Gitam University: ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು, 4 ತಿಂಗಳಲ್ಲಿ ಇದು ಮೂರನೇ ವಿದ್ಯಾರ್ಥಿ ಬಲಿ

ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ಸಾಲು ಸಾಲು ಸಾವು ಸಂಭವಿಸುತ್ತಿದೆ. ಮೊದಲನೆ ವರ್ಷದ ಬಿಟೆಕ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿ ನಿನ್ನೆ ಹಾಸ್ಟೆಲ್ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾನೆ. ಈ ಹಿಂದೆ ಕೂಡ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದರು. ನವೆಂಬರ್​ನಲ್ಲಿ ನೇಣು ಬಿಗಿದುಕೊಂಡು ಓರ್ವ ವಿದೇಶಿ‌ ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಕಳೆದ ಪೆಬ್ರವರಿ 06 ರಂದು ರೈಲಿಗೆ ಸಿಲುಕಿ ಓರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ.

Gitam University: ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಸಾವು, 4 ತಿಂಗಳಲ್ಲಿ ಇದು ಮೂರನೇ ವಿದ್ಯಾರ್ಥಿ ಬಲಿ
ಗೀತಂ ವಿಶ್ವವಿದ್ಯಾಲಯ
Edited By: ಆಯೇಷಾ ಬಾನು

Updated on: Mar 13, 2024 | 9:10 AM

ದೇವನಹಳ್ಳಿ, ಮಾರ್ಚ್​.13: ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಮೃತಪಟ್ಟ (Death) ಘಟನೆ ಬೆಂಗಳೂರು ಗ್ರಾ. ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯಿರುವ ಗೀತಂ ವಿಶ್ವವಿದ್ಯಾಲಯದಲ್ಲಿ (Gitam University)  ನಡೆದಿದೆ. ಆಂಧ್ರದ ಕರ್ನೂಲ್ ಮೂಲದ ದಾಸರಿ ಬ್ರಹ್ಮಸಾಯಿರೆಡ್ಡಿ ಎಂಬ ವಿದ್ಯಾರ್ಥಿ ನಿನ್ನೆ ರಾತ್ರಿ ಊಟ ಮಾಡಿದ ಬಳಿಕ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೊದಲನೆ ವರ್ಷದ ಬಿಟೆಕ್ ವ್ಯಾಸಾಂಗ ಮಾಡುತ್ತಿದ್ದ ದಾಸರಿ ಬ್ರಹ್ಮಸಾಯಿರೆಡ್ಡಿ, ರಾತ್ರಿ ಊಟ ಮಾಡಿ ತನ್ನ ಕೋಣೆಗೆ ಮರಳಿದ್ದ. ಈ ವೇಳೆ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ.

ಪ್ರತಿಷ್ಠಿತ ಗೀತಂ ವಿವಿಯಲ್ಲಿ ಸಾಲು ಸಾಲು ಆತ್ಮಹತ್ಯೆ

ಕಳೆದ ನಾಲ್ಕು ತಿಂಗಳಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ರಾತ್ರಿಯು ಓರ್ವ ವಿದ್ಯಾರ್ಥಿ ಅನುಮಾನಾಸ್ಪದ ರೀತಿಯಲ್ಲಿ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ. ನವೆಂಬರ್​ನಲ್ಲಿ ನೇಣು ಬಿಗಿದುಕೊಂಡು ಓರ್ವ ವಿದೇಶಿ‌ ವಿದ್ಯಾರ್ಥಿನಿ ಮೃತಪಟ್ಟಿದ್ದಳು. ಕಳೆದ ಪೆಬ್ರವರಿ 06 ರಂದು ರೈಲಿಗೆ ಸಿಲುಕಿ ಓರ್ವ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ ಇದೀಗ ಹಾಸ್ಟೆಲ್ ಮಹಡಿ ಮೇಲಿಂದ ಬಿದ್ದು ಆಂಧ್ರ ಮೂಲದ ಮತ್ತೋರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಪ್ರತಿಷ್ಠಿತ ಗೀತಂ ವಿವಿಯಲ್ಲಿ ಸಾಲು ಸಾಲು ಸಾವುಗಳು ಸಂಭವಿಸುತ್ತಿದ್ದು ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಆತಂಕ ಹೆಚ್ಚಾಗಿದೆ. ಮೆಲ್ನೋಟಕ್ಕೆ ಆತ್ಮಹತ್ಯೆಯಾದ್ರು ವಿವಿಯಲ್ಲಿ ಕಿರುಕುಳ ಮತ್ತು ಮಾದಕ ದ್ರವ್ಯಗಳ ಬಳಕೆ ಆರೋಪ ಕೇಳಿ ಬಂದಿದೆ. ಗಾಂಜಾ ಮತ್ತು ಡ್ರಗ್ಸ್ ಹೇರಳ ಮಾರಾಟದಿಂದ ವಿದ್ಯಾರ್ಥಿಗಳ ಸಾವು ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ: ಮಂಗಳೂರು: ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್‌ ದಾಳಿ ಪ್ರಕರಣ: ಕೇರಳದ ಇನ್ನಿಬ್ಬರು ಪೊಲೀಸ್ ವಶಕ್ಕೆ

ಯುವಕನ ಹುಚ್ಚಾಟಕ್ಕೆ 27 ನಿಮಿಷ ಮೆಟ್ರೋ ಸ್ಥಗಿತ

ಯುವಕನ ಹುಚ್ಚಾಟಕ್ಕೆ 27 ನಿಮಿಷ ಮೆಟ್ರೋ ಸೇವೆ ಸ್ಥಗಿತಗೊಂಡ ಪ್ರಸಂಗ ನಡೆದಿದೆ. ನಿನ್ನೆ ಮೈಸೂರು ರೋಡ್ ನಿಂದಚಲ್ಲಘಟ್ಟ ನಡುವಿನ ಮೆಟ್ರೋ ಸಂಚಾರ ಕೆಲಕಾಲ ಸ್ಥಗಿತಗೊಂಡಿತ್ತು. ಮೆಟ್ರೋ ವಾಯಡಕ್ಟ್ ನಲ್ಲಿ ಅಪರಿಚಿತ ವ್ಯಕ್ತಿ ನಡೆದುಕೊಂಡು ಹೋಗ್ತಿದ್ದ. ಇದನ್ನು ಗಮನಿಸಿದ ಅಧಿಕಾರಿಗಳು ಮೆಟ್ರೋ ಸೇವೆ ಸ್ಥಗಿತಗೊಳಿಸಿದ್ರು. ಮೆಟ್ರೋ ಹಳಿಗಳ ಬಳಿ ಹೈವೊಲ್ಟೇಜ್ ಕರೆಂಟ್ ಇರೋದ್ರಿಂದ ಪವರ್ ಆಫ್ ಮಾಡಿಸಿ ಮೆಟ್ರೋ ಸೇವೆ ಸ್ಥಗಿತ ಗೊಳಿಸಿದ್ರು. ಮದ್ಯಾಹ್ನ 3ರಿಂದ 3.27 ರವರೆಗೆ ಮೆಟ್ರೋ ಸೇವೆ ಸ್ಥಗಿತಗೊಳಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
Follow Us