ಬೆಂಗಳೂರು ಗ್ರಾಮಾಂತರ: ಟೀ ಕುಡಿಯುವ ನೆಪದಲ್ಲಿ ಬಂದು ವೃದ್ದೆಯ ಮಾಂಗಲ್ಯ ಸರ ಎಗರಿಸಿದ ಖದೀಮರು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆ.ಜಿ ಶ್ರೀನಿವಾಸಪುರ ಬಳಿ ಟೀ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ವೃದ್ಧೆಯ ಬಳಿ ಟೀ ಕುಡಿಯುವ ನೆಪದಲ್ಲಿ ಬಂದು ಅವರ ಬಳಿಯಿದ್ದ 35 ಗ್ರಾಂನ ಮಾಂಗಲ್ಯ ಸರವನ್ನು ಕಳ್ಳತನ ಮಾಡು ಎಸ್ಕೇಪ್​ ಆಗಿದ್ದಾರೆ.

ಬೆಂಗಳೂರು ಗ್ರಾಮಾಂತರ: ಟೀ ಕುಡಿಯುವ ನೆಪದಲ್ಲಿ ಬಂದು ವೃದ್ದೆಯ ಮಾಂಗಲ್ಯ ಸರ ಎಗರಿಸಿದ ಖದೀಮರು
ವೃದ್ಧೆ
Follow us
ಬಿ ಮೂರ್ತಿ, ನೆಲಮಂಗಲ
| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 23, 2023 | 7:36 PM

ಬೆಂಗಳೂರು ಗ್ರಾಮಾಂತರ, ಆ.23: ಇತ್ತೀಚೆಗೆ ಕಳ್ಳತನ(Theft) ಪ್ರಕರಣಗಳು ಹೆಚ್ಚುತ್ತಿದ್ದು, ಪೊಲೀಸರು ಎಷ್ಟೇ ಕಟ್ಟುನಿಟ್ಟಿನ ಕ್ರಮ ಕೈಗೊಂಡರು, ಖದೀಮರಿಗೆ ಬ್ರೇಕ್​ ಹಾಕಲಾಗುತ್ತಿಲ್ಲ. ಹೌದು, ಮಹಾನಗರದಲ್ಲಿ ದಿನವೂ ಒಂದಿಲ್ಲೊಂದು ಇಂತಹ ಘಟನೆಗಳು ಬೆಳಕಿಗೆ ಬರುತ್ತಿರುತ್ತದೆ. ಅದರಂತೆ ಇದೀಗ ಟೀ ಕುಡಿಯುವ ನೆಪದಲ್ಲಿ ಬಂದು ವೃದ್ದೆಯೊಬ್ಬರ ಮಾಂಗಲ್ಯ ಸರವನ್ನು ದುಷ್ಕರ್ಮಿಗಳು ಎಗರಿಸಿದ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ ತಾಲೂಕಿನ ಕೆ.ಜಿ ಶ್ರೀನಿವಾಸಪುರ ಬಳಿ ನಡೆದಿದೆ.

ಟೀ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದ ವೃದ್ಧೆ

ಹೌದು, ವೃದ್ಧೆ ಜಯಮ್ಮ ಅವರು ಹೆದ್ದಾರಿ ಬಳಿ ಟೀ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಈ ಈ ವೇಳೆ ರೆಡ್ ಕಲರ್ ಬೈಕಿನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು. ಜಯಮ್ಮ ಅವರ 35ಗ್ರಾಂ ಮಾಂಗಲ್ಯ ಸರವನ್ನು ಕಣ್ಣುಮುಚ್ಚಿ ತೆಗೆಯುವಷ್ಟರಲ್ಲಿ ಕದ್ದು ಪರಾರಿಯಾಗಿದ್ದಾರೆ. ಸ್ಥಳಕ್ಕೆ ದಾಬಸ್ ಪೇಟೆ ಪೊಲೀಸರು ಆಗಮಿಸಿ, ಘಟನೆಯ ವಿವರವನ್ನು ಪಡೆದು, ತನಿಖಾ ಕಾರ್ಯ ಮುಂದುವರೆಸಿದ್ದಾರೆ. ಜೊತೆಗೆ ಸರಗಳ್ಳರ ಪತ್ತೆಗಾಗಿ ನಾಕಬಂದಿ ರಚಿಸಿ ತೀವ್ರ ಶೋಧ ನಡೆಸಿದ್ದಾರೆ.

ಇದನ್ನೂ ಓದಿ:ಬೆಂಗಳೂರು: ಅಪರಿಚಿತನ ಬಳಿ ಕ್ವಾಟರ್ ಎಣ್ಣೆ ಆಸೆಗೆ ಬಿದ್ದು ಆಟೋ ಕಳ್ಕೊಂಡ ಚಾಲಕ; ಕಳ್ಳತನದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಹಳೇ ದ್ವೇಷ, ಎರಡು ಗುಂಪುಗಳ ನಡುವೆ ಘರ್ಷಣೆ; ಓರ್ವನಿಗೆ ಗಂಭೀರ ಗಾಯ

ಕೋಲಾರ: ಜಿಲ್ಲೆಯ ಕೆಜಿಎಫ್ ನಗರದಲ್ಲಿ ಹಳೇ ದ್ವೇಷದ ಹಿನ್ನಲೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು, ಆ ಪೈಕಿ ಓರ್ವ ವ್ಯಕ್ತಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ನಡೆದಿದೆ. ಹೌದು, ಲಾಂಗು ಹಾಗೂ ಮಚ್ಚುಗಳಿಂದ ಎರಡು ಗುಂಪುಗಳ ನಡುವೆ ಘರ್ಷಣೆಯಾಗಿದ್ದು, ಈ ವೇಳೆ ವಿಶಾಲ್ ಎಂಬಾತನಿಗೆ ಮಚ್ವಿನಿಂದ ಹಲ್ಲೆ ಮಾಡಲಾಗಿದ್ದು ಗಾಯಾಳು ವಿಶಾಲ್​ಗೆ ಕೈ ಬೆರಳುಗಳು ತುಂಡಾಗಿ ಹೋಗಿದೆ. ಕಾಲು, ಹೊಟ್ಟೆ ಬಾಗಕ್ಕೆ ಮಚ್ಚಿನಿಂದ ಹಲ್ಲೆ ಮಾಡಲಾಗಿದ್ದು, ಗಾಯಾಳುವನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಆರೋಪಿಗಳ ಬಂಧನ

ಇನ್ನು ಘಟನೆ ಸಂಬಂಧ ಮಾರ್ಟಿನ್, ಸುಜಯ್, ಅರುಳ್, ದರ್ಶನ್ ಎಂಬುವರನ್ನು ಬಂಧಿಸಲಾಗಿದೆ. ವಿಶಾಲ್​ ಹಾಗೂ ಆತನ ಗ್ಯಾಂಗ್​ ಮತ್ತು ಮಾರ್ಟಿನ್​ ಗ್ಯಾಂಗ್ ನಡುವೆ ಹಲವು ದಿನಗಳ ಹಿಂದೆಯೂ ಗಲಾಟೆ ನಡೆದಿದ್ದು, ಅದರ ಮುಂದುವರೆದ ಭಾಗವಾಗಿ ನಿನ್ನೆ(ಆ.21) ತಡರಾತ್ರಿ ಹೊಡೆದಾಡಿಕೊಂಡಿದ್ದಾರೆ. ಈ ಸಂಬಂಧ ಕೆಜಿಎಫ್​ ನಗರದ ರಾಬರ್ಟ್ ಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿದ್ದು, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ