AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫಿಶ್ ವರ್ಲ್ಡ್ ತೋರಿಸ್ತೀವಿ ಎಂದು ಕರೆದೊಯ್ದು ಮಾಲಕಿ ಮನೆಗೇ ಕನ್ನ ಹಾಕಿದ ದಂಪತಿ: ಹಣ, ಬಂಗಾರ ಕದ್ದು ಎಸ್ಕೇಪ್​​

ನೆಲಮಂಗಲ ಸಮೀಪದ ಚಿಕ್ಕಗೊಲ್ಲರಹಟ್ಟಿಯಲ್ಲಿ ಒಂಟಿ ಮಹಿಳಾ ಮನೆ ಮಾಲೀಕರನ್ನು ಹೊರಗೆ ಕರೆದೊಯ್ದ ಬಾಡಿಗೆದಾರ ದಂಪತಿ, ನಕಲಿ ಕೀ ಬಳಸಿ 40 ಲಕ್ಷ ರೂ. ಮೌಲ್ಯದ 450 ಗ್ರಾಂ ಚಿನ್ನ ಮತ್ತು 2 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಲಾಗ್ತಿದೆ.

ಫಿಶ್ ವರ್ಲ್ಡ್ ತೋರಿಸ್ತೀವಿ ಎಂದು ಕರೆದೊಯ್ದು ಮಾಲಕಿ ಮನೆಗೇ ಕನ್ನ ಹಾಕಿದ ದಂಪತಿ: ಹಣ, ಬಂಗಾರ ಕದ್ದು ಎಸ್ಕೇಪ್​​
ಫಿಶ್ ವರ್ಲ್ಡ್ ತೋರಿಸ್ತೀವಿ ಎಂದು ಕರೆದೊಯ್ದು ಮಾಲಕಿ ಮನೆಗೇ ಕನ್ನ ಹಾಕಿದ ದಂಪತಿ
ಮಂಜುನಾಥ ಎಚ್​. ವಿ.
| Edited By: |

Updated on: Nov 29, 2026 | 7:15 AM

Share

ನೆಲಮಂಗಲ, ನವೆಂಬರ್​​ 29: ಪೂರ್ವಾಪರ ವಿಚಾರಿಸದೆ ಮನೆಯನ್ನು ದಂಪತಿಗೆ ಬಾಡಿಗೆಗೆ ನೀಡಿದ್ದ ಮಹಿಳಾ ಮಾಲೀಕರೋರ್ವರು ಸಂಕಷ್ಟಕ್ಕೆ ಸಿಲುಕಿರುವ ಘಟನೆ ಬೆಂಗಳೂರು ಉತ್ತರ ತಾಳೂಕಿನ ಚಿಕ್ಕಗೊಲ್ಲರಹಟ್ಟಿಯಲ್ಲಿ ನಡೆದಿದೆ. ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಬಂಗಾರ ಮತ್ತು ಹಣವನ್ನು ದೋಚಿ ದಂಪತಿ ಎಸ್ಕೇಪ್​​ ಆಗಿದ್ದು, ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಘಟನೆ ಏನು?

ಚಿಕ್ಕಗೊಲ್ಲರಹಟ್ಟಿಯಲ್ಲಿ ಸ್ವಂತ ಮನೆ ಹೊಂದಿದ್ದ 60 ವರ್ಷದ ಮಹಿಳೆ ಜಯಲಕ್ಷ್ಮೀ ಎಂಬವರು ಒಂಟಿಯಾಗಿ ವಾಸಿಸುತ್ತಿದ್ದರು. ಈ ನಡುವೆ ಎರಡು ತಿಂಗಳ ಹಿಂದೆ ಪೂಜಾ ಮತ್ತು ರಾಜು ಎಂಬ ದಂಪತಿ ಬಾಡಿಗೆಗೆ ಬಂದಿದ್ದರು. ಅವರಿಗೆ ಒಂದು ಹೆಣ್ಣು ಮಗುವೂ ಇತ್ತು. ಮೊನ್ನೆ ಶುಕ್ರವಾರ ಜಯಲಕ್ಷ್ಮೀ ಅವರ ಬಳಿ ಬಂದು ಫಿಶ್ ವರ್ಲ್ಡ್ಗೆ ಹೋಗಿ ಬರೋಣ ಬನ್ನಿ ಆಂಟಿ. ಒಬ್ಬರೇ ಮನೆಯಲ್ಲಿ ಇದ್ದು ಏನು ಮಾಡುತ್ತೀರಾ ಎಂದು ಪೂಜಾ ಪುಸಲಾಯಿಸಿದ್ದಳು. ಗಂಡ ಆಮೇಲೆ ಬರುತ್ತಾನೆ, ನಾವು ಮುಂದೆ ಹೋಗಣ ಎಂದು ನಂಬಿಸಿ ಮಗಳ ಜೊತೆ ಜಯಲಕ್ಷ್ಮೀ ಅವರನ್ನು ಕರೆದೊಯ್ದಿದ್ದಳು.

ಇದನ್ನೂ ಓದಿ: ಆಶ್ರಯ ಯೋಜನೆ ಭೂ ವಿವಾದಕ್ಕೆ ಯುವಕ ಬಲಿ, ಮಾಜಿ ಪಂಚಾಯಿತಿ ಸದಸ್ಯನ ಬಂಧನ

ಪತ್ನಿ ಜೊತೆ ಮನೆ ಮಾಲಕಿ ಹೊರಡುತ್ತಿದ್ದಂತೆ ಇತ್ತ ರಾಜು ತನ್ನ ಕೈಚಳಕ ಆರಂಭಿಸಿದ್ದ. ನಕಲಿ ಕೀ ಬಳಸಿ ಮಾಲಕಿಯ ಮನೆಗೆ ನುಗ್ಗಿರುವ ಆರೋಪಿ ಚಿನ್ನ, ಹಣವನ್ನು ಎಗರಿಸಿದ್ದ. ಮತ್ತೊಂದೆಡೆ ಜಯಲಕ್ಷ್ಮೀ ಅವರನ್ನು ಫಿಶ್ ವರ್ಲ್ಡ್ಗೆ ಕರೆದುಕೊಂಡು ಹೋಗಿದ್ದ ಪೂಜಾ, ಮಗಳಿಗೆ ವಾಶ್‌ರೂಮ್​​ಗೆ ಹೋಗಬೇಕಂತೆ. ನೀವು ಇಲ್ಲೇ ಕುಳಿತಿರಿ ಆಂಟಿ ಎಂದು ಹೇಳಿಹೋಗಿದ್ದವಳು ಮರಳಿ ಬರಲೇ ಇಲ್ಲ. ಆಕೆಗಾಗಿ ಕಾದು ಕಾದು ಸುಸ್ತಾತ ಜಯಲಕ್ಷ್ಮಿ ಅವರು ಮನೆಗೆ ಮರಳಿದ್ದಾರೆ. ಈ ವೇಳೆ ಮನೆಯ ಬಾಗಿಲಿಗೆ ಹಾಕಿದ್ದ ಎರಡು ಲಾಕ್​​ಗಳ ಪೈಕಿ ಒಂದು ಓಪನ್​​ ಆಗಿಯೇ ಇರುವುದು ಕಂಡುಬಂದಿದೆ. ಅನುಮಾನಗೊಂಡು ಪರಿಶೀಲಿಸಿದಾಗ 40 ಲಕ್ಷ ಬೆಲೆಬಾಳುವ 450 ಗ್ರಾಂ ಚಿನ್ನಾಭರಣ ಮತ್ತು ಎರಡು ಲಕ್ಷ ನಗದು ದೋಚಿರುವುದು ಗೊತ್ತಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಮಂಜುನಾಥ ಎಚ್​. ವಿ.
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More
ಕ್ಷೇತ್ರ ಮರುವಿಂಗಡಣೆ ವಿರುದ್ಧ ಸಮರ; ನಾಳೆ ದಕ್ಷಿಣ ಭಾರತದ ಸಿಎಂಗಳ ಸಭೆ
ಕ್ಷೇತ್ರ ಮರುವಿಂಗಡಣೆ ವಿರುದ್ಧ ಸಮರ; ನಾಳೆ ದಕ್ಷಿಣ ಭಾರತದ ಸಿಎಂಗಳ ಸಭೆ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ಆಶಾ ಕಾರ್ಯಕರ್ತೆಯರು ಮತ್ತು ಸರ್ಕಾರದ ನಡುವೆ ಕೊಂಡಿಯಾದವರು ಇವರೇ
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ತಿರುಪ್ಪರಣಕುಂದ್ರಮ್ ಬೆಟ್ಟದಲ್ಲಿ ದೀಪ ಬೆಳಗುತ್ತಿದ್ದಂತೆ ಭಾವುಕರಾದ ಭಕ್ತರು
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಕ್ಷೇತ್ರ ಮರುವಿಂಗಡಣೆ ವಿಧೇಯಕ​ ಕುರಿತು ರಾಹುಲ್ ಗಾಂಧಿ ಸುದ್ದಿಗೋಷ್ಠಿ
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಆಶಾ ಕಾರ್ಯಕರ್ತೆಯರಿಗೆ ಗುಡ್‌ನ್ಯೂಸ್‌: ಸಿಎಂ ಸಂಧಾನ ಸಕ್ಸಸ್‌
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಬಿಗ್​​ಬಾಸ್ ಸ್ಪರ್ಧಿಯ ಅನುಕರಣೆ ಮಾಡಿದ ಕಿಚ್ಚ ಸುದೀಪ್: ವಿಡಿಯೋ ನೋಡಿ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಧರ್ಮ ದಂಗಲ್: ಕಾರ್ಯಕ್ರಮದಿಂದ ಅರ್ಧಕ್ಕೆ ಎದ್ದು ಹೋದ ವಿಜಯೇಂದ್ರ
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಯಶಸ್ ಚಾಣಾಕ್ಷತೆಗೆ ಮೆಚ್ಚಿದ ಸುದೀಪ್; ಕಿಚ್ಚನ ಚಪ್ಪಾಳೆ ಫಿಕ್ಸ್?
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ
ಕ್ಷೇತ್ರ ಪುನರ್ವಿಂಗಡಣೆ ವಿಚಾರದಲ್ಲಿ ನಮ್ಮ ಧ್ವನಿ ಅಡಗಿಸಲಾಗಲ್ಲ: ಡಿಕೆಶಿ