ದೇವನಹಳ್ಳಿ: ವ್ಹೀಲಿಂಗ್​ ವೇಳೆ ಬೈಕ್​ಗಳ ನಡುವೆ ಡಿಕ್ಕಿ, ಯುವತಿ ಸಾವು, ಇಬ್ಬರಿಗೆ ಗಂಭೀರ ಗಾಯ

ಬೆಂಗಳೂರಿನ ಯುವಕ-ಯುವತಿಯರ ತಂಡವೊಂದು ಕೋಲಾರದ ಕಾಫಿಡೇ ಕಡೆ ಬೈಕ್​ಗಳಲ್ಲಿ ತೆರಳುತ್ತಿದ್ದರು. ಆದರೆ, ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ವ್ಹೀಲಿಂಗ್ ಮಾಡಿಕೊಂಡು ಹೋಗುವ ವೇಳೆ ಬೈಕ್​ಗಳ ನಡುವೆ ಡಿಕ್ಕಿ ಹೊಡೆದು ಯುವತಿಯೊಬ್ಬಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ದೇವನಹಳ್ಳಿ: ವ್ಹೀಲಿಂಗ್​ ವೇಳೆ ಬೈಕ್​ಗಳ ನಡುವೆ ಡಿಕ್ಕಿ, ಯುವತಿ ಸಾವು, ಇಬ್ಬರಿಗೆ ಗಂಭೀರ ಗಾಯ
ವ್ಹೀಲಿಂಗ್​ ವೇಳೆ ಸಂಭವಿಸಿದ ಅಪಘಾತದಲ್ಲಿ ಸಾವನ್ನಪ್ಪಿದ ಯುವತಿ
Edited By: Rakesh Nayak Manchi

Updated on: Aug 15, 2023 | 6:01 PM

ದೇವನಹಳ್ಳಿ, ಆಗಸ್ಟ್ 15: ಬೈಕ್ ವ್ಹೀಲಿಂಗ್ (Bike Wheeling) ಮಾಡುತ್ತಿದ್ದಾಗ ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ನಡೆದಿದೆ. ಬೆಂಗಳೂರಿನಿಂದ (Bengaluru) ಕೋಲಾರದ ಕಾಫೀ ಡೇ ಕಡೆ ಹೋಗುವಾಗ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

20ಕ್ಕೂ ಹೆಚ್ಚು ಯುವಕ ಯುವತಿಯರ ಗುಂಪೊಂದು ಬೆಂಗಳೂರಿನಿಂದ ಕೋಲಾರದ ಕಾಫೀ ಡೇ ಕಡೆ ಬೈಕ್​ಗಳ ಮೂಲಕ ಹೋಗುತ್ತಿದ್ದರು. ರಸ್ತೆಗಳಲ್ಲಿ ವ್ಹೀಲಿಂಗ್ ಮಾಡಿಕೊಂಡು ಜಾಲಿ ರೈಡ್ ಮಾಡುತ್ತಿದ್ದರು. ಆದರೆ, ಹೊಸಕೋಟೆ ತಾಲೂಕಿನ ಮೈಲಾಪುರ ಚೆನ್ನಾಪುರ ಗೇಟ್ ಬಳಿ ತಲುಪುತ್ತಿದ್ದಂತೆ ವ್ಹೀಲಿಂಗ್ ಮಾಡುತ್ತಿದ್ದಾಗ ಎರಡು ಬೈಕ್​ಗಳು ಪರಸ್ಪರ ತಾಗಿದೆ.

ಇದನ್ನೂ ಓದಿ: ಚಿಕ್ಕಬಳ್ಳಾಪುರ: ಬೈಕ್ ವೀಲ್ಹಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ವಿದ್ಯಾರ್ಥಿ

ಪರಿಣಾಮ, ರಸ್ತೆಗೆ ಬಿದ್ದು ತಲೆಗೆ ಗಂಭೀರವಾಗಿ ಗಾಯಗೊಂಡ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಯುವಕ ಮತ್ತು ಯುವತಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹೊಸಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಂತರ ಜೊತೆಯಲ್ಲಿದ್ದ ಸ್ನೇಹಿತರು ಬೈಕ್ ಸಹಿತ ಪರಾರಿಯಾಗಿದ್ದಾರೆ.

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಹೆದ್ದಾರಿಗಳಲ್ಲಿ ವ್ಹೀಲಿಂಗ್ ಹಾವಳಿ ಬೆಳಗ್ಗೆಯಿಂದಲೇ ಆರಂಭವಾಗಿದೆ. ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕಾರಹಳ್ಳಿ ರಸ್ತೆಯಲ್ಲಿ ವೀಲಿಂಗ್ ಮಾಡುತ್ತಿದ್ದಾಗ ಬೈಕ್​ಗಳ ಮುಖಾಮುಖಿ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರ ಗಾಯಗೊಂಡಿದ್ದಾನೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us