AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮದುವೆಯ ಬಳಿಕವೂ ಸಂಬಂಧಿಕನ ಜೊತೆ ಪ್ರೀತಿ; ಬಾಡಿಗೆ ಮನೆಯಲ್ಲಿ ಪ್ರಿಯಕರನ ಜೊತೆ ಆತ್ಮಹತ್ಯೆಗೆ ಶರಣಾದ ಮಹಿಳೆ

ಆತ್ಮಹತ್ಯೆ ಮಾಡಿಕೊಂಡ ಜ್ಯೋತಿ ಮದುವೆಯಾದ ನಂತರವು ಸಂಬಂಧಿಕನಾಗಿದ್ದ ಬಸವರಾಜ್ ಜೊತೆ ಪ್ರೀತಿಯಲ್ಲಿದ್ದರು. ಪ್ರೀತಿಯಿಂದಾಗಿ ಮನೆಬಿಟ್ಟು ಪ್ರಿಯಕರನ ಜೊತೆ ಬಂದಿದ್ದರು.

ಮದುವೆಯ ಬಳಿಕವೂ ಸಂಬಂಧಿಕನ ಜೊತೆ ಪ್ರೀತಿ; ಬಾಡಿಗೆ ಮನೆಯಲ್ಲಿ ಪ್ರಿಯಕರನ ಜೊತೆ ಆತ್ಮಹತ್ಯೆಗೆ ಶರಣಾದ ಮಹಿಳೆ
ಬಸವರಾಜ್, ಜ್ಯೋತಿ
Follow us
TV9 Web
| Updated By: ಆಯೇಷಾ ಬಾನು

Updated on:Jan 18, 2022 | 9:25 AM

ದೇವನಹಳ್ಳಿ: ಮದುವೆಯಾಗಿದ್ದ ಮಹಿಳೆ, ಪ್ರಿಯಕರ ನೇಣಿಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಪಟ್ಟಣದ ಶಾಂತಿನಗರದ ಮನೆಯಲ್ಲಿ ನಡೆದಿದೆ. ರಾಯಚೂರಿನ ಬಸವರಾಜ್(28), ಜ್ಯೋತಿ(26) ಆತ್ಮಹತ್ಯೆ ಮಾಡಿಕೊಂಡವರು.

ಆತ್ಮಹತ್ಯೆ ಮಾಡಿಕೊಂಡ ಜ್ಯೋತಿ ಮದುವೆಯಾದ ನಂತರವು ಸಂಬಂಧಿಕನಾಗಿದ್ದ ಬಸವರಾಜ್ ಜೊತೆ ಪ್ರೀತಿಯಲ್ಲಿದ್ದರು. ಪ್ರೀತಿಯಿಂದಾಗಿ ಮನೆಬಿಟ್ಟು ಪ್ರಿಯಕರನ ಜೊತೆ ಬಂದಿದ್ದರು. ಆದ್ರೆ ಈಗ ಜ್ಯೋತಿ ಹಾಗೂ ಆಕೆಯ ಪ್ರಿಯಕರ ಇಬ್ಬರೂ ನೇಣಿಗೆ ಶರಣಾಗಿದ್ದಾರೆ. ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

20 ದಿನಗಳಿಂದಷ್ಟೆ ಗಂಡ ಹೆಂಡತಿ ಅಂತ ಹೇಳಿ ಬಸವರಾಜ್ ಮತ್ತು ಜ್ಯೋತಿ ಮನೆ ಬಾಡಿಗೆಗೆ ಪಡೆದುಕೊಂಡಿದ್ರು. ಆದ್ರೆ ಬಾಡಿಗೆ ಮನೆಯಲ್ಲೆ ಕಳೆದ ಭಾನುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮನೆಯಿಂದ ದುರ್ವಾಸನೆ ಬರ್ತಿದ್ದನ್ನ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತಿ ಹಿನ್ನೆಲೆ ಸ್ಥಳಕ್ಕೆ ಬಂದ ದೇವನಹಳ್ಳಿ ಪೊಲೀಸರು ಮನೆ ಬಾಗಿಲು ತೆರೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೈದ್ಯನ ಮನೆಗೆ ನುಗ್ಗಿ ದರೋಡೆ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣದಲ್ಲಿ ವೈದ್ಯ ರಾಜಕುಮಾರ್ ಮನೆಗೆ ನುಗ್ಗಿ ಚಾಕು, ಗನ್ ತೋರಿಸಿ ದರೋಡೆ ಮಾಡಲಾಗಿದೆ. ವೈದ್ಯನ ಅಳಿಯ, ಮಗಳ ಕತ್ತಿನಲ್ಲಿದ್ದ ಚಿನ್ನದ ಸರಗಳು, ನಗದು ದೋಚಿ ನಾಲ್ವರು ದರೋಡೆಕೋರರು ಪರಾರಿಯಾಗಿದ್ದಾರೆ. ವಿಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟೈರ್ ಸ್ಫೋಟಗೊಂಡು ಕಾರು ಅಪಘಾತ, ಇಬ್ಬರ ದುರ್ಮರಣ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಸೇತುವೆ ಬಳಿ ಭೀಕರ ಅಪಘಾತ ಸಂಭವಿಸಿದೆ.ಟೈರ್ ಸ್ಫೋಟಗೊಂಡು ಕಾರು ಅಪಘಾತವಾಗಿದ್ದು ಕಾರಿನಲ್ಲಿದ್ದ ರಾಜಶೇಖರ್, ಮಣಿಕಂಠ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Gold Rate: ಇಂದು ಆಭರಣ ಖರೀದಿಸುವವರು ಚಿನ್ನ, ಬೆಳ್ಳಿ ದರ ಎಷ್ಟಿದ ಅಂತ ನೋಡಿ

Published On - 8:59 am, Tue, 18 January 22

ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಮಳೆಯಲ್ಲಿ ಕೊಚ್ಚಿಹೋಗುತ್ತಿದ್ದ ಶೇಂಗಾ ಉಳಿಸಿಕೊಳ್ಳಲು ಯುವಕನ ಪರದಾಟ
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ