಸ್ಥೆಯ ಭದ್ರತಾ ಸಿಬ್ಬಂದಿಯಾಗಿರುವ ವ್ಯಕ್ತಿ ರೇಷನ್​ ತರಲು ಹೋದಾಗ ಮಗ ಗುಂಡು ಹಾರಿಸಿಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾನೆ.

ಬೆಂಗಳೂರು: ಎದೆಗೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ
ಎದೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
ಬಿ ಮೂರ್ತಿ, ನೆಲಮಂಗಲ
| Edited By: Rakesh Nayak Manchi|

Updated on:Jan 04, 2024 | 12:51 PM

Share

ನೆಲಮಂಗಲ, ಜ.4: ಎದೆ ಭಾಗಕ್ಕೆ ಗುಂಡು ಹಾರಿಸಿಕೊಂಡು ವಿದ್ಯಾರ್ಥಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಬೆಂಗಳೂರು (Bengaluru) ಉತ್ತರ ತಾಲೂಕಿನ ಭವಾನಿನಗರದಲ್ಲಿ ನಡೆದಿದೆ. ವಿಶು ಉತ್ತಪ್ಪ (19) ಆತ್ಮಹತ್ಯೆ ಮಾಡಿಕೊಂಡ ಬಿಇ ಪ್ರಥಮ ವರ್ಷದ ವಿದ್ಯಾರ್ಥಿ. ತಂದೆಯ ಗನ್​ನಿಂದ ಫೈರ್ ಮಾಡಿ ವಿಶು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕೊಡಗು ಮೂಲದ ತಮ್ಮಯ್ಯ ಎಂಬವರು ನೈಸ್​ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿ ಆಗಿದ್ದು, ಕಳೆದ 15 ವರ್ಷದಿಂದ ಮಾದನಾಯಕನಹಳ್ಳಿ ಪೊಲೀಸ್​ ಠಾಣಾ ವ್ಯಾಪ್ತಿಯ ಭವಾನಿನಗರದಲ್ಲಿ ಕುಟುಂಬ ಸಹಿತ ವಾಸವಿದ್ದರು.

ಇದನ್ನೂ ಓದಿ: ಚಿಕ್ಕಮಗಳೂರು: ಬಸ್ ಚಾಲಕ, ವಿದ್ಯಾರ್ಥಿನಿ ಆತ್ಮಹತ್ಯೆ; ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ತಂದೆ ರೇಷನ್​ ತರಲು ಹೋದಾಗ ವಿಶು ಗನ್​​​ನಿಂದ​ ಫೈಯರ್​ ಮಾಡಿಕೊಂಡು ತಂದೆಗೆ ಕರೆ ಮಾಡಿದ್ದಾನೆ. ನಾನು ಇನ್ನು ಮುಂದೆ ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾನೆ. ಗಾಬರಿಗೊಂಡ ತಂದೆ ಮನೆಗೆ ದೌಡಾಯಿಸಿ ಬಂದು ನೋಡಿದಾಗ ವಿಶು ರಕ್ತದ ಮಡುವಿನಲ್ಲಿ ಕುಸಿದು ಬಿದ್ದಿದ್ದ. ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ವಿಶು ಉತ್ತಮ ಮೃತಪಟ್ಟಿದ್ದಾನೆ.

ಡಬಲ್ ಬ್ಯಾರಲ್ ಗನ್ ವಶಕ್ಕೆ, ಪ್ರಕರಣ ಪೀಣ್ಯ ಠಾಣೆಗೆ ವರ್ಗಾವಣೆ

ಆತ್ಮಹತ್ಯೆಗೆ ಬಳಕೆ ಮಾಡಿದ ಡಬಲ್ ಬ್ಯಾರಲ್ ಗನ್ ಅನ್ನು ಮಾದನಾಯಕನಹಳ್ಳಿ ಠಾಣಾ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೀಣ್ಯಾ ಪೊಲೀಸ್ ಠಾಣೆ ವ್ಯಾಪ್ತಿಗೆ ಮನೆ ಸೇರುವುದರಿಂದ ಪ್ರಕರಣವನ್ನು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಿಂದ ಪೀಣ್ಯಾ ಪೊಲೀಸ್ ಠಾಣೆಗೆ ಕೇಸ್ ವರ್ಗಾವಣೆ ಮಾಡಲು ಮಾದನಾಯಕನಹಳ್ಳಿ ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ.

ಆತ್ಮಹತ್ಯೆ ಸಹಾಯವಾಣಿ

ಕಾರಣ ಯಾವುದೇ ಇರಲಿ, ಆತ್ಮಹತ್ಯೆಯ ನಿರ್ಧಾರ ಬೇಡ. ಆತ್ಮಹತ್ಯೆಯ ಭಾವನೆಗಳು ಮನಸ್ಸಿನಲ್ಲಿ ಸುಳಿಯುತ್ತಿದ್ದರೆ ನಿಮ್ಮ ಆಪ್ತರೊಂದಿಗೆ ಮಾತನಾಡಿ. ಸಾಧ್ಯವಾಗದಿದ್ದರೆ ಆತ್ಮಹತ್ಯೆ ಸಹಾಯವಾಣಿಗೆ ಕರೆ ಮಾಡಿ. ಸಹಾಯವಾಣಿ ಸಂಖ್ಯೆ – 9152987821, ಆರೋಗ್ಯ ವಾಣಿ: 104, ಸಹಾಯ್ ಸಹಾಯವಾಣಿ: 080-25497777

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:53 am, Thu, 4 January 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ