AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗಳ ಲಗ್ನಪತ್ರಿಕೆ ಹಂಚಲು ತೆರಳಿದ್ದ ವೇಳೆ ಭೀಕರ ಅಪಘಾತ: ಪತ್ನಿ ಸಾವು, ಪತಿ ಸ್ಥಿತಿ ಗಂಭೀರ

ನೆಲಮಂಗಲ ತಾಲೂಕಿನ ಮೈಲನಹಳ್ಳಿಯಲ್ಲಿ ಮಗಳ ಲಗ್ನ ಪತ್ರಿಕೆ ಹಂಚಲು ತೆರಳುತ್ತಿದ್ದ ದಂಪತಿಯ ಬೈಕ್‌ಗೆ ಸಿಮೆಂಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡಿರುವ ದಾರುಣ ಘಟನೆ ನಡೆದಿದೆ. ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಅಪಘಾತ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಗಳ ಲಗ್ನಪತ್ರಿಕೆ ಹಂಚಲು ತೆರಳಿದ್ದ ವೇಳೆ ಭೀಕರ ಅಪಘಾತ: ಪತ್ನಿ ಸಾವು, ಪತಿ ಸ್ಥಿತಿ ಗಂಭೀರ
ಅಪಘಾತದಲ್ಲಿ ಮೃತ ಮಹಿಳೆ ಮತ್ತು ಗಾಯಗೊಂಡಿರುವ ಪತಿ
ಮಂಜುನಾಥ ಎಚ್​. ವಿ.
| Edited By: |

Updated on:Nov 13, 2026 | 4:18 PM

Share

ನೆಲಮಂಗಲ, ನವೆಂಬರ್​​ 13: ಮಗಳ  ಲಗ್ನಪತ್ರಿಕೆ ಹಂಚಲು ಹೋಗಿದ್ದ ವೇಳೆ ನಡೆದ ಭೀಕರ ಅಪಘಾತದಲ್ಲಿ ಪತ್ನಿ ಸ್ಥಳದಲ್ಲೇ ಮೃತಪಟ್ಟಿದ್ದರೆ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮೈಲನಹಳ್ಳಿಯಲ್ಲಿ ನಡೆದಿದೆ. ಲಕ್ಷ್ಮೀ ದೇವಿ ಅಲಿಯಾಸ್​​ ದೇವಮ್ಮ(42) ಮೃತ ಮಹಿಳೆಯಾಗಿದ್ದರೆ, ಅವರ ಪತಿ ಪತಿ ವಿಜಯ್ ಕುಮಾರ್(48) ಅವರ ಕಾಲು ಅಪಘಾತದಲ್ಲಿ ತುಂಡಾಗಿದೆ. ದಂಪತಿ​​ ದೊಡ್ಡಬಳ್ಳಾಪುರ ತಾಲೂಕಿ ಚಿಕ್ಕಮದುರೆ ಹೋಬಳಿಯ ಉದ್ದಿಚಿಕ್ಕನಹಳ್ಳಿ ನಿವಾಸಿಗಳು ಎಂಬುದು ಗೊತ್ತಾಗಿದೆ.

ನ.26, 27ರಂದು ನಿಗದಿಯಾಗಿದ್ದ ಮದುವೆ

ನ.26, 27ರಂದು ಪುತ್ರಿ ಇಂದ್ರಾಣಿ ಮದುವೆ ನಿಶ್ಚಯವಾಗಿದ್ದ ಹಿನ್ನೆಲೆ ಮದುವೆಗೆ ಪತ್ರಿಕೆ ಹಂಚಲು ಹೋಗಿದ್ದ ವೇಳೆ ಹಿಂಬದಿಯಿಂದ ಬಂದ ಸಿಮೆಂಟ್​​ ಲಾರಿ ದಂಪತಿ ತೆರಳುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಹರಿದಿದೆ. ಪರಿಣಾಮ ದೇವಮ್ಮ ಲಾರಿ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ವಿಜಯ್ ಕುಮಾರ್ ಕಾಲುಗಳ ಮೇಲೂ ಲಾರಿ ಚಲಿಸಿರುವ ಪರಿಣಾಮ ಅವರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯ್ ಕುಮಾರ್ ಸಾಲ ಶೂಲ ಮಾಡಿ ಮಗಳ ಮದುವೆ ಮಾಡಲು ಮುಂದಾಗಿದ್ದರು. ಕಳೆದ ಒಂದು ವಾರದಿಂದ ಮದುವೆಯ ಲಗ್ನ ಪತ್ರಿಕೆಯನ್ನು ಸಂಬಂಧಿಕರು ಹಾಗೂ ಸ್ನೇಹಿತರಿಗೆ ಹಂಚುತ್ತಿದ್ದರು ಎನ್ನಲಾಗಿದೆ.

ಇದನ್ನೂ ಓದಿ: ಅತ್ತಿಬೆಲೆ ಬಳಿ ಹಿಟ್ ಆ್ಯಂಡ್ ರನ್‌ಗೆ ಇಬ್ಬರು ಬೈಕ್ ಸವಾರರು ಬಲಿ; ಕಿಲೋಮೀಟರ್‌ಗಟ್ಟಲೆ ಚೇಸ್ ಮಾಡಿ ಕಾರು ಚಾಲಕನನ್ನು ಹಿಡಿದ ಪೊಲೀಸರು!

ಇಂದು ಕೂಡ ನೆಲಮಂಗಲದಲ್ಲಿನ ಸಂಬಂಧಿಕರಿಗೆ ಲಗ್ನ ಪತ್ರಿಕೆ ನೀಡಲೆಂದು ದಂಪತಿ ತೆರಳುತ್ತಿದ್ದರು. ಆದರೆ ವಿಧಿಯಾಟ ಬೇರೆಯದ್ದೇ ನಡೆದಿದ್ದು, ಮದುವೆ ಸಂಭ್ರಮದಲ್ಲಿದ್ದ ಮನೆಯೀಗ ಶೋಕ ಸಾಗರದಲ್ಲಿ ಮುಳುಗಿದೆ. ದೇವಮ್ಮ ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಅಪಘಾತ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 4:18 pm, Fri, 13 November 26

Follow Us
ಮಂಜುನಾಥ ಎಚ್​. ವಿ.
ಮಂಜುನಾಥ ಎಚ್​. ವಿ.

ಮಂಜುನಾಥ ಹೆಚ್ ವಿ. ಇವರು ಹುಟ್ಟಿದ್ದು ಬೆಂಗಳೂರು ಉತ್ತರ ತಾಲೂಕಿನ ಹೆಸರಘಟ್ಟದಲ್ಲಿ. ಬೆಂಗಳೂರು ಸೆಂಟ್ರಲ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪಡೆದಿದ್ದಾರೆ. ಎಲೆಕ್ಟ್ರಾನಿಕ್ ಮಾಧ್ಯಮದಲ್ಲಿ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದರು. 8 ವರ್ಷಗಳ ಕಾಲ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿದ್ದಾರೆ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಆಗಿ ವೃತ್ತಿ ನಿರ್ವಹಿಸಿದ್ದು ಸಾಮಾಜಿಕವಾಗಿ ನ್ಯಾಯ ಒದಗಿಸುವ ಕೆಲಸವನ್ನ ಮಾಡಿದ್ದಾರೆ. ಕಳೆದ 9 ವರ್ಷಗಳಿಂದ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಟಿವಿ9 ಕನ್ನಡ ಸಂಸ್ಥೆಗೆ ಬೆಂಗಳೂರು ಹಾಗೂ ನೆಲಮಂಗಲ ಭಾಗದ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕ್ರಿಕೆಟ್ ಆಡುವುದು, ಕ್ರೈಂ ಇನ್ವೆಷ್ಟಿಗೇಷನ್, ಬುಕ್ ಹಾಗೂ ಪೇಪರ್ ಓದುವ ಹವ್ಯಾಸವಿದೆ.

Read More
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
Live: ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ನಮ್ಮ ಮೆಟ್ರೋ ಗುಲಾಬಿ ಮಾರ್ಗಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಗೆಳೆಯರ ಗಲಾಟೆ: ಕುನ್ನಿ ಎಂದ ಗಗನ್​​ಗೆ ಖಡಕ್ ವಾರ್ನಿಂಗ್ ಕೊಟ್ಟ ತಾಂಡವ್
ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ
ಪ್ರಧಾನಿ ಮೋದಿಯಿಂದ ಪಿಂಕ್ ಲೈನ್ ಮೆಟ್ರೊ ಉದ್ಘಾಟನೆ ನೇರಪ್ರಸಾರ
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ನಾಗ ಚೌತಿ ಹಬ್ಬದ ದಿನವೇ ದೇವಾಲಯದಲ್ಲಿ ಪ್ರತ್ಯಕ್ಷವಾದ ಹಾವು
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಬೆಂಗಳೂರು: ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್ ಎಸ್ಟೇಟ್ ಉದ್ಯಮಿಯ ಕೊಲೆ
ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​
ಮೆಟ್ರೋಗೆ ಅನುದಾನ ಸಮರ: ತೇಜಸ್ವಿ ಸೂರ್ಯ ಆರೋಪಕ್ಕೆ ಕೃಷ್ಣ ಭೈರೇಗೌಡ ಕೌಂಟರ್​
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಪ್ರಶಾಂತಿ ಕುಟೀರ ಸುವರ್ಣ ಮಹೋತ್ಸವದಲ್ಲಿ ಮೋದಿ ಭಾಗಿ ನೇರಪ್ರಸಾರ
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಮೋದಿ ಸಂಚರಿಸುವಲ್ಲೆಲ್ಲ ಕೈ-ಕಮಲ ಕಾರ್ಯಕರ್ತರ ಫ್ಲೆಕ್ಸ್​ಗಳು ಝಗಮಗ!
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ
ಲಾಭ ಪಡೆಯಲು ಕಳ್ಳಾಟ ಆಡಿದ್ರಾ ಆಸಿಯಾ? ಸೌಂದರ್ಯಾ ಛೀಮಾರಿ