AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಗೇ ಚಟ್ಟ ಕಟ್ಟಿದ ಪತ್ನಿ: ಕೊಲೆ ಪ್ಲ್ಯಾನ್​​ ಕೇಳಿದ್ರೆ ಶಾಕ್​​ ಆಗ್ತೀರ!

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕೆ ಪತ್ನಿಯೇ ಪ್ರಿಯಕರನ ಜೊತೆ ಸೇರಿ ಪತಿ ಕತೆಯನ್ನ ಮುಗಿಸಿರುವ ಘಟನೆ ನೆಲಮಂಗಲದ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸುಟ್ಟ ಸ್ಥಿತಿಯಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಮೃತದೇಹ ಕೇಸ್​​ ಬೆನ್ನತ್ತಿದ್ದ ಪೊಲೀಸರು ಕೊಲೆಯ ರಹಸ್ಯ ಭೇದಿಸಿದ್ದಾರೆ. ಪ್ರಕರಣ ಸಂಬಂಧ ಮೃತ ವ್ಯಕ್ತಿಯ ಪತ್ನಿ ಸೇರಿ ಮೂವರು ಪೊಲೀಸರ ಅತಿಥಿಯಾಗಿದ್ದಾರೆ.

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪತಿಗೇ ಚಟ್ಟ ಕಟ್ಟಿದ ಪತ್ನಿ: ಕೊಲೆ ಪ್ಲ್ಯಾನ್​​ ಕೇಳಿದ್ರೆ ಶಾಕ್​​ ಆಗ್ತೀರ!
ಕೊಲೆ ಆರೋಪಿ ಶರಣಮ್ಮ ಮತ್ತು ಕೊಲೆಯಾದ ಬಸವರಾಜು
ಮಂಜುನಾಥ ಕೆಬಿ
| Updated By: ಪ್ರಸನ್ನ ಹೆಗಡೆ|

Updated on: Nov 28, 2025 | 3:12 PM

Share

ನೆಲಮಂಗಲ, ನವೆಂಬರ್​​ 28: ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಯಾದಗಿರಿ ಮೂಲದ ಬಸವರಾಜು (28) ಕೊಲೆಯಾದ ವ್ಯಕ್ತಿಯಾಗಿದ್ದು, ಪ್ರಕರಣ ಸಂಬಂಧ ಬಸವರಾಜು ಪತ್ನಿ ಶರಣಮ್ಮ(25), ಪ್ರಿಯಕರ ವೀರಭದ್ರ (19) ಮತ್ತು ಅನಿಲ್ ಎಂಬಾತನನ್ನು ಬಂಧಿಸಲಾಗಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನೇ ಪತ್ನಿ ಕೊಲೆ ಮಾಡಿಸೋರೋದು ತನಿಖೆ ವೇಳೆ ಬಯಲಾಗಿದೆ.

ನಾಲ್ಕು ವರ್ಷಗಳ ಹಿಂದೆ ಮದುವೆ ಆಗಿದ್ದ ಬಸವರಾಜು, ಶರಣಮ್ಮ ದಂಪತಿ ತಿಗಳರಪಾಳ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಆರೋಪಿಗಳಲ್ಲಿ ಓರ್ವನಾದ ವೀರಭದ್ರ ತಂದೆ ಬಳಿ ಈ ದಂಪತಿ ಗಾರೆ ಕೆಲಸ ಮಾಡಿಕೊಂಡಿದ್ದು, ವೀರಭದ್ರ ಕೆಲಸಗಾರರನ್ನು ನೋಡಿಕೊಳ್ಳುತ್ತಿದ್ದ. ಈ ವೇಳೆ ವೀರಭದ್ರ ಮತ್ತು ಶರಣಮ್ಮ ನಡುವೆ ಸಲುಗೆ ಬೆಳೆದಿದೆ. ಆ ಸಲುಗೆ ಅಕ್ರಮ ಸಂಬಂಧದ ವರೆಗೆ ಹೋಗಿದೆ. ಹೀಗಾಗಿ ನ.19ರಂದು ಮದ್ಯ ಸೇವಿಸಿ ಬಸವರಾಜು ಮಲಗಿದ್ದ ವೇಳೆ ಪ್ರಿಯಕರನನ್ನ ಮನೆಗೆ ಕರೆಸಿಕೊಂಡು ಶರಣಮ್ಮ ಕೊಲ್ಲಿಸಿದ್ದಾಳೆ. ತಲೆ ಮೇಲೆ ಕಲ್ಲು ಎತ್ತಿಹಾಕಿ, ನಂತರ ನೇಣು ಬಿಗಿದು ಬರ್ಬರವಾಗಿ ಬಸವರಾಜು ಕೊಲೆ ಮಾಡಲಾಗಿದೆ. ಬಳಿಕ ಶವವನ್ನ ಗಂಗೊಂಡಹಳ್ಳಿ ನಿರ್ಜನ ಪ್ರದೇಶಕ್ಕೆ ಆರೋಪಿಗಳು ಸಾಗಿಸಿದ್ದು, ಪೆಟ್ರೋಲ್ ಸುರಿದು ಶವವನ್ನು ಸುಟ್ಟುಹಾಕಿದ್ದಾರೆ.

ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪ್ರೇಯಸಿಯನ್ನು ಕೊಂದು, ಆಕೆಯ ಶವವನ್ನು ಕಾರಲ್ಲೇ ಬಿಟ್ಟು ಮಲಗಿದ ಆಸಾಮಿ!

ಕೊಲೆ ಬಳಿಕ ನಾಟಕ ಮಾಡಿದ್ದ ಶರಣಮ್ಮ

ಬಸವರಾಜು ಕೊಲೆಗೆ ಒಂದು ತಿಂಗಳ ಹಿಂದೆಯೇ ಪ್ಲ್ಯಾನ್​​ ನಡೆದಿತ್ತು. ಸುರೇಶ್​​ ಮೃತದೇಹ ಸುಟ್ಟ ಮರುದಿನ ಅದೇ ಸ್ಥಳಕ್ಕೆ ಬಂದು ಆರೋಪಿಗಳು ನೋಡಿ ಹೋಗಿದ್ದರು. ಈ ವೇಳೆ ಮೃತದೇಹ ಇಲ್ಲದನ್ನ ಕಂಡು ಹೋಗಲಿ ಬಿಡು ಎಂದುಕೊಂಡಿದ್ದರು. ಆ ಬಳಿಕ ಮನೆಯಲ್ಲಿ ಚೆಲ್ಲಿದ್ದ ನೆತ್ತರು ತೊಳೆದ ಶರಣಮ್ಮ, ನನ್ನ ಗಂಡ ಕಾಣೆಯಾಗಿದ್ದಾನೆ ಹುಡುಕಿಕೊಡಿ ಎಂದು ಬ್ಯಾಡರಹಳ್ಳಿ ಠಾಣೆ ಮೆಟ್ಟಿಲೇರಿದ್ದಳು. ಆದರೆ ಅಷ್ಟರಲ್ಲಾಗಲೇ ಪೊಲೀಸರಿಗೆ ಕೊಲೆ ಬಗ್ಗೆ ಮಾಹಿತಿ ಸಿಕ್ಕಿತ್ತು ಎನ್ನಲಾಗಿದೆ. ಬಸವರಾಜು ಕೊಲೆ ಬಳಿಕ ಬಿಳಿ ಬಣ್ಣದ ಕಾರ್​ನಲ್ಲಿ ಆರೋಪಿಗಳು ಮೃತದೇಹ ಸಾಗಿಸಿರುವ ದೃಶ್ಯ ಕೂಡ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ. ಇದೇ ಆಧಾರದಲ್ಲಿ ಪೊಲೀಸರು ಆರೋಪಿಗಳನ್ನ ಹೆಡೆಮುರಿ ಕಟ್ಟಿದ್ದಾರೆ ಎನ್ನಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ