ಬೆಂಗಳೂರು ಗ್ರಾಮಾಂತರ, ಸೆ.30: ಆನ್‌ಲೈನ್ ಬೆಟ್ಟಿಂಗ್ ಚಾಳಿಗೆ ಬಿದ್ದು ಸಾಲ ಮಾಡಿಕೊಂಡಿದ್ದ ವ್ಯಕ್ತಿಯೋರ್ವ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ನೆಲಮಂಗಲ(Nelamangala) ತಾಲೂಕಿನ ಅರಳಿಮರದಪಾಳ್ಯ ಗ್ರಾಮದಲ್ಲಿ ನಡೆದಿದೆ. ರಾಜು(28) ಆತ್ಮಹತ್ಯೆ ಮಾಡಿಕೊಂಡ ರ್ದುದೈವಿ. ಇತ ಸಾಲಗಾರರ ಕಿರುಕುಳ ತಾಳಲಾರದೆ ಕೊನೆಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ ಕುರಿತು ದಾಬಸ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಹೌದು, ಮತ್ತೊಂದು ಪ್ರಕರಣದಲ್ಲಿ ಒಂಟಿತನದಿಂದ ಬೇಸತ್ತು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನೆಲಮಂಗಲ ತಾಲೂಕಿನ ಸೊಂಡೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಸುಮಿತ್ರಾ(46) ನೇಣಿಗೆ ಶರಣಾದ ಮಹಿಳೆ. ಇನ್ನು ಮೃತ ಮಹಿಳೆ 2 ವರ್ಷದ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು, ಅವರಿಗೆ ಮಕ್ಕಳು ಕೂಡ ಇರಲಿಲ್ಲ. ಹೀಗಾಗಿ ಖಿನ್ನತೆಗೆ ಹೋಗಿದ್ದ ಅವರು, ಇಂದು ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾರೆ. ಈ ಕುರಿತು
ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.
ಇದನ್ನೂ ಓದಿ:ಮಗಳ ಜೊತೆ ಅನೈತಿಕ ಸಂಬಂಧ: ಯುವಕನನ್ನು ಕೊಂದು 24 ಗಂಟೆಯಲ್ಲೇ ಆತ್ಮಹತ್ಯೆ ಮಾಡಿಕೊಂಡ ತಂದೆ
ಆನೇಕಲ್: ಚಂದಾಪುರ ಪುರಸಭೆ ಡಿ ಗ್ರೂಪ್ ನೌಕರ ಆತ್ಮಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪುರಸಭೆ ಮುಖ್ಯಾಧಿಕಾರಿ ಶ್ವೇತಾಬಾಯಿ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶ್ವೇತಾಬಾಯಿ ವಿರುದ್ಧ ಆಸ್ಪತ್ರೆಯ ಮುಂದೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ವೇತಾಬಾಯಿ ಟಾರ್ಚರ್ ಕೊಟ್ಟಿದ್ದಾರೆ, ಕಿರುಕುಳದ ಬಗ್ಗೆ ಮೂರು ದಿನಗಳಿಂದ ಮನೆಯಲ್ಲಿ ಹೇಳುತ್ತಿದ್ದರು. ತುಂಬಾ ಕಿರುಕುಳ ನೀಡುತ್ತಿದ್ದಾರೆ ವಿಷ ತೆಗೆದುಕೊಳ್ಳುತ್ತೇನೆ ಎಂದಿದ್ದರು. ಇಂದು ಕಚೇರಿಯಲ್ಲಿ ಕಿರುಕುಳ ನೀಡಿದ್ದಕ್ಕೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ವಿರುದ್ಧ ವೇಣು ತಾಯಿ ಗಂಭೀರ ಆರೋಪ ಮಾಡಿದ್ದಾರೆ. ಇನ್ನು ಅಸ್ವಸ್ಥ ಡಿ ಗ್ರೂಪ್ ನೌಕರ ವೇಣುಗೆ ಚಂದಾಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಂದಾಪುರದ ಖಾಸಗಿ ಆಸ್ಪತ್ರೆಯ ಬಳಿ ಕುಟುಂಬಸ್ಥರು ಜಮಾಯಿಸಿದ್ದಾರೆ.
ರಾಜ್ಯದಲ್ಲಿ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:17 pm, Sat, 30 September 23