ಕೇಂದ್ರದಲ್ಲಿ ಕಾಂಗ್ರೆಸ್ ಇದ್ದಾಗ ಕರ್ನಾಟಕಕ್ಕೆ ಹಣಕಾಸು ಆಯೋಗದಿಂದ ಕೊಟ್ಟಿದ್ದು ಕೇವಲ 2 ಸಾವಿರ ಕೋಟಿ ರೂ ಎಂದ ಕೇಂದ್ರ ಸಚಿವೆ ಸ್ಮೃತಿ ಇರಾನಿ
Union Minister Smriti Irani: ಭಾರತದ ವಿರುದ್ಧ ಘೋಷಣೆ ಕೂಗಿದವರನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಸೇರಿಸಿಕೊಂಡಿದ್ದಾರೆ! ಇದು ರಾಷ್ಟ್ರದ್ರೋಹಕ್ಕೆ ಸಮನಾದ ಕೆಲಸ - ಕೇಂದ್ರ ಸಚಿವೆ ಸ್ಮೃತಿ ಇರಾನಿ
ದೊಡ್ಡಬಳ್ಳಾಪುರ: ಆಡಳಿತಾರೂಢ ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ (BJP Janaspandana Program) ಕೇಂದ್ರ ಸಚಿವೆ ಸ್ಮೃತಿ ಇರಾನಿ (Union Minister Smriti Irani) ಪಾಲ್ಗೊಂಡಿದ್ದು, ಸಭೆಯನ್ನುದ್ದೇಶಿಸಿ ಭಾಷಣ ಮಾಡಿದ್ದಾರೆ. ಕನ್ನಡದಲ್ಲಿ ಭಾಷಣ ಆರಂಭಿಸಿದ ಸ್ಮೃತಿ ಇರಾನಿ ಭಾಷಣದ ಆರಂಭದಲ್ಲಿ ಶಿವಕುಮಾರ ಸ್ವಾಮೀಜಿ, ಭೋಗನಂದೀಶ್ವರ ಸ್ವಾಮಿ, ಘಾಟಿ ಸುಬ್ರಮಣ್ಯ ಸ್ವಾಮಿ, ಸರ್. ಎಂ. ವಿಶ್ವೇಶ್ವರಯ್ಯ, ಮಾಸ್ತಿ ವೆಂಕಟೇಶ ಅಯ್ಯಂಗಾರ್, ಪ್ರವೀಣ್ ನೆಟ್ಟಾರು ಅವರುಗಳನ್ನು ಸ್ಮರಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಜನರಿಗೆ ತಾರತಮ್ಯ ಮಾಡಿದೆ. ಕಾಂಗ್ರೆಸ್ ಪಕ್ಷಪಾತದ ಸರ್ಕಾರ ಆಗಿತ್ತು. ಕೇಂದ್ರದಲ್ಲಿ ಕಾಂಗ್ರೆಸ್ ಇದ್ದಾಗ ಕರ್ನಾಟಕಕ್ಕೆ ಹಣಕಾಸು ಆಯೋಗದ ಮೂಲಕ ಕೊಟ್ಟಿದ್ದು 2 ಸಾವಿರ ಕೋಟಿ ರೂ ಮಾತ್ರವೇ. ಅದೇ ನಮ್ಮದು ಬಿಜೆಪಿ ಡಬಲ್ ಇಂಜಿನ್ ಸರ್ಕಾರವಿದೆ. ನಮ್ಮ ಕೇಂದ್ರ ಸರ್ಕಾರ ಈಗ ರಾಜ್ಯಕ್ಕೆ ಹಣಕಾಸು ಆಯೋಗದಿಂದ 5 ಸಾವಿರ ಕೋಟಿ ರೂ ಅನುದಾನ ಕೊಟ್ಟಿದೆ. ಕರ್ನಾಟಕದಲ್ಲಿ ರಸ್ತೆ ಮಾಡಲು ಕೇಂದ್ರ ಸರ್ಕಾರ 2022 ರಲ್ಲಿ ರಸ್ತೆ, ಹೈವೇ ಅಭಿವೃದ್ಧಿಗೆ 9,700 ಕೋಟಿ ರೂ ಅನುದಾನ ಕೊಟ್ಟಿದೆ. ಕಾಂಗ್ರೆಸ್ ಇದ್ದಾಗ ಅಲ್ಪ ಅನುದಾನ ಬರುತ್ತಿತ್ತು. ಕಳೆದ ಏಳು ವರ್ಷಗಳಲ್ಲಿ ಹೆದ್ದಾರಿಗಳ ಅಭಿವೃದ್ಧಿಗೆ 37 ಸಾವಿರ ಕೋಟಿ ರೂ ಕೊಡಲಾಗಿದೆ. ಭಾರತ್ ಮಾಲಾ ಯೋಜನೆ ಮೂಲಕ 55 ಸಾವಿರ ಕೋಟಿ ಕೊಡುವ ಉದ್ದೇಶ ಹೊಂದಿದೆ ಎಂದರು.
ನಮ್ಮ ಸರ್ಕಾರ ಬಂದ ನಂತರ 1600 ಕಿ.ಮೀ. ರೈಲ್ವೇ ಮಾರ್ಗ ನಿರ್ಮಾಣಗೊಂಡಿದೆ. 30 ವರ್ಷದ ಬಳಿಕ ಶಿಕ್ಷಣ ನೀತಿ ಬದಲಾಗಿದೆ. ನೂತನ ಶಿಕ್ಷಣ ನೀತಿ ಜಾರಿಯಲ್ಲಿ ಕರ್ನಾಟಕ ಮೊದಲ ರಾಜ್ಯ, ಇದಕ್ಕಾಗಿ ಬೊಮ್ಮಾಯಿ ಸರ್ಕಾರವನ್ನು ಅಭಿನಂದಿಸುವೆ. ಸಬ್ ಅರ್ಬನ್ ರೈಲು ಯೋಜನೆಗೆ 15 ಸಾವಿರ ಕೋಟಿ ಅನುದಾನ ಕೊಟ್ಟಿದ್ದು ಪ್ರಧಾನಿ ಮೋದಿ. ರೇಷ್ಮೆ ಉತ್ಪಾದನೆ ಹೆಚ್ಚಾಗಿರುವುದಕ್ಕೆ ರೇಷ್ಮೆ ವಲಯಕ್ಕೆ ಕೇಂದ್ರ ಕೊಟ್ಟ ಪ್ರೋತ್ಸಾಹ ಕಾರಣವಾಗಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಕೇಂದ್ರದಲ್ಲಿ ಕಾಂಗ್ರೆಸ್ ಇದ್ದಾಗ ಕರ್ನಾಟಕಕ್ಕೆ ತಾರತಮ್ಯವಾಗಿದೆ. ರಾಹುಲ್ ಗಾಂಧಿ ಭಾರತ್ ಜೋಡಿಸುತ್ತಿಲ್ಲ, ಭಾರತವನ್ನು ಮುರಿಯುವ ಯಾತ್ರೆ ಮಾಡ್ತಿದ್ದಾರೆ. ರಾಹುಲ್ ನೇತೃತ್ವದಲ್ಲಿ ಸರ್ದಾರ್ ಪಟೇಲ್ ಭಾವಚಿತ್ರವನ್ನೂ ಅವರ ಯಾತ್ರೆಯಲ್ಲಿ ಹಾಕಿಲ್ಲ. ಕನ್ಯಾಕುಮಾರಿಯಿಂದ ಭಾರತ್ ಜೋಡೋ ಮಾಡಿದ್ದರು. ಆದರೆ ವಿವೇಕಾನಂದರನ್ನೂ ಕನಿಷ್ಟ ಸ್ಮರಿಸಲಿಲ್ಲ ಈ ಕಾಂಗ್ರೆಸ್ ಎಂದು ವಿಷಾದ ವ್ಯಕ್ತಪಡಿಸಿದರು.
ಭಾರತದ ವಿರುದ್ಧ ಘೋಷಣೆ ಕೂಗಿದವರನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಸೇರಿಸಿಕೊಂಡಿದ್ದಾರೆ!
ಪ್ರವೀಣ್ ನೆಟ್ಟಾರು ಭಾವಚಿತ್ರ ಇರಿಸಿ ಶ್ರದ್ದಾಂಜಲಿ ಅರ್ಪಿಸಿದ್ದಕ್ಕೆ ಧನ್ಯವಾದ ಹೇಳುತ್ತೇನೆ. ಪ್ರವೀಣ್ ಹತ್ಯೆ ಮಾಡಿದವರು ಹೇಡಿಗಳು. ಅವರ ಉದ್ದೇಶ ಆತಂಕ ಸೃಷ್ಟಿಸುವುದೇ ಆಗಿತ್ತು. ದೇಶಕ್ಕಾಗಿ ಪ್ರವೀಣ್ ರಕ್ತ ಕೊಟ್ಟಿದ್ದಾನೆ. ಆತಂಕವಾದಿ ಯಾಕೂಬ್ ಮೈಮುನ್ ನ ಸಮಾಧಿಯನ್ನು ಕಾಂಗ್ರೆಸ್ ಸರ್ಕಾರ ಇರುವ ರಾಜ್ಯದಲ್ಲಿ ಸೌಂದರ್ಯೀಕರಣ ಮಾಡಲಾಗಿದೆ. ಇದನ್ನು ಪ್ರಶ್ನಿಸಲು ರಾಹುಲ್ ಗಾಂಧಿಗೆ ಧೈರ್ಯ ಇಲ್ಲ. ಭಯೋತ್ಪಾದನೆ ವಿರೋಧಿಸುವವರಾಗಿದ್ರೆ ಇದನ್ನು ಯಾಕೆ ರಾಹುಲ್ ಗಾಂಧಿ ವಿರೋಧಿಸಲಿಲ್ಲ? ಭಾರತದ ವಿರುದ್ಧ ಘೋಷಣೆ ಕೂಗಿದವರನ್ನು ಭಾರತ್ ಜೋಡೋ ಯಾತ್ರೆಯಲ್ಲಿ ಸೇರಿಸಿಕೊಂಡಿದ್ದಾರೆ! ಇದು ರಾಷ್ಟ್ರದ್ರೋಹಕ್ಕೆ ಸಮನಾದ ಕೆಲಸ. ಭಾರತ ವಿಭಜಿಸುವ ಹೇಳಿಕೆ ಕೊಟ್ಟವರಿಗೆ ಬೆಂಬಲ ಕೊಡುವುದು ರಾಷ್ಟ್ರದ್ರೋಹ. ಈ ರಾಷ್ಟ್ರದ್ರೋಹದ ಕೆಲಸವನ್ನು ಕರ್ನಾಟಕದ ಕಾಂಗ್ರೆಸ್ ಕಾರ್ಯಕರ್ತರು ಅವರ ನಾಯಕರಿಗೆ ಪ್ರಶ್ನಿಸಬೇಕಿದೆ. ಮಹಿಳೆಯೊಬ್ಬರನ್ನು ರಾಷ್ಟ್ರಪತಿ ಮಾಡಿದ್ದು ಬಿಜೆಪಿ. ಗಾಂಧಿ ಕುಟುಂಬದ ಚಮಚಾಗಳು ಮಹಿಳಾ ರಾಷ್ಟ್ರ ಪತಿ ವಿರುದ್ಧ ಟೀಕೆ, ನಿಂದನೆ ಮಾಡಿರುವುದು ಚೋದ್ಯವೇ ಸರಿ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದರು.
Published On - 3:38 pm, Sat, 10 September 22