ಆನೇಕಲ್: ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು

Bus Accident: ಸರ್ವೀಸ್ ರೋಡ್ ನಲ್ಲಿ ಚಲಿಸುತ್ತಿದ್ದ ಬೈಕ್ ಗೆ ತಮಿಳುನಾಡು ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ.

ಆನೇಕಲ್: ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು
ಆನೇಕಲ್: ಬೆಂಗಳೂರು-ಕೃಷ್ಣಗಿರಿ ಹೆದ್ದಾರಿಯಲ್ಲಿ ದಂಪತಿ ಮೇಲೆ ಹರಿದ ಬಸ್, ಸ್ಥಳದಲ್ಲೇ ಮಹಿಳೆ ಸಾವು
Follow us
TV9 Web
| Updated By: ಆಯೇಷಾ ಬಾನು

Updated on: Mar 16, 2022 | 3:57 PM

ಬೈಕ್ ಮೇಲೆ ತೆರಳುತ್ತಿದ್ದ ದಂಪತಿ ಮೇಲೆ ಬಸ್ ಹರಿದು ಸ್ಥಳದಲ್ಲೇ ಮಹಿಳೆ ಮೃತಪಟ್ಟಿದ್ದರೆ, ಗಾಯಗೊಂಡ ಗಂಡನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರು – ಕೃಷ್ಣಗಿರಿ ಹೈವೆಯಲ್ಲಿ ಘಟನೆ ನಡೆದಿದೆ. ಸರ್ವೀಸ್ ರೋಡ್ ನಲ್ಲಿ ಚಲಿಸುತ್ತಿದ್ದ ಬೈಕ್ ಗೆ ತಮಿಳುನಾಡು ಸಾರಿಗೆ ಇಲಾಖೆ ಬಸ್ ಡಿಕ್ಕಿ ಹೊಡೆದಿದೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ. ಮಹಿಳೆಯ ಶವ ದಾರಿಯಲ್ಲಿಯೇ ಬಹಳ ಹೊತ್ತು ಇತ್ತು. ಅಂಬುಲೆನ್ಸ್‌ ಸರಿಯಾದ ಸಮಯಕ್ಕೆ ಬರಲಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೃಷ್ಣಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಾಮರಾಜನಗರದಲ್ಲಿ ಕಿರುಕುಳಕ್ಕೆ ಬೇಸತ್ತು ಪಿಡಿಒ ಪತ್ನಿ ಆತ್ಮಹತ್ಯೆ? ಚಾಮರಾಜನಗರ: ಕಿರುಕುಳಕ್ಕೆ ಬೇಸತ್ತು ಪಿಡಿಒ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಆದ್ರೆ ಮೃತಳ ಪೋಷಕರು ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಆರೋಪಿಸಿದ್ದಾರೆ. ಪಿಡಿಒ ಆಗಿ ಕಾರ್ಯ ನಿರ್ವಹಿಸುತ್ತಿರುವ ತಮ್ಮ ಅಳಿಯನೇ ಮಗಳ ಕೊಲೆ ಮಾಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾ. ಬಾಗಲಕೋಟೆ ಜಿಲ್ಲೆ ಜಮಖಂಡಿ‌ ನಿವಾಸಿ. ಇವರಿಗೆ 3 ವರ್ಷದ ಹಿಂದೆ ಆನಂದ್ ಕಾಂಬ್ಳೆ ಜೊತೆ ವಿವಾಹವಾಗಿತ್ತು. ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ತೀರ್ಥ ಗ್ರಾಮದ ನಿವಾಸಿಯಾಗಿರುವ ಆನಂದ್, ಪಿಡಿಒ ಆಗಿದ್ದಾರೆ. ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಹೂಗ್ಯಂ ಗ್ರಾಮ ಪಂಚಾಯತಿಯ ಪಿಡಿಒ ಆಗಿ ಕರ್ತವ್ಯ ನಿರ್ವಹಿಸ್ತಿದ್ದಾರೆ. ಇತ್ತೀಚೆಗೆ ಆನಂದ್ ತಮ್ಮ ಪತ್ನಿಗೆ ಕಿರುಕುಳ ನೀಡ್ತಿದ್ರಂತೆ. ಆಗಾಗ ಕುಡಿದು ಬಂದು ಕಿರುಕುಳ ನೀಡ್ತಿದ್ರಂತೆ. ಈ ವಿಚಾರವನ್ನ ವಿದ್ಯಾ ತಮ್ಮ ಮನೆಯವರಿಗೂ ಹೇಳಿದ್ದರಂತೆ. ಎರಡೂ ಮನೆಯವರು ಇಬ್ಬರಿಗೂ ಬುದ್ಧಿ ಹೇಳ್ತಿದ್ರೂ ಸಮಸ್ಯೆ ಬಗೆಹರಿದಿರಲಿಲ್ಲ. ಆದ್ರೆ, ಅದೇನಾಯ್ತೋ ಏನೋ ವಿದ್ಯಾ ಇದ್ದಕ್ಕಿದ್ದಂತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು ಆತ್ಮಹತ್ಯೆಯಲ್ಲ, ಕೊಲೆ ಅಂತಾ ವಿದ್ಯಾ ಪೋಷಕರು ಆರೋಪಿಸಿದ್ದಾರೆ.

ಇದನ್ನೂ ಓದಿ: ‘ಬಾಲಿವುಡ್​ನ​ ಹಳೆಯ ತಲೆಮಾರು ಕುಸಿಯುತ್ತಿದೆ’; ‘ದಿ ಕಾಶ್ಮೀರ್​ ಫೈಲ್ಸ್​’ ಕುರಿತು ಮೌನ ತಾಳಿದವರಿಗೆ ನಿರ್ದೇಶಕನ​ ತಿರುಗೇಟು

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ
ಸೂಪರ್‌ಮ್ಯಾನ್‌ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿದ ಕಿವೀಸ್ ವೇಗಿ