ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಮೂರು ಕಡೆ ಕಳ್ಳತನ, ಆನೇಕಲ್​ನಲ್ಲಿ ಕಾರಿನ ಗಾಜು ಒಡೆದು ಹಣ ಕದ್ದ ಖದೀಮರು

ಏರ್ಪೋರ್ಟ್ ರಸ್ತೆಯಲ್ಲಿ ‌ಕಳ್ಳರ ಹಾವಳಿ ಹೆಚ್ಚಾಗಿದೆ. ಕಳೆದ 15 ದಿನಗಳಲ್ಲಿ ಮೂರು‌ ಕಡೆ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ. ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಖತರ್ನಾಕ್ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ.

ಬೆಂಗಳೂರು ಏರ್ಪೋರ್ಟ್ ರಸ್ತೆಯಲ್ಲಿ ಮೂರು ಕಡೆ ಕಳ್ಳತನ, ಆನೇಕಲ್​ನಲ್ಲಿ ಕಾರಿನ ಗಾಜು ಒಡೆದು ಹಣ ಕದ್ದ ಖದೀಮರು
ಕಾರಿನ ಗಾಜು ಒಡೆದು ಕಳ್ಳತನ
Edited By: ಆಯೇಷಾ ಬಾನು

Updated on: Oct 17, 2023 | 11:50 AM

ಬೆಂಗಳೂರು, ಅ.17: ಬೆಂಗಳೂರು ವ್ಯಾಪ್ತಿಯಲ್ಲಿ ಕಳ್ಳರ ಹಾವಳಿ ಹೆಚ್ಚಾಗಿದೆ (Theft). ಏರ್ಪೋರ್ಟ್ ರಸ್ತೆ, ಆನೇಕಲ್ ಭಾಗದಲ್ಲಿ ಕಳ್ಳತನಗಳು ನಡೆದಿವೆ. ಕೆಂಪೇಗೌಡ ಏರ್ಪೋರ್ಟ್ (Bengaluru Airport Road) ರಸ್ತೆಯಲ್ಲಿ ‌ಕಳ್ಳರ ಹಾವಳಿ ಹೆಚ್ಚಾಗಿದೆ. ಕಳೆದ 15 ದಿನಗಳಲ್ಲಿ ಮೂರು‌ ಕಡೆ ಅಂಗಡಿಗಳಲ್ಲಿ ಕಳ್ಳತನ ನಡೆದಿದೆ. ವಾರದ ಹಿಂದೆ ಚಿಕ್ಕಜಾಲ ಪೊಲೀಸ್ ಠಾಣೆಗೆ ಹೊಂದಿಕೊಂಡಿದ್ದ ಬೀದಿ ಬದಿ ಅಂಗಡಿಯಲ್ಲಿ ಕಳ್ಳತನ ನಡೆದಿತ್ತು. ಬಳಿಕ ಯಲಹಂಕ ‌ಪೊಲೀಸ್ ಠಾಣೆ ವ್ಯಾಪ್ತಿಯ ರೈತರ ಸಂತೆ ಜಂಕ್ಷನ್ ಬಳಿ ಕಳ್ಳತನ ನಡೆದಿದೆ. ಬ್ಯಾಕ್ ಟು ಬ್ಯಾಕ್ ಕೃತ್ಯ ಎಸಗುವ ಕದೀಮರ ಕರಾಮತ್ತು‌ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಖದೀಮರು ಮೊದಲೇ ಪ್ಲಾನ್ ಮಾಡಿ ಸ್ಕೆಚ್ ಹಾಕಿ ಕಳ್ಳತನ ‌ಮಾಡಿದ್ದಾರೆ. ಅಂಗಡಿಯಲ್ಲಿಟ್ಟಿದ್ದ 50 ಸಾವಿರ ನಗದು, ಎರಡು ಹುಂಡಿ ಹೊತ್ತೊಯ್ದದ್ದಾರೆ. ನಿರ್ಜನ ಪ್ರದೇಶಗಳ ಬದಲಿಗೆ ಕಳ್ಳರು ಹೆದ್ದಾರಿ ಪಕ್ಕದ ಅಂಗಡಿಗಳನ್ನು ಟಾರ್ಗೆಟ್ ಮಾಡ್ತಿದ್ದಾರೆ. ಘಟನೆ ಸಂಬಂಧ ಚಿಕ್ಕಜಾಲ ಮತ್ತು ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶಾನ್ಯ ವಿಭಾಗದ ಪೊಲೀಸರು ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಲೈಂಗಿಕ ಬಯಕೆ ಇಲ್ಲದೆ ನಾಡಿಮಿಡಿತವನ್ನು ಪರಿಶೀಲಿಸುವುದು ಅಪರಾಧವಲ್ಲ: ಬ್ರಿಜ್ ಭೂಷಣ್ ಪರ ವಕೀಲರ ವಾದ

ಕಾರಿನ ಗ್ಲಾಸ್ ಒಡೆದು ಹಣ ದೋಚಿದ ಖದೀಮರು

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಖತರ್ನಾಕ್ ಕಳ್ಳರು ಕೈ ಚಳಕ ತೋರಿಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಹಣ ದೋಚಿ ಪರಾರಿಯಾಗಿದ್ದಾರೆ. ಆನೇಕಲ್ ತಾಲೂಕಿನ ಬಿದರಗುಪ್ಪೆಯ ಅರೆನೂರು ಗ್ರಾಮದ ಸುಬ್ರಮಣಿ ಎಂಬುವವರು ಅತ್ತಿಬೆಲೆ ಯೂನಿಯನ್ ಬ್ಯಾಂಕಿನಿಂದ ಹಣ ಡ್ರಾ ಮಾಡಿ ತಂದು ಕಾರಿನಲ್ಲಿಟ್ಟಿದ್ದರು. ಕಾರನ್ನ ಅತ್ತಿಬೆಲೆಯ ವಿ.ಎಸ್.ಎಸ್.ಎನ್ ಬ್ಯಾಂಕ್ ಮುಂಭಾಗದಲ್ಲಿ ‌ನಿಲ್ಲಿಸಿ ಎದುರಿಗಿದ್ದ ರೇಷನ್ ಅಂಗಡಿಗೆ ದಿನಸಿ ಖರೀದಿಗೆ ಹೋಗಿದ್ದರು. ಈ ಸಂದರ್ಭದಲ್ಲಿ ಹೊಂಚು ಹಾಕಿ ಕಾರಿನ ಗ್ಲಾಸ್ ಒಡೆದು ಕಳ್ಳತನ ಮಾಡಲಾಗಿದೆ.

ಕಾರಿನಲ್ಲಿದ್ದ ಒಂದು ಲಕ್ಷ ಹಣ ಕದ್ದು ಖದೀಮರು ಪರಾರಿಯಾಗಿದ್ದಾರೆ. ಖದೀಮರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆನೇಕಲ್ ಸುತ್ತಮುತ್ತ ದಿನನಿತ್ಯ ಕಳ್ಳತನ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳ್ಳರ ಹಾವಳಿಯಿಂದ ಜನರಲ್ಲಿ ಆತಂಕ ಮನೆ ಮಾಡಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us