ಸ್ಕೈವಾಕ್ ನಿರ್ಮಾಣಕ್ಕೆ ಆಗ್ರಹಿಸಿ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳಿಂದ ಧರಣಿ: ಸ್ಥಳಕ್ಕೆ ಪೊಲೀಸರು, ತಹಶೀಲ್ದಾರ್ ಭೇಟಿ
ಸ್ಕೈವಾಕ್ ಇಲ್ಲದ ಕಾರಣ ಇಲ್ಲಿ ಪದೇ ಪದೇ ಅಪಘಾತ ಸಂಭವಿಸ್ತಿವೆ. ಈ ಸಾವಿಗೆ ಯಾರು ಹೊಣೆ. ಹೆದ್ದಾರಿ ದಾಟುವ ವೇಳೆ ಅಪಘಾತಗಳಿಗೆ ಅಮಾಯಕರು ಬಲಿಯಾಗ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ದೇವನಹಳ್ಳಿ: ಸ್ಕೈವಾಕ್ ನಿರ್ಮಿಸುವಂತೆ ಆಗ್ರಹಿಸಿ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಹಾಗೂ ಪ್ರೋಫೆಸರ್ಗಳಿಂದ ಧರಣಿ ನಡೆಸಲಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿರುವ ಎಂವಿಜೆ ಮೆಡಿಕಲ್ ಕಾಲೇಜು ವಿದ್ಯಾರ್ಥಿಗಳು ಬೆಂಗಳೂರು-ಕೋಲಾರ ರಾಷ್ಟ್ರೀಯ ಹೆದ್ದಾರಿ ತಡೆದು ಧರಣಿ ನಡೆಸುತ್ತಿದ್ದಾರೆ.
ಸ್ಕೈವಾಕ್ ಇಲ್ಲದ ಕಾರಣ ಇಲ್ಲಿ ಪದೇ ಪದೇ ಅಪಘಾತ ಸಂಭವಿಸ್ತಿವೆ. ಈ ಸಾವಿಗೆ ಯಾರು ಹೊಣೆ. ಹೆದ್ದಾರಿ ದಾಟುವ ವೇಳೆ ಅಪಘಾತಗಳಿಗೆ ಅಮಾಯಕರು ಬಲಿಯಾಗ್ತಿದ್ದಾರೆ ಎಂದು ಆಕ್ರೋಶ ಹೊರ ಹಾಕಿದ್ದಾರೆ. ಈ ಕೂಡಲೇ ಸ್ಕೈವಾಕ್ ನಿರ್ಮಿಸುವಂತೆ ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ಸದ್ಯ ಸ್ಥಳಕ್ಕೆ ಹೊಸಕೋಟೆ ಪೊಲೀಸರು ಮತ್ತು ತಹಶೀಲ್ದಾರ್ ಭೇಟಿ ನೀಡಿ ವಿದ್ಯಾರ್ಥಿಗಳ ಮನವೊಲಿಕೆಗೆ ಯತ್ನಿಸುತ್ತಿದ್ದಾರೆ.
ಇದನ್ನೂ ಓದಿ: ದಾವಣಗೆರೆ: ಮಿಠಾಯಿಗಾಗಿ ಹೋಯ್ತು ಉದ್ಯಮಿಯ ಪ್ರಾಣ; ನಾಲ್ವರು ಆರೋಪಿಗಳ ಬಂಧನ
Published On - 12:02 pm, Fri, 13 August 21