Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಇಬ್ಬರು ಬೌದ್ಧ ಬಿಕ್ಕುಗಳು ಸಾವು: ಆಯತಪ್ಪಿ ಬಿದ್ದು ಮೃತ ಶಂಕೆ

ಚಲಿಸುತ್ತಿದ್ದ ರೈಲಿನಿಂದ ಇಬ್ಬರು ಬೌದ್ಧ ಬಿಕ್ಕುಗಳು ಬಿದ್ದು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆತ್ತನಗೆರೆಯಲ್ಲಿ ನಡೆದಿದೆ.

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಇಬ್ಬರು ಬೌದ್ಧ ಬಿಕ್ಕುಗಳು ಸಾವು: ಆಯತಪ್ಪಿ ಬಿದ್ದು ಮೃತ ಶಂಕೆ
ಬೌದ್ಧ ಬಿಕ್ಕುಗಳು
Follow us
ಗಂಗಾಧರ​ ಬ. ಸಾಬೋಜಿ
|

Updated on:Jun 14, 2023 | 6:54 PM

ನೆಲಮಂಗಲ: ಚಲಿಸುತ್ತಿದ್ದ ರೈಲಿನಿಂದ ಇಬ್ಬರು ಬೌದ್ಧ ಬಿಕ್ಕು (Buddhist monks) ಗಳು ಬಿದ್ದು ಸಾವನ್ನಪ್ಪಿರುವಂತಹ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆತ್ತನಗೆರೆಯಲ್ಲಿ ನಡೆದಿದೆ. ರೈಲಿನ ಬಾಗಿಲಿನಲ್ಲಿ ಕುಳಿತಿದ್ದ ವೇಳೆ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಟ್ರ್ಯಾಕ್ ಮ್ಯಾನ್‌ನಿಂದ ಬೌದ್ಧ ಬಿಕ್ಕುಗಳ ಸಾವು ಪ್ರಕರಣ ಬೆಳಕಿಗೆ ಬಂದಿದೆ. ಕುಶಾಲನಗರದಿಂದ ಬೆಂಗಳೂರಿಗೆ ಇಬ್ಬರು ಬಿಕ್ಕುಗಳು ಬರುತ್ತಿದ್ದರು. ಸುಮಾರು 25 ವರ್ಷ ಆಸುಪಾಸಿನವರು ಎನ್ನಲಾಗಿದೆ. ಕುಶಾಲನಗರದ ಗೋಲ್ಡನ್ ಟೆಂಪಲ್‌ಗೆ ಹೋಗಿ ಬರುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.

ಬಿಕ್ಕುಗಳ ಜೇಬಿನಲ್ಲಿ ಕುಶಾಲನಗರಕ್ಕೆ ಹೋಗಿರುವ ಬಸ್ ಟಿಕೆಟ್ ಪತ್ತೆ ಆಗಿದೆ. ಆದರೆ ಈವರೆಗೆ ಮೃತ ಇಬ್ಬರು ಬೌದ್ಧ ಬಿಕ್ಕುಗಳ ಗುರುತು ಪತ್ತೆಯಾಗಿಲ್ಲ. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ಮೃತದೇಹಗಳನ್ನು ರವಾನಿಸಲಾಗಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Raichur News: ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಸಾವು

ತೊಟ್ಟಿಯಲ್ಲಿ ಕಲುಷಿತ ನೀರು ಕುಡಿದು 18 ಮೇಕೆಗಳು ಸಾವು

ದೇವನಹಳ್ಳಿ: ತೊಟ್ಟಿಯಲ್ಲಿ ಕಲುಷಿತ ನೀರು ಕುಡಿದು 18 ಮೇಕೆಗಳು ಮೃತಪಟ್ಟಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಯಲಿಯೂರು ಹೊರವಲಯದಲ್ಲಿ ನಡೆದಿದೆ. ದೊಡ್ಡ ತೆತ್ತಮಂಗಲ ಗ್ರಾಮದ ಮುನಿಶಾಮಪ್ಪಗೆ ಮೇಕೆಗಳು ಸೇರಿವೆ. ಪಶುಸಂಗೋಪನಾ ಅಧಿಕಾರಿಗಳು, ತಹಶೀಲ್ದಾರ್​ ಶಿವರಾಜ್​ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಮುನಿಶಾಮಪ್ಪ ಒತ್ತಾಯಿಸಿದ್ದಾರೆ.

ಹಾಡಹಗಲೇ ಕೈಚಳಕ ತೋರಿದ್ದ ಬೈಕ್ ಕಳ್ಳನ ಬಂಧನ

ಆನೇಕಲ್​: ಹಾಡಹಗಲೇ ಕೈಚಳಕ ತೋರಿದ್ದ ಬೈಕ್ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಗಡಿ ತಮಿಳುನಾಡಿನ ಡೆಂಕಣಿಕೋಟೆ ಬಸ್ ನಿಲ್ದಾಣದಲ್ಲಿ ಬೈಕ್​ ಕಳ್ಳತನ ಮಾಡಿದ್ದಾರೆ. ತಮಿಳ್ ಸೆಲ್ವನ್ ಬಂಧಿತ ಆರೋಪಿ. ಕಳ್ಳರ ಕೈಚಳಕ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಕ್ಷಣ ಮಾತ್ರದಲ್ಲಿ ರಸ್ತೆ ಬದಿ ಪಾರ್ಕ್ ಮಾಡಿದ್ದ ಬೈಕ್​ನ್ನು ಕಳ್ಳರು ಕದಿದ್ದರು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Bengaluru News: PSI ಮೇಲೆ ಹಲ್ಲೆ ಆರೋಪ: ಏನಿದು ಡೆಂಟಲ್​ ಮೆಡಿಕಲ್​ ವಿದ್ಯಾರ್ಥಿ ಕಿರಿಕ್​? ಯುವಕನ ತಂದೆ ಹೇಳಿದ್ದೇನು

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿ: ಓರ್ವ ಸಾವು

ತುಮಕೂರು: ಜಿಲ್ಲೆಯ ಮಧುಗಿರಿ ತಾಲೂಕಿನ ತೆರಿಯೂರಿನ ಹೊರವಲಯದ ಅಣ್ಣನಹಳ್ಳಿ ಗೇಟ್ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಪಲ್ಟಿಯಾಗಿದ್ದು, ಕಾರು ಚಾಲಕ ಭರತ್ ಕುಮಾರ್(24) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಮಧುಗಿರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಕುರಿತು ಕೊಡಿಗೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:43 pm, Wed, 14 June 23

ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಹಿಂದಿ ಬದಲು ಇಂಗ್ಲಿಷ್​​ನಲ್ಲೇ ಭಯೋತ್ಪಾದನೆ ವಿರುದ್ಧ ಮೋದಿ ಸಂದೇಶ ರವಾನೆ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪುತ್ರನ ಪ್ರಾಣ ಕಾಪಾಡಿದ ಮುಸ್ಲಿಂ ವ್ಯಕ್ತಿ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಪ್ಪನ ಮುಖ ದಿಟ್ಟಿಸುತ್ತಿದ್ದ ಅಭಿಜಯನಲ್ಲಿನ ತಾಕಲಾಟಗಳು ಒಂದೆರಡಲ್ಲ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಅಂತಿಮ ಸಂಸ್ಕಾರದಲ್ಲಿ ಭಾಗಿಯಾಗಲಿದ್ದಾರೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
ಕಂಡಕ್ಟರ್​ನಿಂದ ಯುವತಿಗೆ ಲೈಂಗಿಕ ಕಿರುಕುಳ: ವಿಡಿಯೋ ವೈರಲ್
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
IPL 2025: ನಂಬಿ ಕೆಟ್ಟ ಇಶಾನ್ ಕಿಶನ್: ಇಲ್ಲಿದೆ ಒರಿಜಿನಲ್ ವಿಡಿಯೋ
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ