ದೊಡ್ಡಬಳ್ಳಾಪುರ: ಬಿಬಿಎಂಪಿ (BBMP) ಕಸದ ಲಾರಿ ಹರಿದು ಬೈಕ್ ಸವಾರರಿಬ್ಬರ ದುರ್ಮರಣ (Accident) ಹೊಂದಿರುವಂತಹ ದುರಂತ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ. ಮೃತರು ನೆಲಮಂಗಲ ಮೂಲದ ಮಾರುತಿ ಮತ್ತು ಮಹೇಶ್ ಎಂದು ತಿಳಿದುಬಂದಿದೆ. ತ್ಯಾಜ್ಯ ಸುರಿಯಲು ಹೋಗುತ್ತಿದ್ದ ವೇಳೆ ಬೈಕ್ಗೆ ಬಿಬಿಎಂಪಿ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ನಂತರ ಲಾರಿ ಸಮೇತ ಚಾಲಕ ಪರಾರಿಯಾಗಲು ಯತ್ನಿಸಿದ್ದು, ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಿಬಿಎಂಪಿ ಕಸದ ಲಾರಿಗಳ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 2 ತಿಂಗಳ ಹಿಂದೆಯೂ ಕಸದ ಲಾರಿಗೆ ಓರ್ವ ಯುವಕ ಬಲಿಯಾಗಿದ್ದ. ಇದೀಗ ಮತ್ತಿಬ್ಬರು ಬೈಕ್ ಸವಾರರು ಬಿಬಿಎಂಪಿ ಕಸದ ಲಾರಿಗೆ ಬಲಿಯಾಗಿದ್ದಾರೆ.
ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ: ಮಹಿಳೆ ಸಾವು
ಚಿಕ್ಕಮಗಳೂರು: ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿದ್ದು 15 ಜನರಿಗೆ ಗಾಯಗಳಾಗಿರುವಂತಹ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪದಲ್ಲಿ ನಡೆದಿದೆ. ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ರತ್ನಮ್ಮ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಗಾಯಳುಗಳು ಎನ್.ಆರ್ ಪುರ ಹಾಗೂ ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ನಡಿದಿದೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆ, ಗಂಡನ ಮನೆಯವರೇ ಕೊಲೆ ಮಾಡಿರುವ ಆರೋಪ
ಮನೆಯಲ್ಲಿ ನೇಣು ಬಿಗಿದುಕೊಂಡು ದಂಪತಿ ಆತ್ಮಹತ್ಯೆ
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ಪಟ್ಟಣದಲ್ಲಿ ತಿಪ್ಪಣ್ಣ ಹೊಸಮನಿ(34), ಸುಜಾತಾ(30) ಎಂಬ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಕ್ಯಾಮೆರಾಮನ್ ಆಗಿ ಕೆಲಸ ಮಾಡುತ್ತಿದ್ದ ತಿಪ್ಪಣ್ಣ, ಇತ್ತೀಚೆಗೆ ಕೆಲಸ ಬಿಟ್ಟು ಮುದ್ದೇಬಿಹಾಳ ಪಟ್ಟಣಕ್ಕೆ ಬಂದಿದ್ದರು. ಕಳೆದ ಒಂದು ವರ್ಷದ ಹಿಂದೆ ಸುಜಾತಾಳನ್ನು ಪ್ರೀತಿಸಿ ಮದುವೆಯಾಗಿದ್ದರು. ಆದ್ರೆ ಈಗ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ಲಭ್ಯವಾಗಿಲ್ಲ. ಸ್ಥಳಕ್ಕೆ ಮುದ್ದೇಬಿಹಾಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Shocking News: ಬಾಲಕಿ ಮೇಲೆ ಅತ್ಯಾಚಾರ ಮಾಡುವಾಗ ಹೆಡ್ಮಾಸ್ಟರ್ ಬಂದರೆಂದು ಓಡಿದ ಹುಡುಗರು; ಆಮೇಲಾಗಿದ್ದು ದುರಂತ!
ಕಲಬುರಗಿ ನಗರದಲ್ಲಿ ಹೆಚ್ಚಾದ ಮನೆಗಳ್ಳತನ ಪ್ರಕರಣಗಳು
ಕಲಬುರಗಿಯಲ್ಲಿ ಮನೆಗಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ನಗರದ ಫಿರ್ದೋಸ್ ಕಾಲೋನಿಯಲ್ಲಿ ಮನೆ ಬೀಗ ಮುರಿದು ಕಳ್ಳರು 50 ಗ್ರಾಂ ಚಿನ್ನಾಭರಣ ಮತ್ತು 50 ಸಾವಿರ ರೂ ನಗದು ದೋಚಿ ಪರಾರಿಯಾಗಿದ್ದಾರೆ. ತಬಸುಮ್ ಎಂಬುವರು ಕೆಲಸಕ್ಕೆ ಹೋದಾಗ ಕನ್ನ ಹಾಕಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 6:30 pm, Mon, 28 November 22