ಆಟವಾಡುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು

ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ಆಟವಾಡುವಾಗ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿದ್ದಾರೆ. ಹೊಂಡಕ್ಕೆ ಬೇಲಿ ಅಳವಡಿಸದ ಹಿನ್ನೆಲೆಯಲ್ಲಿ ರೈತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ತನಿಖೆ ಮುಂದುವರಿದೆ. ಪುಟ್ಟ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಆಟವಾಡುವ ವೇಳೆ ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು
ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ಸಾವು
Image Credit source: Tv9 Kannada
Edited By:

Updated on: Jun 14, 2026 | 12:33 PM

ದೊಡ್ಡಬಳ್ಳಾಪುರ, ಜೂನ್​​ 14: ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವವರ ಸರಣಿ ರಾಜ್ಯದಲ್ಲಿ ಮುಂದುರಿದಿದೆ. ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿ ಪೋಷಕರು ಇಲ್ಲದಿದ್ದಾಗ ಆಟ ಆಡಲು ಹೋಗಿದ್ದ ದಕ್ಷಾ(11), ಧನುಷ್(4) ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದು, ಮಕ್ಕಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಮುಖ್ಯಾಂಶಗಳು

  • ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವು
  • ದೊಡ್ಡಬಳ್ಳಾಪುರ ತಾಲೂಕಿನ ತೊಗರಿಘಟ್ಟದಲ್ಲಿ ಘಟನೆ
  • ಪೋಷಕರಿಲ್ಲದ ವೇಳೆ ಆಡಲು ಹೋಗಿ ಭಾರಿ ದುರಂತ

ಕೃಷಿ ಹೊಂಡಕ್ಕಿರಲಿಲ್ಲ ಬೇಲಿ!

ಇನ್ನು ಮಕ್ಕಳು ಮೃತಪಟ್ಟಿರುವ ಕೃಷಿ ಹೊಂಡ ರೈತ ಗುರುಮೂರ್ತಿ ಎಂಬುವವರಿಗೆ ಸೇರಿದ್ದು, ಇದಕ್ಕೆ ಕನಿಷ್ಠ ಬೇಲಿಯನ್ನೂ ಹಾಕಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಗುರುಮೂರ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಫೊಲೀಸ್ ಠಾಣೆಯಲ್ಲಿ ‌ಪ್ರಕರಣ ದಾಖಲಾಗಿದ್ದು, ಘಟನೆ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಕಸ್ಟಮ್ಸ್​​ ಅಧಿಕಾರಿಗಳ ಭರ್ಜರಿ ಬೇಟೆ; ಬೆಂಗಳೂರು ಏರ್​ಪೋರ್ಟ್​​ನಲ್ಲಿ 1.37 ಕೋಟಿ ಮೌಲ್ಯದ ಬಂಗಾರ ವಶಕ್ಕೆ

ಮೇಲಿಂದ ಮೇಲೆ ದುರಂತ

ಕೃಷಿ ಹೊಂಡ, ಕೆರೆ, ಸಂಪ್​​ ಮುಂತಾದವುಗಳಿಗೆ ಬಿದ್ದು ಮಕ್ಕಳೇ ಬಲಿಯಾಗುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿವೆ. ಮಂಡ್ಯ ಜಿಲ್ಲೆ ಪಾಂಡವಪುರ ತಾಲೂಕಿನ ಲಕ್ಷ್ಮೀಸಾಗರದಲ್ಲಿ ಮನೆ ಮುಂದಿನ ನೀರಿನ ಸಂಪ್​ಗೆ ಬಿದ್ದು 2 ವರ್ಷದ ಮಗು ಮೃತಪಟ್ಟಿರುವ ಘಟನೆ ನಿನ್ನೆ (ಜೂನ್​​ 13) ವರದಿಯಾಗಿತ್ತು. ಅತ್ತ ಬಾಗಲಕೋಟೆಯಲ್ಲಿಯೂ ನೀರಿನ ಟ್ಯಾಂಕ್​ನಲ್ಲಿ ಮುಳುಗಿ 18 ತಿಂಗಳ ಹೆಣ್ಣು ಮಗು ದಾರುಣ ಅಂತ್ಯ ಕಂಡ ಘಟನೆ ಜೂನ್​​ 8ರಂದು ನಡೆದಿತ್ತು. ಈ ಘಟನೆಗಳು ಮಾಸುವ ಮುನ್ನವೇ ಮತ್ತೊಂದು ದುರಂತವೀಗ ರಾಜ್ಯದಲ್ಲಿ ನಡೆದಿರೋದು ಆತಂಕ ಹೆಚ್ಚಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 9:47 am, Sun, 14 June 26

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us