ದೇವನಹಳ್ಳಿ: ಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ, ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ

ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದ ರೂಪ ಅವರು ಕಂಟನಕುಂಟೆ ಬಳಿ ಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ. ಆಸ್ವತ್ರೆಗೆ ಕರೆತಂದು ತಾಯಿ ಮಗುವಿನ ಹಾರೈಕೆ ಮಾಡಲಾಗಿದೆ.

ದೇವನಹಳ್ಳಿ: ಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ, ಸಿಬ್ಬಂದಿ ಕಾರ್ಯಕ್ಕೆ ಮೆಚ್ಚುಗೆ
ಆ್ಯಂಬುಲೆನ್ಸ್​ನಲ್ಲಿ ಮಗುವಿಗೆ ಜನ್ಮ ನೀಡಿದ ಮಹಿಳೆ
Follow us
TV9 Web
| Updated By: ಆಯೇಷಾ ಬಾನು

Updated on: Jul 26, 2023 | 3:03 PM

ದೇವನಹಳ್ಳಿ, ಜುಲೈ 26: ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಬಳಿ ಆ್ಯಂಬುಲೆನ್ಸ್​ನಲ್ಲಿ(Ambulance) ಮಗುವಿಗೆ ಮಹಿಳೆ ಜನ್ಮ ನೀಡಿದ್ದಾರೆ. ಗೌರಿಬಿದನೂರು ತಾಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದ ರೂಪ ಅವರಿಗೆ ಇಂದು ಬೆಳಗ್ಗೆ 04:30 ರ ಸುಮಾರಿಗೆ ಹೆರಿಗೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ಕುಟುಂಬಸ್ಥರು ಆ್ಯಂಬುಲೆನ್ಸ್ ಮೂಲಕ ಆಸ್ವತ್ರೆಗೆ ದೊಡ್ಡಬಳ್ಳಾಪುರಕ್ಕೆ ಕರೆತರುತ್ತಿದ್ದರು. ಈ ವೇಳೆ ಆ್ಯಂಬುಲೆನ್ಸ್​ನಲ್ಲಿಯೇ ಹೆರಿಗೆ ಆಗಿದೆ. ಮಹಿಳೆಗೆ ನೋವು ಹೆಚ್ಚಾಗುತ್ತಿದ್ದಂತೆಯೇ ರಸ್ತೆ ಬದಿಯಲ್ಲಿ ಆ್ಯಂಬುಲೆನ್ಸ್ ನಿಲ್ಲಿಸಿ ಸಿಬ್ಬಂದಿ ಹೇಮಾವತಿ ಎಂಬುವವರು ಹೆರಿಗೆ ಮಾಡಿಸಿದ್ದಾರೆ. ನಂತರ ಆಸ್ವತ್ರೆಗೆ ಕರೆತಂದು ತಾಯಿ ಮಗುವಿನ ಹಾರೈಕೆ ಮಾಡಲಾಗಿದೆ. ಸುರಕ್ಷಿತ ಹೆರಿಗೆ ಮಾಡಿಸಿದ ಸಿಬ್ಬಂದಿ ಕಾರ್ಯಕ್ಕೆ ಪ್ರಶಂಸೆ ವ್ಯಕ್ತವಾಗಿದೆ.

ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು ಆರೋಪ, ಕುಟುಂಬಸ್ಥರ ಪ್ರತಿಭಟನೆ

ಮಂಗಳೂರಿನ ಕುಂಟಿಕಾನ ಬಳಿಯ ಎಜೆ ಮೆಡಿಕಲ್ ಕಾಲೇಜು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಯುತ್ತಿದೆ. ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾರೆಂದು ಆರೋಪಿಸಿ ಮಂಗಳೂರಿನ ಎಜೆ ಆಸ್ಪತ್ರೆಗೆ ಸಂಬಂಧಿಕರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಆಸ್ಪತ್ರೆಯಿಂದ ಶವ ಸ್ಥಳಾಂತರಿಸಲು ಬಿಡದೆ ಆಕ್ರೋಶ ಹೊರ ಹಾಕಿದ್ದಾರೆ. ಈ ವೇಳೆ ಪೊಲೀಸರು, ಪ್ರತಿಭಟನಾಕಾರರ ನಡುವೆ ವಾಗ್ವಾದ, ತಳ್ಳಾಟ ನೂಕಾಟವಾಗಿದೆ.

ಇದನ್ನೂ ಓದಿ: Bengaluru Metro: ಮೆಟ್ರೋ ಪಿಲ್ಲರ್ ಬಿದ್ದು ಮಹಿಳೆ, ಮಗು ಮೃತಪಟ್ಟ ಪ್ರಕರಣ; 10 ಕೋಟಿ ರೂ. ಪರಿಹಾರಕ್ಕೆ ಬೇಡಿಕೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಬಾಣಂತಿ ಶಿಲ್ಪಾ ಆಚಾರ್ಯ(36) ಅವರಿಗೆ ಜುಲೈ 2ರಂದು ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಿಲ್ಪಾಗೆ ಶಸ್ತ್ರಚಿಕಿತ್ಸೆ ನಡೆಸಿ ಮಗು ತೆಗೆಯಬೇಕು ಎಂದು ಡ್ಯೂಟಿ ಡಾಕ್ಟರ್​ ತಿಳಿಸಿದ್ದರು. ಭಾನುವಾರವಾಗಿದ್ದರಿಂದ ವೈದ್ಯೆ ವೀಣಾ ಕರ್ತವ್ಯಕ್ಕೆ ಬರಲ್ಲ ಎಂದಿದ್ದರು. ಡಾ.ವೀಣಾ ಅನುಪಸ್ಥಿತಿಯಲ್ಲಿ ಶಿಲ್ಪಾಗೆ ಬೇರೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದರು. ಬಳಿಕ ಹೆಣ್ಣು ಮಗು ಜನಿಸಿದೆ, ಆದರೆ ಗರ್ಭಕೋಶ ತೆಗೆಯಬೇಕು ಎಂದು ವೈದ್ಯರು ಹೇಳಿದರು. ಇದೆಲ್ಲದರ ಬಳಿಕ ನಿನ್ನೆ ಸಂಜೆ ಶಿಲ್ಪಾ ಆಚಾರ್ಯ ಮೃತಪಟ್ಟಿರುವುದಾಗಿ ಆಸ್ಪತ್ರೆ ವೈದ್ಯರು ಮಾಹಿತಿ ನೀಡಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಶಿಲ್ಪಾ ಮೃತಪಟ್ಟಿರುವುದಾಗಿ ಪೋಷಕರು ಆಕ್ರೋಶ ಹೊರ ಹಾಕಿದ್ದಾರೆ. ಪ್ರತಿಭಟನಾನಿರತ ಸಂಬಂಧಿಕರನ್ನು ಕದ್ರಿ ಠಾಣೆ ಪೊಲೀಸರು ಚದುರಿಸಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ