AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎತ್ತಿನಹೊಳೆ‌ ಡ್ಯಾಂ ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಜನರಿಂದಲೂ ವಿರೋಧ! ಕಾರಣ ಇಲ್ಲಿದೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಲಕ್ಕೆನಹಳ್ಳಿ ಬಳಿ ಎತ್ತಿನಹೊಳೆ ಯೋಜನೆಯ ಭಾಗವಾಗಿ ನಿರ್ಮಿಸಲು ಯೋಜಿಸಿರುವ ಜಲಾಶಯದಿಂದ ಏಳು ಹಳ್ಳಿಗಳು ಮುಳುಗಡೆಯಾಗುವ ಆತಂಕ ಎದುರಾಗಿದೆ. ಸ್ಥಳೀಯರು ಈ ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಭೂಮಿ ಕಳೆದುಕೊಳ್ಳುವ ಭೀತಿಯಿಂದ ಪ್ರತಿಭಟನೆ ನಡೆಸಿದ್ದಾರೆ. ಅಷ್ಟಕ್ಕೂ ಎತ್ತಿನಹೊಳೆಗೂ ಲಕ್ಕೆನಹಳ್ಳಿಗೂ ಏನು ಸಂಬಂಧ? ಇಲ್ಲೇಕೆ ಎತ್ತಿನಹೊಳೆ ಡ್ಯಾಂ? ಇಲ್ಲಿದೆ ವಿವರ.

ಎತ್ತಿನಹೊಳೆ‌ ಡ್ಯಾಂ ನಿರ್ಮಾಣಕ್ಕೆ ದೊಡ್ಡಬಳ್ಳಾಪುರ ತಾಲೂಕಿನ ಜನರಿಂದಲೂ ವಿರೋಧ! ಕಾರಣ ಇಲ್ಲಿದೆ
ಲಕ್ಕೆನಹಳ್ಳಿ ಹಾಗೂ ಸುತ್ತಲಿನ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ನವೀನ್ ಕುಮಾರ್ ಟಿ.
| Edited By: |

Updated on:Jul 07, 2025 | 10:52 AM

Share

ದೇವನಹಳ್ಳಿ, ಜುಲೈ 7: ಎತ್ತಿನಹೊಳೆ ಯೋಜನೆಗೆ (Yettinahole Project) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿರೋಧ ವ್ಯಕ್ತವಾಗಿದ್ದು, ಆ ನಂತರ ಸಕಲೇಶಪುರದಲ್ಲಿ ಪರಿಸರಕ್ಕೆ ಹಾನಿಯಾಗುತ್ತದೆ ಎಂಬ ಕೂಗು ಕೇಳಿಬಂದಿದ್ದು ಗೊತ್ತೇ ಇದೆ. ಇದೆಲ್ಲದರ ಮಧ್ಯೆ ಎತ್ತಿನಹೊಳೆ ಯೋಜನೆಯ ಮೊದಲ ಹಂತದ ಕಾಮಗಾರಿ ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ 2024ರ ಸೆಪ್ಟೆಂಬರ್​​ನಲ್ಲಿ ಮಾಡಿದ್ದರು. ಬಯಲುಸೀಮೆಯ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಬೆಂಗಳೂರು, ರಾಮನಗರ, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳತ್ತ ಪೂರ್ವಾಭಿಮುಖವಾಗಿ ನದಿಯ ನೀರನ್ನು ತಿರುಗಿಸುವ ಈ ಯೋಜನೆಗೆ ಇದೀಗ ಬಯಲುಸೀಮೆಯಲ್ಲೇ ವಿರೋಧ ವ್ಯಕ್ತವಾಗಿದೆ. ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಲಕ್ಕೆನಹಳ್ಳಿ ಬಳಿ ಸ್ಥಳೀಯರಿಂದ ವಿರೋಧ ವ್ಯಕ್ತವಾಗಿದೆ.

ಲಕ್ಕೆನಹಳ್ಳಿ ಬಳಿ‌ ಎತ್ತಿನಹೊಳೆ‌ ಡ್ಯಾಂ ನಿರ್ಮಾಣಕ್ಕೆ ಸರ್ಕಾರ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದೆ. 7 ಹಳ್ಳಿಗಳನ್ನು ಸ್ಥಳಾಂತರ ಮಾಡಿ ಡ್ಯಾಂ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದ್ದು, ಇದಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಡ್ಯಾಂನಿಂದ 7 ಹಳ್ಳಿಗಳಿಗೆ ಮುಳುಗಡೆ ಭೀತಿ

ಲಕ್ಕೆನಹಳ್ಳಿ ಬಳಿ ಡ್ಯಾಂ ನಿರ್ಮಾಣ ಮಾಡುವುದರಿಂದ ಲಕ್ಕೆನಹಳ್ಳಿ, ಸಿಂಗೇನಹಳ್ಳಿ, ದಾಸರಪಾಳ್ಯ, ಶ್ರೀರಾಮನಹಳ್ಳಿ, ಮಚ್ಚೇನಹಳ್ಳಿ, ಕಡೆಪಾಳ್ಯ, ಗಾಣದಾಳು ಗ್ರಾಮಗಳ ಮುಳುಗಡೆ ಆತಂಕ ಎದುರಾಗಿದ್ದು, ಇಲ್ಲಿನ ನಿವಾಸಿಗಳಿಗೆ ಸಂಪೂರ್ಣ ಸ್ಥಳಾಂತರ ಮಾಡುವ ಭಯ ಎದುರಾಗಿದೆ.

ಇದನ್ನೂ ಓದಿ
Image
ಸಚಿವ ಎಂಬಿ ಪಾಟೀಲ್​ಗೆ ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರೈ ಟಾಂಗ್
Image
ಪಾರ್ಟಿಗಳಲ್ಲಿ ಡ್ರಗ್ಸ್ ಸಿಕ್ಕರೆ ರೆಸಾರ್ಟ್, ಹೋಂ ಸ್ಟೇ ಮಾಲೀಕರ ಮೇಲೆ ಕೇಸ್
Image
ಸಿಎಂ ಬದಲಾವಣೆ ಚರ್ಚೆಗೆ ಸ್ವಾಮೀಜಿಗಳೂ ಎಂಟ್ರಿ
Image
ಏನಿದು ಎತ್ತಿನಹೊಳೆ ಯೋಜನೆ? ಇಲ್ಲಿದೆ ಕರ್ನಾಟಕದ ಬೃಹತ್​ ಯೋಜನೆಯ ಆಳ-ಅಗಲ

ಎತ್ತಿನಹೊಳೆ ಯೋಜನೆಗೆ ಲಕ್ಕೆನಹಳ್ಳಿಯಲ್ಲೇಕೆ ಡ್ಯಾಂ?

ಎತ್ತಿನಹೊಳೆ ನೀರನ್ನು ಪೈಪ್ ಲೈನ್ ಮೂಲಕ ತಂದು ಲಕ್ಕೆನಹಳ್ಳಿಯಲ್ಲಿ ನಿರ್ಮಿಸಲಾಗುವ ಡ್ಯಾಂಗೆ ತುಂಬಿಸಲು ಸರ್ಕಾರ ಯೋಜನೆ ರೂಪಿಸಿದೆ. ನಂತರ ಅಲ್ಲಿಂದ ನೀರು ಪೂರೈಕೆ ಮಾಡುವ ಇರಾದೆ ಹೊಂದಿದೆ. ಆದರೆ, ಇಲ್ಲಿ ಡ್ಯಾಂ ನಿರ್ಮಾಣದಿಂದ ಅಕ್ಕಪಕ್ಕದ 7 ಗ್ರಾಮಗಳು ಮುಳುಗಡೆಯಾಗಲಿದ್ದು, ಸಂಪೂರ್ಣ ಸ್ಥಳಾಂತರ ಮಾಡಬೇಕಾಗಲಿದೆ. ಹೀಗಾಗಿ, ‘ನಮ್ಮ‌ ಗ್ರಾಮದ ಬಳಿ ಡ್ಯಾಂ ಬೇಡ, ಬೇರೆಡೆ ನಿರ್ಮಾಣ ಮಾಡಿ’ ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕಳೆದ ವಾರ ಡಿಸಿಎಂ ಡಿಕೆ ಶಿವಕುಮಾರ್ ಡ್ಯಾಂ ನಿರ್ಮಾಣದ ಸ್ಥಳಕ್ಕೆ ಬೇಟಿ‌ ನೀಡಿದ್ದರು. ಇದರ ಬೆನ್ನಲ್ಲೇ, ಗ್ರಾಮಸ್ಥರು ಪ್ರತಿಭಟನೆ ನಡೆಸಿ ಡ್ಯಾಂ ನಿರ್ಮಾಣಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಉಪಮುಖ್ಯಮಂತ್ರಿಗಳು ಗ್ರಾಮಸ್ಥರ ಅಭಿಪ್ರಾಯ ಪಡೆಯದೇ ತೆರಳಿದ್ದಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಏನಿದು ಎತ್ತಿನಹೊಳೆ ಯೋಜನೆ? ಇಲ್ಲಿದೆ ಕರ್ನಾಟಕದ ಬೃಹತ್​ ಯೋಜನೆಯ ಆಳ-ಅಗಲ

ಗ್ರಾಮದ ಸುತ್ತಮುತ್ತ ಅಡಿಕೆ ಸೇರಿದಂತೆ ಹಲವು ಬೆಳೆಗಳನ್ನು ಬೆಳೆಯಲಾಗುತ್ತಿದೆ. ಡ್ಯಾಂ ನಿರ್ಮಾಣ ಮಾಡಿದರೆ ಸಾವಿರಾರು ಎಕರೆ ಫಲವತ್ತಾದ ಕೃಷಿ ಭೂಮಿ ಮುಳುಗಡೆಯಾಗುತ್ತದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದು, ಕೋಲಾರ ಅಥವಾ ಚಿಕ್ಕಬಳ್ಳಾಪುರ ಭಾಗದ ಬಯಲು ಪ್ರದೇಶದಲ್ಲಿ ಡ್ಯಾಂ ನಿರ್ಮಾಣ ಮಾಡುವಂತೆ ಒತ್ತಾಯಿಸಿದ್ದಾರೆ.

ಹಿರಿಯರು ಕಟ್ಟಿದ ಊರು, ಅವರ ಸಮಾಧಿ ಇರುವ ಭೂಮಿ ಬಿಟ್ಟು ಹೋಗಲ್ಲ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದಾರೆ. ಡ್ಯಾಂ ನಿರ್ಮಾಣ ಮಾಡಲು ಬಂದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನೂ ನೀಡಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:51 am, Mon, 7 July 25

Follow Us
ನವೀನ್ ಕುಮಾರ್ ಟಿ.
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಪ್ರತಿಭಟನೆಗೆ ಸುಪ್ರೀಂ ಆದೇಶ ಪಾಲಿಸದ ಆರೋಪದ ಮೇಲೆ ನ್ಯಾಯಾಂಗ ನಿಂದನೆ ಅರ್ಜಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಬೆಳಗಾವಿಯ ಪ್ರಭಾವಿ ರಾಜಕಾರಣಿಗಳ ಒಡೆತನದ ಕ್ಲಬ್, ಹೋಟೆಲ್​ಗಳ ಮೇಲೆ ದಾಳಿ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಇಂದಿನಿಂದ ನವರಾತ್ರಿ ಆರಂಭ; ಹೊಸ ಕೆಲಸ ಆರಂಭಿಸಲು ಒಳ್ಳೆಯ ದಿನ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಶಿವಂ ಅಸೋಸಿಯೇಟ್ಸ್ ವಂಚನೆ ಪ್ರಕರಣ: ಇಡಿಯಿಂದ ವರದಿ ಸಲ್ಲಿಕೆ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಅಲೆಮಾರಿ ಕುಟುಂಬಗಳ ಮಕ್ಕಳಿಗಾಗಿ ಗುಡಿಸಲಿನಲ್ಲಿ ಗ್ರಂಥಾಲಯ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಕೊನೆಗೂ ಪೆನ್​ಡ್ರೈವ್​ನಲ್ಲಿ ಏನಿದೆ ಎಂಬ ಗುಟ್ಟು ಬಿಚ್ಚಿಟ್ಟ ಕುಮಾರಸ್ವಾಮಿ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಹಾಸನ ಡಿಸಿ ಮತ್ತು ಜಿಲ್ಲಾ ಸಚಿವರ ಸಂಘರ್ಷ ಶುರುವಾಗಿದೆ ಎಂದು ಹೆಚ್​​ಡಿಕೆ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
ಸಿಜೆಪಿ ಪ್ರತಿಭಟನೆ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್
ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿ ಕರೆಂಟ್ ಕಟ್: ತನಿಖೆ ಮಾಡುತ್ತೇವೆ, ಖಾದರ್