AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್‌ ತಪಾಸಣೆಯಲ್ಲಿ ಸಿಕ್ಕಿಬಿದ್ದ ಡ್ರೈವರ್ ಲಾರಿಯಲ್ಲೇ ನೇಣಿಗೆ ಶರಣು!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಆರೋಪದ ಮೇಲೆ ದಂಡ ವಿಧಿಸಿದ್ದು, ಬಳಿಕ ಲಾರಿಯನ್ನು ಸೀಜ್ ಮಾಡಿ ಪೊಲೀಸ್ ಠಾಣೆಗೆ ಎಳೆದೊಯ್ದಿದ್ದಾರೆ. ಆದ್ರೆ, ಸೀಜ್ ಮಾಡಿದ್ದ ಲಾರಿಯೊಳಗೆ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅಷ್ಟಕ್ಕೂ ಯಾರು ಡ್ರೈವರ್? ಈ ಘಟನೆ ಯಾವ ಠಾಣೆಯಲ್ಲಿ ನಡೆದಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ಬೆಂಗಳೂರು ಪೊಲೀಸರ ಡ್ರಿಂಕ್ & ಡ್ರೈವ್‌ ತಪಾಸಣೆಯಲ್ಲಿ ಸಿಕ್ಕಿಬಿದ್ದ ಡ್ರೈವರ್ ಲಾರಿಯಲ್ಲೇ ನೇಣಿಗೆ ಶರಣು!
ಡ್ರೈವರ್ ಆತ್ಮಹತ್ಯೆ
ಪ್ರದೀಪ್​ ಚಿಕ್ಕಾಟಿ
| Edited By: |

Updated on: Apr 05, 2026 | 5:20 PM

Share

ಬೆಂಗಳೂರು, (ಏಪ್ರಿಲ್ 05): ಚಾಲಕನೋರ್ವ ಲಾರಿಯೊಳಗೆ (Lorry Driver) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಜೆ.ಪಿ.ನಗರದಲ್ಲಿ ನಡೆದಿದೆ. ಷಣ್ಮುಗ ಮೃತ ಲಾರಿ ಚಾಲಕ. ಪೊಲೀಸರು ಡ್ರಿಂಗ್ ಆ್ಯಂಡ್ ಡ್ರೈವ (Drink And Drive )ತಪಾಸಣೆ ವೇಳೆ ಷಣ್ಮುಗ ಮದ್ಯಪಾನ ಮಾಡಿರುವುದು ಪತ್ತೆಯಾಗಿದೆ. ಹೀಗಾಗಿ ಪೊಲೀಸರು, ಚಾಲಕ ಷಣ್ಮುಗಗೆ ದಂಡ ವಿಧಿಸಿ ಬಳಿಕ ಲಾರಿಯನ್ನು ಜೆ.ಪಿ.ನಗರ ಠಾಣೆಗೆ ಎಳೆದೊಯ್ದಿದ್ದಾರೆ. ಆದ್ರೆ, ಷಣ್ಮುಗ ಠಾಣೆಯ ಬಳಿ ನಿಲ್ಲಿಸಿದ್ದ ಲಾರಿಯಲ್ಲೇ ನೇಣು ಬಿಗಿದುಕೊಂಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಘಟನೆಯಿಂದ ಮನನೊಂದು ಚಾಲಕ, ತಡರಾತ್ರಿ ಈ ದುರಂತ ನಿರ್ಧಾರ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.

ನಿನ್ನೆ (ಏಪ್ರಿಲ್ 04) ರಾತ್ರಿ ಜೆಪಿ ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ತಪಾಸಣೆ (Drink and Drive Checking) ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕ ಷಣ್ಮುಗ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಪೊಲೀಸರಿಗೆ ಅನುಮಾನ ಬಂದಿದೆ. ಕೂಡಲೇ ಆತನನ್ನು ತಡೆದ ಪೊಲೀಸರು ಬ್ರೀತ್ ಅನಲೈಸರ್ ಮೂಲಕ ತಪಾಸಣೆ ನಡೆಸಿದಾಗ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ. ಇದಾದ ನಂತರ ಪೊಲೀಸರು ನಿಯಮದಂತೆ ಷಣ್ಮುಗನಿಗೆ ಭಾರೀ ಮೊತ್ತದ ದಂಡ (Fine) ವಿಧಿಸಿದ್ದಾರೆ. ಅಲ್ಲದೆ, ಮದ್ಯದ ಅಮಲಿನಲ್ಲಿದ್ದ ಚಾಲಕನಿಗೆ ವಾಹನ ಚಲಾಯಿಸಲು ಬಿಡದ ಪೊಲೀಸರು, ಲಾರಿಯನ್ನು ವಶಕ್ಕೆ ಪಡೆದು ಜೆಪಿ ನಗರ ಪೊಲೀಸ್ ಠಾಣೆಗೆ ಎಳೆದೊಯ್ದಿದ್ದರು. ಆದ್ರೆ, ಚಾಲಕ ಷಣ್ಮುಗ ಅದೇ ಲಾರಿಯಲ್ಲಿ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿದ್ದಾನೆ.

ಇದನ್ನೂ ಓದಿ: ಟ್ರೆಕ್ಕಿಂಗ್​ಗೆ ತೆರಳಿದ್ದ ಕೇರಳದ ಯುವತಿ ಮಡಿಕೇರಿಯಲ್ಲಿ ನಾಪತ್ತೆ: ಮೂರು ದಿನಗಳಾದರೂ ಆಗಿಲ್ಲ ಪತ್ತೆ!

ಮದ್ಯಪಾನದ ಅಮಲು ಹಾಗೂ ಪೊಲೀಸರು ದಂಡ ಹಾಕಿದದ್ದರಿಂದ ಮನನೊಂದು ತಡರಾತ್ರಿ ಲಾರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇಂದು (ಏಪ್ರಿಲ್ 05) ಬೆಳಿಗ್ಗೆ ಲಾರಿಯೊಳಗೆ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ UDR ಕೇಸ್ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಹುಲಿ ಫ್ಯಾಮಿಲಿ ದರ್ಶನ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ದೆಹಲಿಯಲ್ಲಿ ನಕಲಿ ಔಷಧಿಗಳ ತಯಾರಿಸುವ ದಂಧೆ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ: ಸ್ಪೆಷಲ್ ವಿಡಿಯೋ ಹಂಚಿಕೊಂಡ ವಿಜಯ್ ದೇವರಕೊಂಡ
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಪಿಸ್ತೂಲ್ ಹಿಡಿದು ಹೋದ ವ್ಯಕ್ತಿ, ಟ್ರಾಫಿಕ್ ಜಾಮ್ ಫುಲ್ ಕ್ಲಿಯರ್
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ಈ ವಾರ ಈ ರಾಶಿಗೆ ಆದಾಯದಲ್ಲಿ ಏರಿಕೆ ಮತ್ತು ಅದೃಷ್ಟ ಕೂಡಿಬರಲಿದೆ
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
ದಾವಣಗೆರೆ ಬೈಎಲೆಕ್ಷನ್​​: ಅಸಮಾಧಾನ ಆರೋಪಕ್ಕೆ ಜಮೀರ್​​ ಫಸ್ಟ್​​ ರಿಯಾಕ್ಷನ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
47ನೇ ವಯಸ್ಸಿನಲ್ಲಿ ನಟಿ ಜ್ಯೋತಿಕಾ ವರ್ಕೌಟ್ ಹೇಗಿದೆ ನೋಡಿ; ವಿಡಿಯೋ ವೈರಲ್
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಬಂಡೀಪುರ ಸಫಾರಿಗೆ ಹೋದ ಪ್ರವಾಸಿಗರಿಗೆ ಡಬಲ್ ಧಮಾಕ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಕಾರು ನಿಲ್ಲಿಸಲು ಸಹಾಯ ಮಾಡಲು ಹೋಗಿ ಸಾವಿನ ಮನೆ ಕದ ತಟ್ಟಿದ ಮಹಿಳೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ
ಮಲಗಿದ್ದ ನಾಯಿ ಮೇಲೆ ದಾಳಿ ಮಾಡಿದ ಚಿರತೆ! ಸಿಸಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ