AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟ ಆಡ್ತಾ ಆಡ್ತಾ ವಿಷ ಸೇವನೆ ಮಾಡಿಬಿಟ್ಟ ಪುಟ್ಟ ಕಂದಮ್ಮಗಳು, ತೀವ್ರ ಅಸ್ವಸ್ಥ

ರಸ್ತೆ ಬದಿಯಲ್ಲಿ ಪ್ಯಾಕೆಟ್ ನಲ್ಲಿ ತುಂಬಿದ್ದ ಡ್ರೈನೇಜ್ ಕ್ಲೀನರ್ (D-Klog) ಪಾಯಿಸನ್ ಅನ್ನು ಸಕ್ಕರೆಯೆಂದು ಭಾವಿಸಿ, ಮೂವರೂ ಮಕ್ಕಳು ತಿಂದುಬಿಟ್ಟಿವೆ. ಅದೃಷ್ಟವಶಾತ್ ಮೂರೂ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ. ದೇವನಹಳ್ಳಿಯ ಆಕಾಶ್ ಆಸ್ವತ್ರೆ ಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಆಟ ಆಡ್ತಾ ಆಡ್ತಾ ವಿಷ ಸೇವನೆ ಮಾಡಿಬಿಟ್ಟ ಪುಟ್ಟ ಕಂದಮ್ಮಗಳು, ತೀವ್ರ ಅಸ್ವಸ್ಥ
ಆಟ ಆಡ್ತಾ ವಿಷ ಸೇವಿಸಿದ ಪುಟ್ಟ ಕಂದಮ್ಮಗಳು, ಅಸ್ವಸ್ಥ
ನವೀನ್ ಕುಮಾರ್ ಟಿ
| Edited By: ಸಾಧು ಶ್ರೀನಾಥ್​|

Updated on:Sep 02, 2023 | 1:06 PM

Share

ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ) ಸೆಪ್ಟೆಂಬರ್​ 2: ಮನೆ ಮುಂದೆ ರಸ್ತೆಯಲ್ಲಿ ಆಟವಾಡುವ ವೇಳೆ ಮೂರು ಪುಟ್ಟ ಕಂದಮ್ಮಗಳು ವಿಷ (poison) ಸೇವಿಸಿದ್ದು, ತೀವ್ರ ಅಸ್ವಸ್ಥಗೊಂಡಿವೆ. ದೇವನಹಳ್ಳಿ (devanahalli) ಪಟ್ಟಣದ ವಿನಾಯಕ ನಗರದಲ್ಲಿ ಈ ಅಚಾತುರ್ಯ ಘಟನೆ ನಡೆದಿದೆ. ಸುಚಿತ್ರಾ ( 3 ) ಲೋಹಿತ್ಯಾ ( 4 ) ವೇದಾಂತ ( 3 ) ವಿಷ ಸೇವನೆಯಿಂದ ಅಸ್ವಸ್ಥರಾದ ಮಕ್ಕಳು (toddlers).

ರಸ್ತೆ ಬದಿಯಲ್ಲಿ ಪ್ಯಾಕೆಟ್ ನಲ್ಲಿ ತುಂಬಿದ್ದ ಡ್ರೈನೇಜ್ ಕ್ಲೀನರ್ (D-Klog) ಪಾಯಿಸನ್ ಅನ್ನು ಸಕ್ಕರೆಯೆಂದು ಭಾವಿಸಿ, ಮೂವರೂ ಮಕ್ಕಳು ತಿಂದುಬಿಟ್ಟಿವೆ. ಅದೃಷ್ಟವಶಾತ್ ಮೂರೂ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದುಬಂದಿದೆ.

ಇದನ್ನೂ ಓದಿ: ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ ಹಸುಗೂಸನ್ನೇ ಕೊಂದ ಮಲತಾಯಿ!

ಪೋಷಕರು ತಮ್ಮ ಮಕ್ಕಳನ್ನು ಮನೆಯ ಬಳಿ ಬಿಟ್ಟು ಕೆಲಸಕ್ಕೆ ತೆರಳಿದ್ದರು. ದೇವನಹಳ್ಳಿಯ ಆಕಾಶ್ ಆಸ್ವತ್ರೆಯಲ್ಲಿ ಮಕ್ಕಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಲಾರಿಗೆ ಕಾರು ಡಿಕ್ಕಿ, DySP ತಂದೆ ಸಾವು

ಕೋಲಾರ, ಸೆಪ್ಟೆಂಬರ್​ 2: ಆಂಧ್ರದ ಪಲಮನೇರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ (Palamaner on National Highway) ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿಯಾಗಿ ಅಪಘಾತ (accident) ಸಂಭವಿಸಿದ್ದು, ಹುಣಸೂರು ಅಬಕಾರಿ DySP ತಂದೆ (Hunsur Excise DySp) ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಗಿರಿಗೌಡ (80) ಸ್ಥಳದಲ್ಲೇ ಕೊನೆಯುಸಿರೆಳೆದಿದ್ದು, ಮೂವರಿಗೆ ಗಾಯಗಳಾಗಿವೆ. ಮೃತ ಗಿರಿಗೌಡ ಅವರು ಹುಣಸೂರು ಅಬಕಾರಿ DySP ವಿಜಯ್​ ಕುಮಾರ್ ಅವರ ತಂದೆ.

ಘಟನೆಯಲ್ಲಿ ಹುಣಸೂರು ಅಬಕಾರಿ DySP ವಿಜಯ್ ​ಕುಮಾರ್​​, ಅವರ ತಾಯಿ ಮತ್ತು ಅಬಕಾರಿ ಇನ್ಸ್​ಪೆಕ್ಟರ್​​ ಲೋಕೇಶ್​ ಅವರುಗಳು ಗಾಯಗೊಂಡಿದ್ದಾರೆ. ಕೋಲಾರದ ಜಾಲಪ್ಪ ಆಸ್ಪತ್ರೆಯಲ್ಲಿ ಮೂವರಿಗೂ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯ್ ​ಕುಮಾರ್ ಅವರ ಕುಟುಂಬ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ಸಾಗುತ್ತಿದ್ದಾಗ ಶ್ರಾವಣ ಶನಿವಾರವಾದ ಇಂದು ಆಂಧ್ರದ ಪಲಮನೇರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:20 pm, Sat, 2 September 23

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ