AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯ ಫೇಸ್‌ಬುಕ್ ಖಾತೆಯಲ್ಲಿ ಪತ್ನಿಯ ಆರ್​ಐಪಿ ಪೋಸ್ಟ್; ಮನೆಯಲ್ಲಿದ್ದ ಹೆಂಡತಿ ನಿಗೂಡವಾಗಿ ನಾಪತ್ತೆ

ಈ ಬಗ್ಗೆ ಗಂಡ ಮುನಿಕೃಷ್ಣ ಸ್ಪಷ್ಟನೆ ಕೊಟ್ಟಿದ್ದು, ನಾನು ಆರ್​ಐಪಿ ಪೋಸ್ಟ್ ಮಾಡಿಲ್ಲ ಪತ್ನಿಯೆ ಪೋಸ್ಟ್ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ಪ್ರತ್ಯಾರೋಪ ಮಾಡಿದ್ದಾರೆ.

ಪತಿಯ ಫೇಸ್‌ಬುಕ್ ಖಾತೆಯಲ್ಲಿ ಪತ್ನಿಯ ಆರ್​ಐಪಿ ಪೋಸ್ಟ್; ಮನೆಯಲ್ಲಿದ್ದ ಹೆಂಡತಿ ನಿಗೂಡವಾಗಿ ನಾಪತ್ತೆ
ಲೀಲಾವತಿ ಮತ್ತು ಮುನಿಕೃಷ್ಣ
TV9 Web
| Updated By: preethi shettigar|

Updated on:Feb 26, 2022 | 1:32 PM

Share

ಬೆಂಗಳೂರು: ಪತ್ನಿ ನಾಪತ್ತೆಯಾದ ಬೆನ್ನೆಲ್ಲೇ ಪತಿ ಫೇಸ್‌ಬುಕ್(Facebook) ಖಾತೆಯಲ್ಲಿ ಆರ್​ಐಪಿ(RIP) ಎಂದು ಪೋಸ್ಟ್ ಮಾಡಿದ ಘಟನೆ ಬೆಂಗಳೂರು ನಗರದ ದೊಡ್ಡಬಳ್ಳಾಪುರ ತಾಲೂಕಿನ ಊದನಹಳ್ಳಿ ಬಳಿ ನಡೆದಿದೆ. ಲೀಲಾವತಿ(24) ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಪತಿ ಮುನಿಕೃಷ್ಣನೇ ಲೀಲಾವತಿಯನ್ನು ಕೊಂದಿದ್ದಾನೆಂದು ಪೋಷಕರು ಗಂಭೀರ ಆರೋಪ(Allegation) ಮಾಡಿದ್ದಾರೆ. ಸದ್ಯ ಈ ಸಂಬಂಧ ದೊಡ್ಡಬಳ್ಳಾಪುರ ಮಹಿಳಾ ಠಾಣೆಗೆ ಲೀಲಾವತಿ ಪೋಷಕರು ದೂರು ನೀಡಿದ್ದಾರೆ.

ಸಂಬಂಧಿಕರ ಮನೆಗೆ ಹುಟ್ಟು ಹಬ್ಬದ ಪಾರ್ಟಿಗೆ ಹೋಗಿದಕ್ಕೆ ಗಂಡ‌- ಹೆಂಡತಿ ನಡುವೆ ಜಗಳವಾಗಿದೆ. ಬೇಡ ಅಂದರು ಬರ್ತಡೆಗೆ ಹೋಗಿದ್ದಿಯಾ ಎಂದು ಇಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಜಗಳದ ನಂತರ ಮನೆಯಲ್ಲಿದ್ದ ಪತ್ನಿ ಮೊಬೈಲ್ ಸ್ವಿಚ್ ಆಫ್​ ಮಾಡಿಕೊಂಡು ನಾಪತ್ತೆಯಾಗಿದ್ದಾರೆ. ಹೀಗಾಗಿ ಗಂಡನೆ ಕೊಲೆ ಮಾಡಿ ಫೇಸ್​ಬುಕ್​ನಲ್ಲಿ ಪೋಸ್ಟ್ ಮಾಡಿರಬಹುದು ಎಂದು ಗೃಹಿಣಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

ಈ ಬಗ್ಗೆ ಗಂಡ ಮುನಿಕೃಷ್ಣ ಸ್ಪಷ್ಟನೆ ಕೊಟ್ಟಿದ್ದು, ನಾನು ಆರ್​ಐಪಿ ಪೋಸ್ಟ್ ಮಾಡಿಲ್ಲ ಪತ್ನಿಯೆ ಪೋಸ್ಟ್ ಮಾಡಿ ನಾಪತ್ತೆಯಾಗಿದ್ದಾಳೆ ಎಂದು ಪ್ರತ್ಯಾರೋಪ ಮಾಡಿದ್ದಾರೆ. ಒಟ್ಟಾರೆ ಗಂಡ- ಹೆಂಡತಿ ಮತ್ತು ಪೇಸ್ಬುಕ್ ಪೋಸ್ಟ್ ಜಗಳ ಪೊಲೀಸರಿಗೆ ತಲೆನೋವಾಗಿದೆ. ಸದ್ಯ ನಾಪತ್ತೆಯಾಗಿರುವ ಗೃಹಿಣಿ ಲೀಲಾವತಿಗಾಗಿ ಪೊಲೀಸರು, ಕುಟುಂಬಸ್ಥರು ಹುಡುಕಾಟ ನಡೆಸುತ್ತಿದ್ದಾರೆ.

ಗಲಾಟೆ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಕೊಲೆಗೈದ ಪತಿ

ಗಲಾಟೆ ವೇಳೆ ಮಚ್ಚಿನಿಂದ ಕೊಚ್ಚಿ ಪತ್ನಿಯನ್ನು ಪತಿ ಕೊಲೆಗೈದ ಘಟನೆ ಬೆಂಗಳೂರಿನ ಗೋವಿಂದಪುರದ ಭೈರಪ್ಪ ಲೇಔಟ್​ನಲ್ಲಿ ನಡೆದಿದೆ. ಪತ್ನಿ ಆಯೇಷಾ ಬಾನು ತನ್ನನ್ನು ಸೇರುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಪತಿ, ಎಷ್ಟೇ ರಾಜಿ ಪಂಚಾಯತಿ ಮಾಡಿದ್ದರೂ ಸೇರದಿದ್ದಕ್ಕೆ ಕೊಲೆ ಮಾಡಿದ್ದಾನೆ. ಆರೋಪಿ ಮುಜಾಮಿಲ್​ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಧರ್ಮಸ್ಥಳದ ಕನ್ಯಾಡಿ ಬಳಿ ದಿನೇಶ್ ಕೊಲೆ ಪ್ರಕರಣ; ಟಿವಿ9ಗೆ ಹಲ್ಲೆ ಮಾಡಿದ ಸಿಸಿಟಿವಿ ದೃಶ್ಯ ಲಭ್ಯ

Viral Video: 7 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬೀದಿ ನಾಯಿಗೆ ಆರತಿ ಎತ್ತಿ ಸ್ವಾಗತ!; ನೀವೂ ಈ ವಿಡಿಯೋ ಕಣ್ತುಂಬಿಕೊಳ್ಳಿ

Published On - 1:04 pm, Sat, 26 February 22

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ