ದೇವನಹಳ್ಳಿ: ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಸಾವು

ದೇವಸ್ಥಾನದ ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಹೊಸಕೋಟೆಯ ಕಾವೇರಿನಗರ ನಿವಾಸಿ ಸಿದ್ದಗಂಗಮ್ಮ (60) ಮೃತದುರ್ದೈವಿ.

ದೇವನಹಳ್ಳಿ: ದೇವಸ್ಥಾನದ ಪ್ರಸಾದ ಸೇವಿಸಿ ಮಹಿಳೆ ಸಾವು
ಮೃತ ಸಿದ್ದಗಂಗಮ್ಮ
Edited By: ವಿವೇಕ ಬಿರಾದಾರ

Updated on: Dec 25, 2023 | 2:32 PM

ದೇವನಹಳ್ಳಿ, ಡಿಸೆಂಬರ್​ 25: ದೇವಸ್ಥಾನದ (Temple) ಪ್ರಸಾದ ಸೇವಿಸಿ ಅಸ್ವಸ್ಥರಾಗಿ ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ಹೊಸಕೋಟೆಯ (Hoskote) ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಹೊಸಕೋಟೆಯ ಕಾವೇರಿನಗರ ನಿವಾಸಿ ಸಿದ್ದಗಂಗಮ್ಮ (60) ಮೃತದುರ್ದೈವಿ. ಹನುಮ ಜಯಂತಿ ಹಿನ್ನೆಲೆಯಲ್ಲಿ ಹೊಸಕೋಟೆಯ ವೆಂಕಟರಮಣಸ್ವಾಮಿ, ಊರುಬಾಗಿಲು ಆಂಜನೇಯ, ಕೋಟೆ ಆಂಜನೇಯಸ್ವಾಮಿ ದೇವಾಲಯದಲ್ಲಿ ಭಕ್ತರು ಪುಲಿಯೋಗರೆ, ಪಾಯಸ, ಲಡ್ಡು ಸೇವಿಸಿದ್ದರು.

ದೇವಾಲಯಗಳಲ್ಲಿ ಪ್ರಸಾದ ತಿಂದಿದ್ದ 100ಕ್ಕೂ ಹೆಚ್ಚು ಭಕ್ತರು ರಾತ್ರಿಯಿಂದ ವಾಂತಿ ಭೇದಿಯಿಂದ ಅಸ್ವಸ್ಥಗೊಂಡಿದ್ದರು. ಅಸ್ವಸ್ಥರನ್ನು ಹೊಸಕೋಟೆ, ಕೋಲಾರ, ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಗೆ ದಾಖಲಾದವರಲ್ಲಿ 22ಕ್ಕೂ ಅಧಿಕ ಜನರ ಸ್ಥಿತಿ ಗಂಭೀರವಾಗಿದೆ. ಇವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: ರಾಯಚೂರು: ಊಟ ಸೇವಿಸಿದ್ದ ಹಾಸ್ಟೆಲ್​ನ 14 ವಿದ್ಯಾರ್ಥಿಯರು ಅಸ್ವಸ್ಥ

ಇನ್ನು ಸಿದ್ದಗಂಗಮ್ಮ ಅವರಿಗೆ ಪತಿ ಶಿವಣ್ಣ ಲಾಡು ಪ್ರಸಾದ ತಂದುಕೊಂಟಿದ್ದಾರೆ. ಈ ಪ್ರಸಾದವನ್ನು ತಿಂದ ಸಿದ್ದಗಂಗಮ್ಮ ಅವರು ಬೆಳಿಗ್ಗೆ ವಾಂತಿ ಭೇದಿಯಿಂದ ಬಳಲುತ್ತಿದ್ದರು. ಕೂಡಲೆ ಅವರನ್ನು ಸಿಲಿಕಾನ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಿದ್ದಗಂಗಮ್ಮ ಮೃತಪಟ್ಟಿದ್ದಾರೆ.

ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ಪತ್ರೆಯಲ್ಲಿ 30 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀನಿವಾಸ ನರ್ಸಿಂಗ್ ಹೋಮ್​ನಲ್ಲಿ 21 ಜನರಿಗೆ, ಹೊಸಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ 7 ಜನರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈವರೆಗೂ 70ಕ್ಕೂ ಹೆಚ್ಚು ಜನ ಚಿಕಿತ್ಸೆ ಪಡೆದು ವಾಪಸ್​ ಆಗಿದ್ದಾರೆ. ಸಿಲಿಕಾನ್ ಸಿಟಿ ಆಸ್ಪತ್ರೆಗೆ ಹೆಚ್ಚುವರಿ ಎಸ್​ಪಿ ಪುರುಷೋತ್ತಮ್ ಭೇಟಿ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:20 pm, Mon, 25 December 23

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us