ನೆಲಮಂಗಲ ಭೀಕರ ಅಪಘಾತ: ಗರ್ಭಿಣಿ, ಹೊಟ್ಟೆಯಿಂದ ಹೊರ ಬಂದ ಮಗು ವಿಲ ವಿಲ ಒದ್ದಾಡಿ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಇಂದು (ಆ.08) ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತ ಮನಕಲಕುವಂತೆ ಮಾಡಿದೆ. ಗರ್ಭಣಿ ಮೇಲೆ ಟಿಪ್ಪರ್​ ಹರಿದ ಪರಿಣಾಮ ಹೊಟ್ಟೆಯಿಂದ ಹೊರ ಬಂದ 8 ತಿಂಗಳ ಮಗು ವಿಲ ವಿಲ ಒದ್ದಾಡಿ ಮೃತಪಟ್ಟಿದೆ.

ನೆಲಮಂಗಲ ಭೀಕರ ಅಪಘಾತ: ಗರ್ಭಿಣಿ, ಹೊಟ್ಟೆಯಿಂದ ಹೊರ ಬಂದ ಮಗು ವಿಲ ವಿಲ ಒದ್ದಾಡಿ ಸಾವು
ಮೃತ ಸಿಂಚನಾ, ಪತ್ನಿ ದೇಹದ ಮುಂದೆ ಕುಳಿತು ಪತಿಯ ಗೋಳಾಟ
Follow us
ಬಿ ಮೂರ್ತಿ, ನೆಲಮಂಗಲ
| Updated By: ವಿವೇಕ ಬಿರಾದಾರ

Updated on:Aug 07, 2024 | 11:11 AM

ನೆಲಮಂಗಲ, ಆಗಸ್ಟ್​​ 07: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ನೆಲಮಂಗಲ (Nelamangala) ತಾಲೂಕಿನ ಎಡೇಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ (NH 4) ಟಿಪ್ಪರ್ ಡಿಕ್ಕಿಯಾಗಿ ಬೈಕ್​ ಹಿಂಬದಿ ಕುಳಿತಿದ್ದ ಗರ್ಭಿಣಿ (Pregnant) ಮೃತಪಟ್ಟಿದ್ದಾರೆ. ಹೊಟ್ಟೆಯಲ್ಲಿದ್ದ 8 ತಿಂಗಳ ಮಗು ಹೊರಗಡೆ ಬಂದು ವಿಲ ವಿಲ ಒದ್ದಾಡಿ ಸಾವನ್ನಪ್ಪಿದೆ. ಎಡೇಹಳ್ಳಿಯ ಸಿಂಚನಾ (30) ಮೃತದುರ್ದೈವಿ. ಸಿಂಚನಾ ಪತಿ ಮಂಜುನಾಥ್ ಪವಾಡ ಸದೃಶ ರೀತಿಯಲ್ಲಿ ​ಪಾರಾಗಿದ್ದಾರೆ. ಅಪಘಾತದ ಬಳಿಕ ಸ್ಥಳದಲ್ಲೇ ಟಿಪ್ಪರ್ ನಿಲ್ಲಿಸಿ ಚಾಲಕ ಪರಾರಿಯಾಗಿದ್ದಾನೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಿಂಚನಾಗೆ ಬರುವ ಆಗಸ್ಟ್​ 17ಕ್ಕೆ 8 ಮುಗಿದು 9 ತಿಂಗಳು ತುಂಬುತ್ತಿತ್ತು. ಹೀಗಾಗಿ ಹೆರಿಗೆ ಸುಸೂತ್ರವಾಗಿ ಆಗಲಿ ಎಂದು ದಂಪತಿ ಬೈಕ್​ನಲ್ಲಿ​​ ದಾಬಸ್​ ಪೇಟೆಯಲ್ಲಿರುವ ಶಿವಗಂಗೆಯ ಗಣಪತಿ ದೇವಸ್ಥಾನಕ್ಕೆ ತೆರಳಿದ್ದರು. ಅಲ್ಲಿ ಪೂಜೆ ಸಲ್ಲಿಸಿ ಮರಳಿ ತಮ್ಮೂರು ತೋಟನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಟಿಪ್ಪರ್​ ಡಿಕ್ಕಿ ಹೊಡೆದಿದೆ. ಆಗ ಸಿಂಚನಾ ಬೈಕ್​ನಿಂದ ಕೆಳೆಗೆ ಬಿದ್ದಿದ್ದಾರೆ. ಬಳಿಕ ಟಿಪ್ಪರ್ ​ಸಿಂಚನಾ ಮೇಲೆ ಹರಿದ ಪರಿಣಾಮ ಹೊಟ್ಟೆಯಲ್ಲಿದ್ದ 8 ತಿಂಗಳು ಮಗು ಹೊರಗೆ ಬಂದಿದೆ. ನಡು ರಸ್ತೆಯಲ್ಲೇ ಮಗು ವಿಲ ವಿಲ ಒದ್ದಾಡಿ ಮೃತಪಟ್ಟಿದೆ. ಮನಕಲಕುವ ಘಟನೆ ಕಂಡು ಸ್ಥಳೀಯರು ಕೂಡ ಕಣ್ಣೀರು ಹಾಕಿದ್ದಾರೆ.

ಮೃತ ದೇಹದ ಮುಂದೆ ಪತಿ ಮಂಜುನಾಥ್​​ ಹಾಗೂ ಅತ್ತೆಯ ಆಕ್ರಂದನ ಮುಗಿಲು ಮುಟ್ಟಿದೆ. ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸಾರ್ವಜನಿಕ ಅಸ್ಪತ್ರೆಗೆ ಮೃತದೇಹದ ರವಾನೆ ಮಾಡಲಾಗಿದೆ.

ಇದನ್ನೂ ಓದಿ: ನರ್ಸಿಂಗ್​ ವಿದ್ಯಾರ್ಥಿನಿ ಆತ್ಮಹತ್ಯೆ: ಸಾಯುವ ಮುನ್ನ ತಾಯಿಗೆ ಕರೆ ಮಾಡಿ ಹೇಳಿದ್ದೇನು ಗೊತ್ತಾ?

ಘಟನೆ ಸಂಬಂಧ ಮೃತ ಸಿಂಚನಾ ಪತಿ ಮಂಜುನಾಥ ಮಾತನಾಡಿ, ಶಿವಗಂಗೆ ಗಣೇಶನ ದೇವಸ್ಥಾನದಲ್ಲಿ ಪೂಜೆ ಮುಗಿಸಿಕೊಂಡು ದಾಬಸ್​ಪೇಟೆ ಮುಖಾಂತರ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಎಡೆಹಳ್ಳಿ ಮುಖಾಂತರವಾಗಿ ತೋಟನಹಳ್ಳಿ ಗ್ರಾಮಕ್ಕೆ ಹೋಗುತ್ತಿದ್ದೇವು. ಈ ವೇಳೆ ವೇಗವಾಗಿ ಬಂದ ಟಿಪ್ಪರ್​ ಲಾರಿ ನಾವಿದ್ದ ಬೈಕಿಗೆ ಡಿಕ್ಕಿ ಹೊಡೆಯಿತು. ಕೆಳಗೆ ಬಿದ್ದಾಗ ಸಿಂಚನಾ ಮೇಲೆ ಟಿಪ್ಪರ್ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೊಟ್ಟೆಯಿಂದ ಮಗು ಆಚೆ ಬಂದಿದೆ ಈ ದೃಶ್ಯ ನೋಡಲು ನನ್ನಿಂದ ಸಾಧ್ಯವಿಲ್ಲ ಎಂದು ಗೋಳಾಡಿದ್ದಾರೆ.

ಕಳೆದ ಆರು ತಿಂಗಳಲ್ಲಿ ನೆಲಮಂಗಲ ಸಾಂಚಾರಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ 90ಕ್ಕೂ ಹೆಚ್ಚು ಅಪಘಾತ ಸಂಭವಿಸಿದ್ದು, 125ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:52 am, Wed, 7 August 24

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ