Bangalore Rural News: ಲಾರಿ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು

ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್​ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ನಡೆದಿದೆ.

Bangalore Rural News: ಲಾರಿ ಡಿಕ್ಕಿ, ಬೈಕ್​ನಲ್ಲಿ ತೆರಳುತ್ತಿದ್ದ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವು
ಪ್ರಾತಿನಿಧಿಕ ಚಿತ್ರ
Follow us
ನವೀನ್ ಕುಮಾರ್ ಟಿ
| Updated By: ಗಂಗಾಧರ​ ಬ. ಸಾಬೋಜಿ

Updated on:Jul 27, 2023 | 6:37 PM

ಬೆಂಗಳೂರು ಗ್ರಾಮಾಂತರ, ಜುಲೈ 27: ಚಲಿಸುತ್ತಿದ್ದ ಬೈಕ್​ಗೆ ಲಾರಿ ಡಿಕ್ಕಿ (collides) ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ನಡೆದಿದೆ. ಗೊಣಕನಹಳ್ಳಿ ನಿವಾಸಿಗಳಾದ ಮನೋಹರ(19) ಶ್ವೇತಾ(38), ಸುಕೃತಾ(4) ಮೃತರು. ಸ್ಥಳದಲ್ಲಿ ಕುಟುಂಬಸ್ಥರ‌ ಆಕ್ರಂದನ ಮುಗಿಲು ಮುಟ್ಟಿದೆ. ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹಾಡುಹಗಲೇ ಕಳ್ಳತನ

ಮೈಸೂರು: ಹಾಡುಹಗಲೇ ಮನೆಯಲ್ಲಿ ಕಳ್ಳತನ ನಡೆದಿರುವಂತಹ ಘಟನೆ ಮೈಸೂರಿನ ಸರ್ದಾರ್ ವಲ್ಲಭಾಯ್ ಪಟೇಲ್ ನಗರದ ಪೋಲೀಸ್ ಬಡಾವಣೆಯಲ್ಲಿ ನಡೆದಿದೆ. ಮನೆಯ ಬೀಗ ಮುರಿದು ಕಳ್ಳತನ ಮಾಡಿದ್ದು, ಕಳ್ಳರ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ ಆಗಿದೆ.

ಇದನ್ನೂ ಓದಿ: Ramanagara: ಗೃಹಲಕ್ಷ್ಮೀ ಯೋಜನೆ ನೋಂದಣಿಗೆಂದು ಕರೆದೊಯ್ದು ವೃದ್ಧೆಯ ಚಿನ್ನದ ಸರ ಕಳ್ಳತನ

ಮನೆಯಲ್ಲಿದ್ದ 1.5 ಲಕ್ಷ ರೂ. ಬೆಲೆ ಬಾಳುವ ಚಿನ್ನಾಭರಣ ಕಳ್ಳತನವಾಗಿದೆ. ಮನೆಯಲ್ಲಿ ಯಾರು ಇಲ್ಲದೆ ಇರುವುದನ್ನ ಗಮಿನಿಸಿ ಕೃತ್ಯವೆಸಲಾಗಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಮದ್ಯದ ಪಾರ್ಟಿ ಬಳಿಕ ಕೊಲೆ? ಜನನಿಬಿಡ ಪ್ರದೇಶದಲ್ಲಿ ನಿರ್ಮಾಣ ಕಟ್ಟಡದಲ್ಲಿ ವಿವಸ್ತ್ರಗೊಳಿಸಿ ಕೈಕಾಲು ಕಟ್ಟಿ ವ್ಯಕ್ತಿಯ ಹತ್ಯೆ

ಸ್ಕೂಟರ್​ನಲ್ಲಿ ಬಂದು ಗಾಂಜಾ ಮಾರಾಟ ಮಾಡಲು ಯತ್ನ: ಇಬ್ಬರ ಬಂಧನ

ಮಂಗಳೂರು: ಬೈಕ್​ನಲ್ಲಿ ಬಂದು ಗಾಂಜಾ ಮಾರಾಟಕ್ಕೆ ಯತ್ನಿಸಿದ್ದ ಅಬ್ದುಲ್ ರಹೀಂ, ಮೊಹಮ್ಮದ್ ಅಶ್ರಫ್​ನನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 1 ಲಕ್ಷದ 67 ಸಾವಿರ ಮೌಲ್ಯದ 3 ಕೆ.ಜಿ 378 ಗ್ರಾಂ ತೂಕದ ಗಾಂಜಾ, ತೂಕಮಾಪನ, 4,900 ರೂ, 50 ಸಾವಿರ ಮೌಲ್ಯದ ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ. ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:21 pm, Thu, 27 July 23

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ