ಕೊರೊನಾ ಆತಂಕದ ನಡುವೆ ಗ್ರಾಮಸ್ಥರಿಗೆ ಎದುರಾಗಿದೆ ಕುಡಿಯುವ ನೀರಿನ ಸಮಸ್ಯೆ

ದೊಡ್ಡಬಳ್ಳಾಪುರ: ಒಂದು ಕಡೆ ಕೊರೊನಾದಿಂದ ಜನರು ಭಯಭೀತರಾಗಿದ್ದರೆ. ಈ ಗ್ರಾಮದ ಜನರು ಕುಡಿಯಲು ಮತ್ತು ಬಳಕೆ ಮಾಡಲು ನೀರಿಲ್ಲದೆ ಪರದಾಡುವಂತ ಪರಿಸ್ಥತಿ ಉಂಟಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮದುರೆ ಸಮೀಪದ ಇಸ್ತೂರು ಪಾಳ್ಯ ಗ್ರಾಮದಲ್ಲಿ ಕಳೆದ20 ದಿನದಿಂದ ಕುಡಿಯಲು ಮತ್ತು ಬಳಕೆ ಮಾಡಲು ನೀರಿಲ್ಲದೆ ಪರದಾಡುವಂತಾಗಿದೆ. ಅಧಿಕಾರಿಗಳು ಕಂಡರೂ ಕಾಣದಂತೆ ಕುರುಡು ಜಾಣತನವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಸುಮಾರು 50 ಕುಟುಂಬಗಳು ನೀರಿಲ್ಲದೆ ಪರದಾಡುತ್ತಿದ್ದಾರೆ. ಜಾನುವಾರುಗಳಿಗೆ ನೀರಿಲ್ಲ ಸರಿಯಾಗಿ ಮಳೆಯಾಗದೆ ಕೆರೆ, ಕುಂಟೆಗಳಲ್ಲಿ ನೀರಿಲ್ಲದೆ […]

ಕೊರೊನಾ ಆತಂಕದ ನಡುವೆ ಗ್ರಾಮಸ್ಥರಿಗೆ ಎದುರಾಗಿದೆ ಕುಡಿಯುವ ನೀರಿನ ಸಮಸ್ಯೆ
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on:Jun 24, 2020 | 4:57 PM

ದೊಡ್ಡಬಳ್ಳಾಪುರ: ಒಂದು ಕಡೆ ಕೊರೊನಾದಿಂದ ಜನರು ಭಯಭೀತರಾಗಿದ್ದರೆ. ಈ ಗ್ರಾಮದ ಜನರು ಕುಡಿಯಲು ಮತ್ತು ಬಳಕೆ ಮಾಡಲು ನೀರಿಲ್ಲದೆ ಪರದಾಡುವಂತ ಪರಿಸ್ಥತಿ ಉಂಟಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮದುರೆ ಸಮೀಪದ ಇಸ್ತೂರು ಪಾಳ್ಯ ಗ್ರಾಮದಲ್ಲಿ ಕಳೆದ20 ದಿನದಿಂದ ಕುಡಿಯಲು ಮತ್ತು ಬಳಕೆ ಮಾಡಲು ನೀರಿಲ್ಲದೆ ಪರದಾಡುವಂತಾಗಿದೆ. ಅಧಿಕಾರಿಗಳು ಕಂಡರೂ ಕಾಣದಂತೆ ಕುರುಡು ಜಾಣತನವನ್ನು ಪ್ರದರ್ಶನ ಮಾಡುತ್ತಿದ್ದಾರೆ. ಗ್ರಾಮದಲ್ಲಿ ಸುಮಾರು 50 ಕುಟುಂಬಗಳು ನೀರಿಲ್ಲದೆ ಪರದಾಡುತ್ತಿದ್ದಾರೆ.

ಜಾನುವಾರುಗಳಿಗೆ ನೀರಿಲ್ಲ ಸರಿಯಾಗಿ ಮಳೆಯಾಗದೆ ಕೆರೆ, ಕುಂಟೆಗಳಲ್ಲಿ ನೀರಿಲ್ಲದೆ ಜಾನುವಾರುಗಳು ಬಾಯಾರಿಕೆಯಿಂದ ಬಳಲುವಂತಾಗಿದೆ. ಬಹುತೇಕ ಕುಟುಂಬಗಳು ಹೈನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತ್ತಿದ್ದು, ದನಕರುಗಳಿಗೆ ನೀರಿಲ್ಲದೆ ಪರದಾಡುತ್ತಿದ್ದಾರೆ.

ನೀರಿಗಾಗಿ ಸರ್ಕಾರದಿಂದ ಯಾವುದೇ ಸೌಕರ್ಯಗಳು ಸಿಗದ ಹಿನ್ನೆಲೆಯಲ್ಲಿ ಗ್ರಾಮಸ್ಥರು ತೋಟಗಳಲ್ಲಿನ ಬೋರ್‌ವೆಲ್‌ಗಳಿಗೆ ಅವಲಂಬಿತರಾಗಿದ್ದಾರೆ. ಮಳೆ ಇಲ್ಲದೆ ತೋಟಗಳಲ್ಲಿರುವ ಬೆಳೆಗಳಿಗೆ ನೀರು ಸಾಕಾಗುತ್ತಿಲ್ಲ. ಇನ್ನೂ ಬೋರ್‌ವೆಲ್‌ ನೀರನ್ನು ಎಲ್ಲಾ ಕುಟುಂಬಗಳಿಗೆ ಬಿಡಲು ಹೇಗೆ ಸಾಧ್ಯ ಎಂದು ತೋಟಗಳ ಮಾಲೀಕರು ಅಸಹನೆ ವ್ಯಕ್ತಪಡಿಸಿದ್ದಾರೆ. ಆದರೆ ತೋಟಗಳಲ್ಲಿ ಬಿಡುವ ನೀರನ್ನೇ ನಂಬಿ ಜೀವನ ಮಾಡುವಂತ ಪರಿಸ್ಥಿರಿ ಉದ್ಭವಿಸಿದೆ.

ಇನ್ನೂ ಮೂಲಭೂತ ಸೌಕರ್ಯವಾದ ಕುಡಿಯುವ ನೀರಿನ ಸಮಸ್ಯೆ ಗ್ರಾಮದಲ್ಲಿ ಉಲ್ಬಣಿಸಿದ್ದು ಹೊನ್ನಾವರ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಈ ಇಸ್ತೂರು ಪಾಳ್ಯ ಗ್ರಾಮಕ್ಕೆ ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಸೇರಿದಂತೆ ಸಂಬಂಧ ಪಟ್ಟ ಅಧಿಕಾರಿಗಳು ಯಾರೂ ಸಹ ಭೇಟಿ ನೀಡಿಲ್ಲ. ಪಿಡಿಒಗೆ ಕರೆ ಮಾಡಿದರೆ ಬೇಜವಾಬ್ದಾರಿ ಉತ್ತರವನ್ನು ನೀಡುತ್ತಾರೆ. ಇನ್ನು ಕೆಲವೊಮ್ಮೆ ಉತ್ತರಿಸದೆ ಸಂಪರ್ಕಕ್ಕೆ ಸಿಗುವುದಿಲ್ಲ ಎಂಬುದು ಗ್ರಾಮಸ್ಥರು ಆರೋಪಿಸಿದ್ದಾರೆ.

ನಮಗೆ ಕಳೆದ 20 ದಿನಗಳಿಂದ ಕುಡಿಯಲು ನೀರಿಲ್ಲದೆ ಜೀವನ ಕಷ್ಟವಾಗಿದೆ. ಅಧಿಕಾರಿಗಳು ಯಾರೂ ನಮ್ಮ ಕಡೆ ಗಮನ ಹರಿಸುತ್ತಿಲ್ಲ. ಬರಿ ಕಂದಾಯ ವಸೂಲಿ ಮಾಡಲು ಮಾತ್ರ ಬರುತ್ತಾರೆ. ನಮ್ಮ ಕಷ್ಟಗಳಿಗೆ ಸ್ಪಂದಿಸುವುದಿಲ್ಲ ನಮಗೆ ಕುಡಿಯಲು ನೀರು ಕೊಡಿ ಇಲ್ಲದಿದ್ದರೆ ನೀರಿಲ್ಲದೆ ಸಾಯಬೇಕಾಗುತ್ತದೆ ಎಂದು ಗ್ರಾಮಸ್ಥೆ ಲಕ್ಷ್ಮಮ್ಮ ತಮ್ಮ ಅಳಲನ್ನ ತೋಡಿಕೊಂಡಿದ್ದಾರೆ‌.

ನೀರಿನ ಸಮಸ್ಯೆ ಬಗೆಹರಿಸಲು ಪಂಚಾಯಿತಿ ಅಧಿಕಾರಿಗಳಿಗೆ ಸೂಚನೆ ನೀಡುತ್ತೇನೆ. ಆದಷ್ಟು ಬೇಗ ಪರ್ಯಾಯವಾಗಿ ನೀರನ್ನು ಒದಗಿಸಲು ತಿಳಿಸುತ್ತೇನೆ ಎಂದು ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿ ಮುರುಡಯ್ಯ ತಿಳಿಸಿದ್ದಾರೆ.

Published On - 4:06 pm, Wed, 24 June 20

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ