Crime News: ನೆಲಮಂಗಲದ ಎರಡು ಕಡೆ ಬೀಗ ಒಡೆದು ಕಳ್ಳತನ, ವಿಜಯಪುರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನ

Crime Update: ಲಾಕರ್ ನಲ್ಲಿ ಇದ್ದ 25 ಲಕ್ಷ ರೂಪಾಯಿ ಕಳ್ಳತನ ಮಾಡಲಾಗಿದೆ. ಕಛೇರಿಯ ಮ್ಯಾನೇಜರ್ ಮುನಿಯಪ್ಪ ಅವರಿಂದ ಠಾಣೆಗೆ ದೂರು ನೀಡಲಾಗಿದೆ. ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Crime News: ನೆಲಮಂಗಲದ ಎರಡು ಕಡೆ ಬೀಗ ಒಡೆದು ಕಳ್ಳತನ, ವಿಜಯಪುರ ಅಗ್ನಿ ಅವಘಡದಲ್ಲಿ ಇಬ್ಬರು ಸಜೀವ ದಹನ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on: Jan 23, 2022 | 11:14 AM

ಬೆಂಗಳೂರು: ನಗರದಲ್ಲಿ ಜನವರಿ 1 ರಂದು ನಡೆದ ಮುರುಗನ್ (30) ಕೊಲೆ ಕೇಸ್ ಸಂಬಂಧಿಸಿ ಹತ್ಯೆ ಆರೋಪಿಗಳಾದ ಆಂಥೋನಿ ಸಿಂಗ್, ಕಿಶನ್ ಬಂಧನ ಮಾಡಲಾಗಿದೆ. ತಲೆಮರೆಸಿಕೊಂಡಿರುವ ನಾಲ್ವರು ಆರೋಪಿಗಳಿಗೆ ಹುಡುಕಾಟ ನಡೆಸಲಾಗಿದೆ. ಕೊತ್ತನೂರು ಠಾಣಾ ವ್ಯಾಪ್ತಿಯ ಹನುಮಂತನಗರದಲ್ಲಿ ಘಟನೆ ನಡೆದಿತ್ತು. ಹೊಸವರ್ಷದ ದಿನ ರಾತ್ರಿ ಪಾರ್ಟಿ ಮಾಡುತ್ತಿದ್ದ 8 ಜನರು, ಅದೇ ಸಂದರ್ಭದಲ್ಲಿ ಅಂಗಡಿಗೆ ಬಂದಿದ್ದ ಮುರುಗನ್ ಕೊಲೆ ನಡೆಸಿದ್ದರು.

ಗಲಾಟೆ ಮಾಡದಂತೆ ಪಾರ್ಟಿ ಮಾಡುತ್ತಿದ್ದವರಿಗೆ ಮುರುಗನ್ ಬುದ್ಧಿ ಹೇಳಿದ್ದ. ಮದ್ಯದ ಅಮಲಿನಲ್ಲಿ ಪಾರ್ಟಿ ಮಾಡುತ್ತಿದ್ದವರ ಮೇಲೆ ಹಲ್ಲೆ ಮಾಡಿದ್ದ. ಈ ವೇಳೆ ಪಾರ್ಟಿ ಮಾಡುತ್ತಿದ್ದವರಿಂದ ಮುರುಗನ್ ಮೇಲೆ ಹಲ್ಲೆ ಮಾಡಲಾಗಿದೆ. ಗಂಭೀರ ಗಾಯಗೊಂಡು ಪ್ರಜ್ಞೆತಪ್ಪಿ ಬಿದ್ದಿದ್ದ ಮುರುಗನ್ 5 ದಿನ ಜೀವನ್ಮರಣದ ಹೋರಾಟ ನಡೆಸಿ ಮೃತಪಟ್ಟಿದ್ದ. ಹಲ್ಲೆ ನಡೆಸಿ ಸ್ಥಳದಿಂದ ಯುವಕರ ಗುಂಪು ಪರಾರಿಯಾಗಿತ್ತು. ಇದೀಗ ಆರೋಪಿಗಳನ್ನು ಅಸ್ಸಾಂನಿಂದ ಬಂಧಿಸಿ ಕರೆತರಲಾಗಿದೆ.

ಬೆಂಗಳೂರು: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಆರೋಪಿಗಳ ಬಂಧನವಾಗಿದೆ. ಸುರೇಂದ್ರ (30), ಪವನ್‌ಕುಮಾರ್ (19) ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 3 ಕೆಜಿ 100 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೆಲಮಂಗಲ: ಮನೆ ಬೀಗ ಒಡೆದು ಚಿನ್ನಾಭರಣ ಕಳವು

ಮನೆ ಬೀಗ ಒಡೆದು ಚಿನ್ನಾಭರಣಗಳು ಕಳವು ಮಾಡಿದ ಘಟನೆ ಬೆಂಗಳೂರಿನ ಬಾಗಲಗುಂಟೆ ಬಳಿಯ ಹಾವನೂರು ಬಡಾವಣೆಯಲ್ಲಿ ನಡೆದಿದೆ. ನರೇಂದ್ರ ಪಟೇಲ್ ಅವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ಕಳ್ಳತನ ನಡೆದಿದೆ. 2 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಚಿನ್ನಾಭರಣಗಳು ಕಳವಾಗಿದೆ. ಹೆಬ್ಬಾಳದಲ್ಲಿರುವ ಅಣ್ಣನ ಮನೆಗೆ ತೆರಳಿದ್ದಾಗ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬಾಗಲಗುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ನೆಲಮಂಗಲ: ಭಾರತ್ ಗ್ಯಾಸ್ ಕಛೇರಿಯ ಬೀಗ ಒಡೆದು ಹಣ ಕಳ್ಳತನ

ಭಾರತ್ ಗ್ಯಾಸ್ ಕಛೇರಿಯ ಬೀಗ ಒಡೆದು ಹಣ ಕಳ್ಳತನ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಪರ್ವತಪ್ಪ ಲೇಔಟ್ ನಲ್ಲಿ ಘಟನೆ ನಡೆದಿದೆ. ಲಾಕರ್ ನಲ್ಲಿ ಇದ್ದ 25 ಲಕ್ಷ ರೂಪಾಯಿ ಕಳ್ಳತನ ಮಾಡಲಾಗಿದೆ. ಕಛೇರಿಯ ಮ್ಯಾನೇಜರ್ ಮುನಿಯಪ್ಪ ಅವರಿಂದ ಠಾಣೆಗೆ ದೂರು ನೀಡಲಾಗಿದೆ. ನೆಲಮಂಗಲ ಟೌನ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ವಿಜಯಪುರ: ಪ್ಲಾಸ್ಟಿಕ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ; ಇಬ್ಬರು ಸಜೀವ ದಹನ

ಪ್ಲಾಸ್ಟಿಕ್ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಇಬ್ಬರು ಸಜೀವ ದಹನವಾದ ದುರ್ಘಟನೆ ವಿಜಯಪುರ ಜಿಲ್ಲೆಯ ನಿಡಗುಂದಿ ಹೊರವಲಯದಲ್ಲಿ ನಡೆದಿದೆ. ಬಸವನಬಾಗೇವಾಡಿ ಕ್ರಾಸ್ ಬಳಿ ದುರ್ಘಟನೆ ಸಂಭವಿಸಿದೆ. ಅಂಗಡಿಯಲ್ಲಿ ಮಲಗಿದ್ದ ಅಶೋಕ ದೇಸ್ನೂಯಿ (25), ಲಿಂಬಾರಾಮ ದೇಸ್ನೂಯಿ (35) ಮೃತ ದುರ್ದೈವಿಗಳು. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಲಬುರಗಿ: ವಾಸವದತ್ತಾ ಸಿಮೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು

ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿರುವ ವಾಸವದತ್ತಾ ಸಿಮೆಂಟ್ ಕಾರ್ಖಾನೆಯಲ್ಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ನಡೆದಿದೆ. ಆಯತಪ್ಪಿ ಬಿದ್ದು ಕಾರ್ಮಿಕ ಬಾಬಾ ಪಟೇಲ್ (45) ಮೃತಪಟ್ಟಿದ್ದಾರೆ. ಕಾರ್ಮಿಕನ ಕುಟುಂಬಕ್ಕೆ ಪರಿಹಾರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದೆ. ಕಾರ್ಖಾನೆ ಕಿಟಕಿ ಗಾಜುಗಳನ್ನ ಒಡೆದು ಕಾರ್ಮಿಕರ ಆಕ್ರೋಶ ವ್ಯಕ್ತವಾಗಿದೆ. ಸೇಡಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಕಲಬುರಗಿ: ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಗದ್ದೆಯಲ್ಲಿ ಬೆಂಕಿ

ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬಿನ ಗದ್ದೆಯಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಕಲಬುರಗಿ ತಾಲೂಕಿನ ಅವರಾದ(ಬಿ) ಗ್ರಾಮದಲ್ಲಿ ನಡೆದಿದೆ. ಸುಮಾರು 2 ಎಕರೆಯದಲ್ಲಿದ್ದ ಕಬ್ಬು ಬೆಳೆ ಸುಟ್ಟುಭಸ್ಮವಾಗಿದೆ. ಶಂಭುಲಿಂಗಯ್ಯ ಸ್ವಾಮಿ ಎಂಬ ರೈತನಿಗೆ ಸೇರಿದ ಬೆಳೆ ಭಸ್ಮವಾಗಿದೆ. ಜೆಸ್ಕಾಂ ಅಧಿಕಾರಿಗಳ ವಿರುದ್ಧ ರೈತರ ತೀವ್ರ ಆಕ್ರೋಶ ಕೇಳಿಬಂದಿದೆ. ಮಹಗಾಂವ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Crime Update: ಡ್ರಗ್ ಪೆಡ್ಲರ್ ಬಂಧನ, ಇಸ್ಟೀಟ್ ವ್ಯಸನಿಯ ಕೊಂದ ತಾಯಿ, ಬಸ್ ಚಾಲಕನ ಮೇಲೆ ಹಲ್ಲೆ

ಇದನ್ನೂ ಓದಿ: ಮಂಗಳಮುಖಿ ಕೊಲೆ ಪ್ರಕರಣ; 3 ವರ್ಷ ಕಳೆದರೂ ಪತ್ತೆಯಾಗದ ಮತ್ತೋರ್ವ ಮಂಗಳಮುಖಿ, ಮರ್ಯಾದಾ ಹತ್ಯೆ ನಡೆದಿರುವ ಶಂಕೆ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್