Students Suicide: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನೀರಿಗೆ ಹಾರಿ ಆತ್ಮಹತ್ಯೆ

ಅಗ್ನಿ ಶಾಮಕ ದಳದ ಸಿಬ್ಬಂದಿ ಓರ್ವ ಯುವತಿಯ ಮೃತದೇಹ ಪತ್ತೆ ಮಾಡಿದ್ದು ಮತ್ತೋರ್ವ ಯುವತಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಕೊಳಚೆ ನೀರಿನಲ್ಲಿ ಬಿದ್ದ ಕಾರಣ ಮೃತದೇಹಗಳ ಪತ್ತೆ ಹಚ್ಚಲು ಸಿಬ್ಬಂದಿ ಹರ ಸಾಹಸ ಪಡುತ್ತಿದ್ದಾರೆ.

Students Suicide: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ನೀರಿಗೆ ಹಾರಿ ಆತ್ಮಹತ್ಯೆ
ಘಟನಾ ಸ್ಥಳ
Follow us
TV9 Web
| Updated By: ಆಯೇಷಾ ಬಾನು

Updated on:Jul 26, 2022 | 8:44 PM

ದೇವನಹಳ್ಳಿ: ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು(Students) ನೀರಿಗೆ ಹಾರಿ ಆತ್ಮಹತ್ಯೆ(Suicide) ಮಾಡಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ತಿರುವರಂಗ ಬ್ರಿಡ್ಜ್ ನಲ್ಲಿ ನಡೆದಿದೆ. ಕೋಲಾರ ಜಿಲ್ಲೆ ಮಾಲೂರು ತಾಲೂಕಿನ ಲಕ್ಕೂರು ಪಿಯು ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯರಾದ ಸುಪ್ರಿತಾ (18) ಮತ್ತು ರಾಜೇಶ್ವರಿ (18) ಆತ್ಮಹತ್ಯೆಗೆ ಶರಣಾದವರು.

ಇಂದು ಮಧ್ಯಾಹ್ನ ಮಾಲೂರು ಮೂಲದ ಸುಪ್ರಿತ ಮತ್ತು ಹೊಸಕೋಟೆ ತಾಲೂಕಿನ ಬಾಗೂರು ಮೂಲದ ರಾಜೇಶ್ವರಿ ಇಬ್ಬರೂ ಒಟ್ಟಿಗೆ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಓರ್ವ ಯುವತಿಯ ಮೃತದೇಹ ಪತ್ತೆ ಮಾಡಿದ್ದು ಮತ್ತೋರ್ವ ಯುವತಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಕೊಳಚೆ ನೀರಿನಲ್ಲಿ ಬಿದ್ದ ಕಾರಣ ಮೃತದೇಹಗಳ ಪತ್ತೆ ಹಚ್ಚಲು ಸಿಬ್ಬಂದಿ ಹರ ಸಾಹಸ ಪಡುತ್ತಿದ್ದಾರೆ. ಅನುಗೊಂಡನಹಳ್ಳಿ ಪೊಲೀಸರು ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ. ಅನುಗೊಂಡನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾಗಿಣಾ ನದಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆ

ಕಲಬುರಗಿ : ಚಿಂಚೋಳಿ ತಾಲೂಕಿನ ಜಟ್ಟೂರು ಬಳಿ ಕಾಗಿಣಾ ನದಿಯಲ್ಲಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ಮಹಿಳೆಯ ಶವ ಎಲ್ಲಿಂದಲೋ ತೇಲಿಕೊಂಡು ಬಂದಿದೆ. ಮಹಿಳೆಯ ಶವ ಹೊರತಗೆಯಲು ಅಗ್ನಿಶಾಮಕ ಸಿಬ್ಬಂದಿ, ಸ್ಥಳೀಯ ಪೊಲೀಸರಿಂದ ಕಾರ್ಯಾಚರಣೆ ನಡೆಸಿದ್ದಾರೆ. ಸುಲೇಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಾರು ಡಿಕ್ಕಿಯಿಂದ 8 ವರ್ಷದ ಬಾಲಕಿಗೆ ಗಾಯ

ಬಾಗಲಕೋಟೆ: ಬಾಗಲಕೋಟೆ ನಗರದ ರೈಲ್ವೆ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು 8 ವರ್ಷದ ಬಾಲಕಿಗೆ ಡಿಕ್ಕಿ ಹೊಡೆದಿದೆ. ಬಾಲಕಿ ಉಲ್ಪತ್‌ಗೆ ಗಂಭೀರ ಗಾಯಗಳಾಗಿದ್ದು, ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸ ಲಾಗಿದೆ. ಬಾಗಲಕೋಟೆ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಹೊಸಾಳಿ ರೈಲ್ವೆ ಹಳಿ ಬಳಿ ಅಪರಿಚಿತ ಮಹಿಳೆ ಶವ ಪತ್ತೆ

ಉತ್ತರ ಕನ್ನಡ: ಕಾರವಾರ ತಾಲೂಕಿನ ಹೊಸಾಳಿ ರೈಲ್ವೆ ಹಳಿ ಬಳಿ ಅಪರಿಚಿತ ಮಹಿಳೆ ಶವ ಪತ್ತೆಯಾಗಿದೆ. ಮಹಿಳೆಯ ವಯಸ್ಸು ಸುಮಾರು 50 ವರ್ಷ ಎಂದು ಅಂದಾಜಿಸಲಾಗಿದೆ. ಮೃತ ಮಹಿಳೆಯ ದೇಹದ ಗುರುತು ಇನ್ನು ಪತ್ತೆಯಾಗಿಲ್ಲ. ಮಹಿಳೆ ಮೃತ ದೇಹವನ್ನು ಕಾರವಾರದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಚಿತ್ತಾಕುಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Published On - 8:33 pm, Tue, 26 July 22

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ