Karaga: ಕರಗ ಹೊರಲು ಮೂರು ಗುಂಪುಗಳ ಕಿತ್ತಾಟ, ಐತಿಹಾಸಿಕ ಬೂದಿಗೆರೆ ದ್ರೌಪದಮ್ಮ ಕರಗ ರದ್ದು

| Updated By: ಆಯೇಷಾ ಬಾನು

Updated on: Mar 24, 2024 | 11:29 AM

ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿ ಪ್ರತಿ ವರ್ಷ ಕಾಮನ ಹುಣ್ಣಿಮೆಯಂದು ದ್ರೌಪದಿ ದೇವಿ ಕರಗ ಮಹೋತ್ಸವ ನಡೆಯುತ್ತಿತ್ತು. ಆದರೆ, ಈ ಬಾರಿ ಕರಗ ಹೊರುವ ವಿಚಾರವಾಗಿ ತಿಗಳ ಜನಾಂಗದ ಮೂರು ಗುಂಪುಗಳ ನಡುವೆ ಕಿತ್ತಾಟ ಹಿನ್ನೆಲೆ ಕರಗ ಮಹೋತ್ಸವ ರದ್ದಾಗಿದೆ.

Karaga: ಕರಗ ಹೊರಲು ಮೂರು ಗುಂಪುಗಳ ಕಿತ್ತಾಟ, ಐತಿಹಾಸಿಕ ಬೂದಿಗೆರೆ ದ್ರೌಪದಮ್ಮ ಕರಗ ರದ್ದು
ಶ್ರೀ ಧರ್ಮರಾಯ ಸ್ವಾಮಿ ದೇವಾಲಯ
Follow us on

ದೇವನಹಳ್ಳಿ, ಮಾರ್ಚ್​.24: ಐತಿಹಾಸಿಕ ಬೂದಿಗೆರೆ ದ್ರೌಪದಮ್ಮ ಕರಗ (Droupadamma Karaga) ಕ್ಯಾನ್ಸಲ್ ಆಗಿದೆ. ಕರಗ ಹೊರುವ ವಿಚಾರವಾಗಿ ಮೂರು ಗುಂಪುಗಳ ನಡುವೆ ವಾದ-ವಿವಾದ ಉಂಟಾಗಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಬೂದಿಗೆರೆಯಲ್ಲಿ (Budigere) ನಾಳೆ (ಮಾ.25) ನಡೆಯಬೇಕಿದ್ದ ಇತಿಹಾಸ ಪ್ರಸಿದ್ಧ ಬೂದಿಗೆರೆ ಶ್ರೀ ದ್ರೌಪದಮ್ಮ ದೇವಿ ಕರಗ ಮಹೋತ್ಸವ ರದ್ದಾಗಿದೆ. ಇದೀಗ ದ್ರೌಪಮ್ಮ ದೇಗುಲದ ಮುಂದೆ ಪೊಲೀಸರ ವ್ಯಾನ್​ಗಳು ನಿಂತಿದ್ದು ಭಾರೀ ಬಂದೋಬಸ್ತ್​ ಕೈಗೊಳ್ಳಲಾಗಿದೆ.

ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದಲ್ಲಿ ಪ್ರತಿ ವರ್ಷ ಕಾಮನ ಹುಣ್ಣಿಮೆಯಂದು ದ್ರೌಪದಿ ದೇವಿ ಕರಗ ಮಹೋತ್ಸವ ನಡೆಯುತ್ತಿತ್ತು. ಆದರೆ, ಈ ಬಾರಿ ಕರಗ ಹೊರುವ ವಿಚಾರವಾಗಿ ತಿಗಳ ಜನಾಂಗದ ಮೂರು ಗುಂಪುಗಳ ನಡುವೆ ಕಿತ್ತಾಟ ಹಿನ್ನೆಲೆ ಕರಗ ಮಹೋತ್ಸವ ರದ್ದಾಗಿದೆ. ಕರಗ ಹೊರಲು ಜಿದ್ದಾಜಿದ್ದಿಗೆ ಬಿದ್ದ ಮೂರು ಗುಂಪುಗಳ ನಡುವೆ ಕಿತ್ತಾಟವಾದ ಹಿನ್ನೆಲೆ ಶಾಂತಿ, ಸುವ್ಯವಸ್ಥೆ ಕಾಪಾಡಲು ಕರಗ ರದ್ದು ಮಾಡಲಾಗಿದೆ.

ಇನ್ನು ಮತ್ತೊಂದೆಡೆ ಕರಗ ವಿಚಾರ ಕೋರ್ಟ್​ ಮೆಟ್ಟಿಲೇರಿದ್ದು, ಹೈಕೋರ್ಟ್​ನಲ್ಲಿ ಕರಗ ಕಿತ್ತಾಟ ಪ್ರಕರಣ ಇತ್ಯಾರ್ಥವಾಗಿಲ್ಲ. ಮೇ 27ಕ್ಕೆ ವಿಚಾರಣೆಯನ್ನು ಹೈ ಕೋರ್ಟ್ ಮುಂದೂಡಿದೆ. ಆದರೆ ಕರಗ ಮಾರ್ಚ್ 25ರಂದು ನಡೆಯಬೇಕಿತ್ತು. ಪ್ರಕರಣ ಇತ್ಯರ್ಥಗೊಳ್ಳದ ಕಾರಣ ಕರಗ ಆಚರಣೆಯೇ ರದ್ದಾಗಿದೆ. ಶ್ರೀ ಧರ್ಮರಾಯ ಸ್ವಾಮಿ ದೇವಾಲಯದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದನ್ನೂ ಓದಿ: Bengaluru Karaga 2024: ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವಕ್ಕೆ ಡೇಟ್ ಫಿಕ್ಸ್

ಏಪ್ರಿಲ್​ನಲ್ಲಿ ಬೆಂಗಳೂರು ಕರಗ ಆರಂಭ

ವಿಶ್ವ ವಿಖ್ಯಾತ, ಐತಿಹಾಸಿಕ ಪ್ರಸಿದ್ಧ ಬೆಂಗಳೂರು ಕರಗ ಮಹೋತ್ಸವಕ್ಕೆ ಏಪ್ರಿಲ್ 15 ರಿಂದ ಏಪ್ರಿಲ್ 23ರವರೆಗೆ ನಡೆಯಲಿದೆ. ಏಪ್ರಿಲ್ 23ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಈ ಬಾರಿಯೂ ಪೂಜಾರಿ ಎ.ಜ್ಞಾನೇಂದ್ರ ಅವರು ಕರಗ ಹೊರಲಿದ್ದಾರೆ. ಜ್ಞಾನೇಂದ್ರ ಅವರು 14ನೇ ಬಾರಿ ಬೆಂಗಳೂರು ಕರಗ ಹೊರುತ್ತಿದ್ದಾರೆ.

ಕಳೆದ ವರ್ಷ ಕರಗ ಶಕ್ತ್ಯೋತ್ಸವ ನಡೆಯುವ ಸಂದರ್ಭದಲ್ಲಿ ಕೆಲ ಕಿಡಿಗೇಡಿಗಳು ಕರಗದ ಪೂಜಾರಿ ಎ. ಜ್ಞಾನೇಂದ್ರ ಅವರ ಮೇಲೆ ಕೆಮಿಕಲ್ ಎರಚಿ ಕರಗಕ್ಕೆ ಅಡ್ಡಿಪಡಿಸಲು ಮುಂದಾಗಿದ್ದರು, ಆದರೂ ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರು ಯಶಸ್ವಿಯಾಗಿ ದ್ರೌಪದಿದೇವಿ ಕರಗವನ್ನು ರಾಜಬೀದಿ ಉತ್ಸವ ಮುಗಿಸಿ ಧರ್ಮರಾಯ ಸ್ವಾಮಿ ದೇವಾಲಯ ತಲುಪಿಸಿದ್ದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ