ಬೆಂಗಳೂರಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ವಿವಾಹಿತ ಮಹಿಳೆ ಅನುಮಾನಾಸ್ಪದವಾಗಿ ಆತ್ಮಹತ್ಯೆ

Nelamangala: ಪತಿ ಸೈಯದ್ ಜೊತೆ 6 ವರ್ಷದ ಹಿಂದೆ ಶ್ವೇತಾ ಮದುವೆಯಾಗಿದ್ದರು. ಟಾಟಾ AIG ಇನ್ಸೂರೆನ್ಸ್ ಕಂಪನಿಯಲ್ಲಿ ವರ್ಕ್ ಫ್ರಮ್ ಹೋಂ ಕೆಲಸ ಮಾಡುತ್ತಿದ್ದ ಶ್ವೇತಾ, ಅನುಮಾನಾಸ್ಪದವಾಗಿ ಬೆಡ್ ರೂಂ ನಲ್ಲಿರುವ ಫ್ಯಾನ್ ಗೆ ನೇತು ಹಾಕುವ ಹುಕ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಂಗಳೂರಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ವಿವಾಹಿತ ಮಹಿಳೆ ಅನುಮಾನಾಸ್ಪದವಾಗಿ ಆತ್ಮಹತ್ಯೆ
ಬೆಂಗಳೂರಲ್ಲಿ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಮಹಿಳೆ ಅನುಮಾನಾಸ್ಪದವಾಗಿ ಆತ್ಮಹತ್ಯೆ
Edited By:

Updated on: Aug 06, 2022 | 5:11 PM

ಬೆಂಗಳೂರು: ಬೆಂಗಳೂರಲ್ಲಿ ದಾಸನಪುರ ಎಪಿಎಂಸಿ ಬಳಿಯ ಐಷಾರಾಮಿ ಅಪಾರ್ಟ್‌ಮೆಂಟ್‌ನಲ್ಲಿ ಯುವ ಮಹಿಳೆಯೊಬ್ಬರು ಅನುಮಾನಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ವೇತಾ (32) ಮೃತ ಮಹಿಳೆ. ಉದ್ಯೋಗದ ವಿಚಾರದಲ್ಲಿ ಖಿನ್ನತೆಗೊಳಗಾಗಿ ಜಿಗುಪ್ಸೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಶ್ವೇತಾ ಸಂಬಂಧಿ ಮೇಘಾ ಎಂಬುವವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಪತಿ ಸೈಯದ್ ಜೊತೆ 6 ವರ್ಷದ ಹಿಂದೆ ಶ್ವೇತಾ ಮದುವೆಯಾಗಿದ್ದರು. ಟಾಟಾ AIG ಇನ್ಸೂರೆನ್ಸ್ ಕಂಪನಿಯಲ್ಲಿ ವರ್ಕ್ ಫ್ರಮ್ ಹೋಂ ಕೆಲಸ ಮಾಡುತ್ತಿದ್ದ ಶ್ವೇತಾ, ಅನುಮಾನಾಸ್ಪದವಾಗಿ ಬೆಡ್ ರೂಂ ನಲ್ಲಿರುವ ಫ್ಯಾನ್ ಗೆ ನೇತು ಹಾಕುವ ಹುಕ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೆಲಮಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ.

ಅಪಾರ್ಟ್ಮೆಂಟ್ ನಲ್ಲಿ ಮಹಿಳೆ ಅನುಮಾನಸ್ಪದವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಸುದ್ದಿ ತಿಳಿದು ಸುದ್ದಿ ಮಾಡಲು ತೆರಳಿದ್ದ ಟಿವಿ 9 ವರದಿಗಾರನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಲು ಯತ್ನಿಸಲಾಗಿದೆ. ಅವಾಚ್ಯ ಶಬ್ದದಿಂದ ನಿಂದಿಸಿ ಕೈಯಲ್ಲಿದ್ದ ಕ್ಯಾಮರಾ ಕಿತ್ತುಕೊಳ್ಳಲು ಯತ್ನಿಸಿದ್ದಾರೆ. ಮೃತಳ ಸೋದರಮಾವ ನಾರಾಯಣ ಎಂಬುವವರು ಸುದ್ದಿ ಮಾಡದಂತೆ ಧಮ್ಕಿ ಹಾಕಿದ್ದಾರೆ. ಆದರೆ ಪೊಲೀಸರು ಸ್ಥಳದಲ್ಲಿ ಇರಲಿಲ್ಲ. ಠಾಣೆಯಲ್ಲೇ ಎಲ್ಲಾ ಪ್ರಕ್ರಿಯೆ ಮುಗಿಸಿ ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ. ನಿಯಮಾನುಸಾರ UDR ಮರಣೋತ್ತರ ಪರೀಕ್ಷೆ ವೇಳೆ ಹಾಜರಿರಬೇಕಿದ್ದ ಪೊಲೀಸರು ನಾಪತ್ತೆಯಾಗಿರುವುದು ಅನುಮಾನ ಮೂಡಿಸಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.

ಟಾಟಾ ಸುಮೋ ಪಲ್ಟಿಯಾಗಿ ಸ್ಥಳದಲ್ಲೇ ವೃದ್ಧ ಸಾವು:

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಕಂಬಾಳು ಬಳಿ ಟಾಟಾ ಸುಮೋ ಪಲ್ಟಿಯಾಗಿ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೊಹಮ್ಮದ್ ರಸುಲ ಶಾಪುರಕರ್(73) ಮೃತ‌ ದುರ್ದೈವಿ. ಮೃತ ವೃದ್ಧ ವಿಜಯಪುರ ಜಿಲ್ಲೆ ತಾಳಿಕೋಟೆ ಮೂಲದವರು. ಮಾಗಡಿಯಿಂದ ತುಮಕೂರಿಗೆ ವಾಪಸಾಗುತ್ತಿದ್ದ ವೇಳೆ ದುರಂತ ಸಂಭವಿಸಿದೆ. ದಾಬಸ್​ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 5:06 pm, Sat, 6 August 22