AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Accident: ಬಿಬಿಎಂಪಿ ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರ ದುರ್ಮರಣ

ಬಿಬಿಎಂಪಿ ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರ ದುರ್ಮರಣ ಹೊಂದಿರುವಂತಹ ದುರಂತ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ.

Accident: ಬಿಬಿಎಂಪಿ ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರ ದುರ್ಮರಣ
ಬಿಬಿಎಂಪಿ ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರ ದುರ್ಮರಣ
TV9 Web
| Edited By: |

Updated on:Nov 28, 2022 | 7:21 PM

Share

ದೊಡ್ಡಬಳ್ಳಾಪುರ: ಬಿಬಿಎಂಪಿ (BBMP) ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರ ದುರ್ಮರಣ (Accident) ಹೊಂದಿರುವಂತಹ ದುರಂತ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ. ಮೃತರು ನೆಲಮಂಗಲ ಮೂಲದ ಮಾರುತಿ ಮತ್ತು ಮಹೇಶ್ ಎಂದು ತಿಳಿದುಬಂದಿದೆ. ತ್ಯಾಜ್ಯ ಸುರಿಯಲು‌ ಹೋಗುತ್ತಿದ್ದ ವೇಳೆ ಬೈಕ್​ಗೆ ಬಿಬಿಎಂಪಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಿಬಿಎಂಪಿ ಕಸದ ಲಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2 ತಿಂಗಳ ಹಿಂದೆಯೂ ಕಸದ ಲಾರಿಗೆ ಓರ್ವ ಯುವಕ ಬಲಿಯಾಗಿದ್ದ. ಇದೀಗ ಮತ್ತಿಬ್ಬರು ಬೈಕ್​ ಸವಾರರು ಬಿಬಿಎಂಪಿ ಕಸದ ಲಾರಿಗೆ ಬಲಿಯಾಗಿದ್ದಾರೆ.

ಖಾಸಗಿ ಬಸ್​ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ: ಮಹಿಳೆ ಸಾವು

ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು 15 ಜನರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪದಲ್ಲಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಗಾಯಳುಗಳು ಎನ್.ಆರ್ ಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡಿದಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ, ಗಂಡನ ಮನೆಯವರೇ ಕೊಲೆ ಮಾಡಿರುವ ಆರೋಪ

ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದಲ್ಲಿ ತಿಪ್ಪಣ್ಣ ಹೊಸಮನಿ(34), ಸುಜಾತಾ(30) ಎಂಬ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕ್ಯಾಮೆರಾಮನ್ ಆಗಿ‌ ಕೆಲಸ ಮಾಡುತ್ತಿದ್ದ ತಿಪ್ಪಣ್ಣ, ಇತ್ತೀಚೆಗೆ ಕೆಲಸ ಬಿಟ್ಟು ಮುದ್ದೇಬಿಹಾಳ ಪಟ್ಟಣಕ್ಕೆ ಬಂದಿದ್ದರು. ಕಳೆದ ಒಂದು ವರ್ಷದ ಹಿಂದೆ ಸುಜಾತಾಳನ್ನು‌ ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ ಈಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಲಭ್ಯವಾಗಿಲ್ಲ. ಸ್ಥಳಕ್ಕೆ ‌ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Shocking News: ಬಾಲಕಿ ಮೇಲೆ ಅತ್ಯಾಚಾರ ಮಾಡುವಾಗ ಹೆಡ್​ಮಾಸ್ಟರ್ ಬಂದರೆಂದು ಓಡಿದ ಹುಡುಗರು; ಆಮೇಲಾಗಿದ್ದು ದುರಂತ!

ಕಲಬುರಗಿ ನಗರದಲ್ಲಿ ಹೆಚ್ಚಾದ ಮನೆಗಳ್ಳತನ ಪ್ರಕರಣಗಳು

ಕಲಬುರಗಿಯಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ನಗರದ ಫಿರ್ದೋಸ್ ಕಾಲೋನಿಯಲ್ಲಿ ಮನೆ ಬೀಗ ಮುರಿದು ಕಳ್ಳರು 50 ಗ್ರಾಂ ಚಿನ್ನಾಭರಣ ಮತ್ತು 50 ಸಾವಿರ ರೂ ನಗದು ದೋಚಿ ಪರಾರಿಯಾಗಿದ್ದಾರೆ. ತಬಸುಮ್ ಎಂಬುವರು ಕೆಲಸಕ್ಕೆ ಹೋದಾಗ ಕನ್ನ ಹಾಕಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:30 pm, Mon, 28 November 22

Follow Us
TV9 Web
TV9 Web

TV9 Kannada

Read More
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!