AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನಕ್ಕೆ ಗುದ್ದಿದ ಟಿಟಿ ವಾಹನ: ಕೆಂಪೇಗೌಡ ಏರ್​​ಪೋರ್ಟ್ ಮಂಡಳಿ ಕೊಟ್ಟ ಸ್ಪಷ್ಟನೆ ಏನು?

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿವೆ. ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನವೊಂದು ಡಿಕ್ಕಿ ಹೊಡೆದಿದೆ. ಸದ್ಯ ಘಟನೆ ಬಗ್ಗೆ ಕೆಂಪೇಗೌಡ ಏರ್​​ಪೋರ್ಟ್​ ಆಡಳಿತ ಮಂಡಳಿಯಿಂದ ಸ್ಪಷ್ಟನೆ ನೀಡಿದ್ದು, ಮುಂದಿನ ದಿನಗಳಲ್ಲಿ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುತ್ತೇವೆ ಎಂದು ತಿಳಿಸಿದೆ.

ವಿಮಾನಕ್ಕೆ ಗುದ್ದಿದ ಟಿಟಿ ವಾಹನ: ಕೆಂಪೇಗೌಡ ಏರ್​​ಪೋರ್ಟ್ ಮಂಡಳಿ ಕೊಟ್ಟ ಸ್ಪಷ್ಟನೆ ಏನು?
ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ
ನವೀನ್ ಕುಮಾರ್ ಟಿ
| Edited By: |

Updated on: Apr 20, 2025 | 1:34 PM

Share

ದೇವನಹಳ್ಳಿ, ಏಪ್ರಿಲ್​ 20: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಬಳಿಯ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ (Kempegowda Airport) ಸಾಲು ಸಾಲು ಅಪಘಾತಗಳು ಸಂಭವಿಸಿವೆ. ಕೆಟ್ಟು ನಿಂತಿದ್ದ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಬಳಿಕ ಚಾಲಕನ ನಿಯಂತ್ರಣ ತಪ್ಪಿ ರನ್ ವೇನಲ್ಲಿರುವ ಕಂಬಕ್ಕೆ ಕಾರೊಂದು ಡಿಕ್ಕಿ ಹೊಡೆದಿರುವಂತಹ ಘಟನೆ ಕೂಡ ನಡೆದಿದೆ. ಸದ್ಯ ಈ ಎರಡು ಘಟನೆಗಳಿಂದು ಏರ್​ಪೋರ್ಟ್​ ಆಡಳಿತ ಮಂಡಳಿ ವಿರುದ್ದ ಆಕ್ರೋಶ ವ್ಯಕ್ತವಾಗಿದೆ. ಈ ಬೆನ್ನಲ್ಲೇ ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಆಡಳಿತ ಮಂಡಳಿ ತಿಳಿಸಿದೆ.

ಮಾಧ್ಯಮ ಪ್ರಕಟಣೆಯಲ್ಲಿ ಏನಿದೆ?

ಘಟನೆ ಬಗ್ಗೆ ಕೆಂಪೇಗೌಡ ಏರ್​​ಪೋರ್ಟ್​ ಆಡಳಿತ ಮಂಡಳಿಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ಏ.18ರ ಮಧ್ಯಾಹ್ನ 12.15ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಕಾಂಟ್ರ್ಯಾಕ್ಟ್ ಏಜೆನ್ಸಿ ಕಡೆಯ ಚಾಲಕ ಟಿಟಿ ವಾಹನವನ್ನು ಚಲಾಯಿಸಿಕೊಂಡು ಕೆಟ್ಟು ನಿಂತಿದ್ದ ವಿಮಾನದ ಬಳಿ ಬಂದಿದ್ದು, ಫ್ಲೈಟ್​​ಗೆ ಟಿಟಿ ವಾಹನದ ಮೇಲ್ಭಾಗ ತಗುಲಿ ಡ್ಯಾಮೇಜ್ ಆಗಿದೆ. ಚಾಲಕ ಅಪಾಯದಿಂದ ಪಾರಾಗಿದ್ದಾನೆ.

ಇದನ್ನೂ ಓದಿ: ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಎರಡೆರೆಡು ಅಪಘಾತ: ವಿಮಾನಕ್ಕೆ ಟಿಟಿ, ರನ್ ವೇನಲ್ಲಿರುವ ಕಂಬಕ್ಕೆ ಕಾರು ಡಿಕ್ಕಿ

ಇದನ್ನೂ ಓದಿ
Image
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಎರಡೆರೆಡು ಅಪಘಾತ: ವಿಡಿಯೋ ನೋಡಿ
Image
ಬೆಂಗಳೂರು 2ನೇ ಏರ್​ಪೋರ್ಟ್: ಸ್ಥಳಕ್ಕಾಗಿ ಸಚಿವರು-ಶಾಸಕರ ನಡುವೆ ಜಟಾಪಟಿ
Image
ಬೆಂಗಳೂರು: ಸೈಡ್ ಪಿಕಪ್ ಹೆಸ್ರರಲ್ಲಿ ಟ್ಯಾಕ್ಸಿ ಚಾಲಕರಿಗೆ ಕಿರುಕುಳ 
Image
ಅತ್ಯುತ್ತಮ ಆಗಮನ ವಿಮಾನ ನಿಲ್ದಾಣ ಪ್ರಶಸ್ತಿ ಪಡೆದ ಬೆಂಗಳೂರು ಏರ್ಪೋರ್ಟ್

ತಕ್ಷಣ ನಮ್ಮ ಸಿಬ್ಬಂದಿ ಮುನ್ನೆಚರಿಕೆ ಕ್ರಮಗಳನ್ನು ಕೈಗೊಂಡಿದ್ದಾರೆ. ಘಟನೆ ಕುರಿತು ಈಗಾಗಲೇ ಡಿಜಿಸಿಎಗೆ ಮಾಹಿತಿ ರವಾನಿಸಿದ್ದೇವೆ. ಪ್ರಯಾಣಿಕರಿಗೆ ಹಾಗೂ ವಿಮಾನಗಳ ಹಾರಾಟಕ್ಕೆ ಅಡಚಣೆಯಾಗಿಲ್ಲ. ಪ್ರಯಾಣಿಕರು, ಸಿಬ್ಬಂದಿ, ಏರ್​​​​ಲೈನ್ಸ್​​ನ ಸುರಕ್ಷತೆ ನಮ್ಮ ಆದ್ಯತೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದೇ ರೀತಿ ಕಳೆದ ವರ್ಷ ಟರ್ಮಿನಲ್ 2 ರಿಂದ 1 ಕ್ಕೆ ಬರುತ್ತಿದ್ದ ಶೆಟಲ್ ಬಸ್ ಸಹ ಅಪಘಾತಕ್ಕೆ ಒಳಾಗಾಗಿ 10 ಜನ ಪ್ರಯಾಣಿಕರು ಗಾಯಗೊಂಡಿದ್ದರು. ಏರ್​ಪೋರ್ಟ್​ನಲ್ಲಿ ಸಾಲು ಸಾಲು ಅಪಘಾತಗಳು ಸಂಭವಿಸುತ್ತಿದ್ದು, ಏರ್​ಪೋರ್ಟ್​ ಸಿಬ್ಬಂದಿಗೆ ಅಧಿಕ ಒತ್ತಡ ಹಾಗೂ ಒಟಿಗಳನ್ನ ಹೆಚ್ಚಾಗಿ ಮಾಡಿಸುವ ಕಾರಣ ಈ ರೀತಿ ಅಪಘಾತಗಳು ಸಂಭವಿಸುತ್ತಿವೆ ಎಂದು ಏರ್​ಪೋರ್ಟ್​ ಸಿಬ್ಬಂದಿಗಳು ಸಹ ಪರೋಕ್ಷವಾಗಿ ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: ಬೆಂಗಳೂರು 2ನೇ ಏರ್​ಪೋರ್ಟ್: ಬಿಡದಿ ಔಟ್, ಈ ಎರಡು ಸ್ಥಳಗಳ ಬಗ್ಗೆ ಚರ್ಚೆ, ಜಟಾಪಟಿ!

ಒಟ್ಟಾರೆ ಸೂಕ್ಷ್ಮ ಪ್ರದೇಶವಾದ ಕೆಂಪೇಗೌಡ ಏರ್​ಪೋರ್ಟ್​ ರನ್ ವೇನಲ್ಲಿ ಈ ರೀತಿ ಪದೇ ಪದೇ ಅಪಘಾತಗಳಾಗುತ್ತಿದ್ದು, ದೊಡ್ಡ ದೊಡ್ಡ ಅನಾಹುತಗಳು ಕೂದಲಳತೆ ಅಂತರದಿಂದ ತಪ್ಪುತ್ತಿದೆ. ಇನ್ನಾದರೂ ಏರ್​ಪೋರ್ಟ್ ಆಡಳಿತ ಮಂಡಳಿ ಎಚ್ಚೆತ್ತು ಮತ್ತೊಮ್ಮೆ ಇಂತಹ ಅವಘಡಗಳು ಆಗದಂತೆ ಎಚ್ಚರಿಕೆ ವಹಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Naveen Kumar
Naveen Kumar

ನವೀನ್ ಕುಮಾರ್ ಟಿ ಎಂಬ ನಾನು ಮೂಲತಃಹ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ನಮ್ಮ ಹೆಮ್ಮೆಯ ಟಿವಿನೈನ್ ನ ದೇವನಹಳ್ಳಿ ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಎಂಎಸ್ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ನಾನು ಪದವಿ ಮುಗಿಯುತ್ತಿದ್ದಂತೆ ಟಿವಿನೈನ್ ನಲ್ಲಿ ವರದಿಗಾರನಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದೇನೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಉದ್ದೇಯನ್ನ ಪಡೆದು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡ್ತಿದ್ದೀನಿ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಾ ಬಂದಿದ್ದೇನೆ.

Read More
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ