AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸಕೋಟೆ-ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮಿತಿ ಮೀರಿದ ವ್ಹೀಲಿಂಗ್ ಪುಂಡರ ಹಾವಳಿ

ವೀಕೆಂಡ್​ನಲ್ಲಿ ನಂದಿಬೆಟ್ಟ ಹಾಗೂ ಈಶಾ ಪೌಂಡೇಶನ್​ಗೆ ಲಾಂಗ್ ಡ್ರೈವ್ ಬರುವ ಪುಂಡರು ಹೆದ್ದಾರಿಯುದ್ದಕ್ಕೂ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿದ್ದಾರೆ. ವೀಲಿಂಗ್ ಹಾವಳಿಯಿಂದ ಟೋಲ್ ಸುಂಕ ಕಟ್ಟುವ ವಾಹನ ಸವಾರರ ಪರದಾಡುವಂತಾಗಿದೆ. ಸದ್ಯ ವೀಲಿಂಗ್ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಹೊಸಕೋಟೆ-ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮಿತಿ ಮೀರಿದ ವ್ಹೀಲಿಂಗ್ ಪುಂಡರ ಹಾವಳಿ
ಹೊಸಕೋಟೆ-ದೊಡ್ಡಬಳ್ಳಾಪುರ ಹೆದ್ದಾರಿಯಲ್ಲಿ ಮಿತಿ ಮೀರಿದ ವ್ಹೀಲಿಂಗ್
Follow us
ನವೀನ್ ಕುಮಾರ್ ಟಿ
| Updated By: ಆಯೇಷಾ ಬಾನು

Updated on: Dec 10, 2023 | 10:24 AM

ದೇವನಹಳ್ಳಿ, ಡಿ.10: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಹೊಸಕೋಟೆ ದೊಡ್ಡಬಳ್ಳಾಪುರ ನೂತನ ಹೆದ್ದಾರಿಯಲ್ಲಿ ಪುಂಡರ ಹುಚ್ಚಾಟ ಹೆಚ್ಚಾಗಿದೆ. ವೀಕೆಂಡ್ ಬಂತೆಂದರೆ ಸಾಕು ಬೆಳ್ಳಂ ಬೆಳಗ್ಗೆ ರಸ್ತೆಗಿಳಿಯುವ ಪುಂಡರು ನೂತನ ಹೆದ್ದಾರಿಯಲ್ಲಿ ‌ವ್ಹೀಲಿಂಗ್ (Wheeling)  ಮಾಡುತ್ತಿದ್ದಾರೆ. ಹೆದ್ದಾರಿಯಲ್ಲಿ ಡೆಡ್ಲಿ ವ್ಹೀಲಿಂಗ್ ಮಾಡುತ್ತಾ ಹುಚ್ಚಾಟ ಮೆರೆಯುತ್ತಿದ್ದಾರೆ. ಹಿಂಬದಿಯಲ್ಲಿ ಯುವಕ ಯುವತಿಯರನ್ನ ಕೂರಿಸಿಕೊಂಡು ಅಪಾಯಕ್ಕೆ ಆಹ್ವಾನ ನೀಡುತ್ತಿದ್ದಾರೆ.

ವೀಕೆಂಡ್​ನಲ್ಲಿ ನಂದಿಬೆಟ್ಟ ಹಾಗೂ ಈಶಾ ಪೌಂಡೇಶನ್​ಗೆ ಲಾಂಗ್ ಡ್ರೈವ್ ಬರುವ ಪುಂಡರು ಹೆದ್ದಾರಿಯುದ್ದಕ್ಕೂ ವೀಲಿಂಗ್ ಮಾಡುತ್ತಾ ವಿಡಿಯೋ ಮಾಡುತ್ತಿದ್ದಾರೆ. ಹೆದ್ದಾರಿಯಲ್ಲಿ ಹೈಟೆಕ್ ಕ್ಯಾಮರಾಗಳಿದ್ದರೂ ಪೊಲೀಸರ ಭಯವಿಲ್ಲದೆ ಡೆಡ್ಲಿ ವ್ಹೀಲಿಂಗ್ ಮಾಡುತ್ತಿದ್ದಾರೆ. ಪುಂಡರ ವೀಲಿಂಗ್ ಹುಚ್ಚಾಟದ ದೃಶ್ಯ ಸ್ಥಳೀಯರ ಮೊಬೈಲ್​ನಲ್ಲಿ ಸೆರೆಯಾಗಿದೆ. ವಿಶ್ವನಾಥಪುರ, ಚನ್ನರಾಯಪಟ್ಟಣ ಮತ್ತು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವ್ಹೀಲಿಂಗ್ ಮಾಡುವ ಯುವಕರ ಸಂಖ್ಯೆ ಹೆಚ್ಚಾಗಿದೆ. ಇನ್ನು ವ್ಹೀಲಿಂಗ್ ಹಾವಳಿಯಿಂದ ಟೋಲ್ ಸುಂಕ ಕಟ್ಟುವ ವಾಹನ ಸವಾರರ ಪರದಾಡುವಂತಾಗಿದೆ. ಸದ್ಯ ವ್ಹೀಲಿಂಗ್ ಪುಂಡರಿಗೆ ತಕ್ಕ ಶಾಸ್ತಿ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಮದವೇರಿದ ಕಾಡಾನೆ ಜೊತೆ ಕಾದಾಡಿ ಮಂಡಿ ಊರಿದ ಅರ್ಜುನ; ಕಾರ್ಯಾಚರಣೆ ವಿಡಿಯೋ ಲಭ್ಯ

ಅನ್ಯಕೋಮಿನ ಯುವಕರಿಂದ ನೈತಿಕ ಪೊಲೀಸ್ ಗಿರಿ

ದಾವಣಗೆರೆಯಲ್ಲಿ ನೈತಿಕ ಪೊಲೀಸ್ ಗಿರಿ ನಡೆದಿದೆ. ಅನ್ಯಕೋಮಿನ ಯುವತಿ ಜೊತೆ ಅನುಚಿತವಾಗಿ ವರ್ತಿಸಿದ್ದಾಗಿ ಆರೋಪಿಸಿ ಯುವಕನನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಿಗ್ಗಾಮುಗ್ಗಾ ಥಳಿಸಲಾಗಿದೆ. ಜಾಲಿನಗರದ ನಿವಾಸಿ ಶ್ರೀನಿವಾಸ್​ ಮೇಲೆ ದುಷ್ಕರ್ಮಿಗಳು ನೈತಿಕ ಪೊಲೀಸ್​ಗಿರಿ ನಡೆಸಿದ್ದಾರೆ. ಕಿಡಿಗೇಡಿಗಳನ್ನ ಬಂಧಿಸುವಂತೆ ಹಿಂದೂ ಸಂಘಟನೆಗಳು ಆಗ್ರಹಿಸಿದ್ವು. ಹಲ್ಲೆಗೊಳಗಾದ ಯುವಕನ ಮೇಲೆಯೇ ಪೋಕ್ಸೋ ಕೇಸ್ ದಾಖಲಿಸಿದ್ದಾರೆ. ದಾಳಿ ಮಾಡಿರೋ ಅನ್ಯಕೋಮಿನ ಯುವರನ್ನ ಬಂಧಿಸುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಮೆಡಿಕಲ್ ಶಾಪ್ ಶೆಟರ್ ಮುರಿದು ಕಳ್ಳತನ

ಕಡಬ ಗ್ರಾಮದಲ್ಲಿ ಮೆಡಿಕಲ್ ಶಾಪ್ ಶೆಟರ್ ಮುರಿದು ನಗದು ಕಳವು ಮಾಡಲಾಗಿದೆ. ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಗ್ರಾಮದಲ್ಲಿ ಕಳ್ಳ ಕೈಚಳಕ ತೋರಿದ್ದಾನೆ. ವಿನಯ್ ಪಟೇಲ್ ಮತ್ತು ವೆಂಕಟರಂಗಯ್ಯಗೆ ಸೇರಿದ ಮೆಡಿಕಲ್ಸ್​ನಲ್ಲಿ ಖದೀಮ ಕನ್ನ ಹಾಕಿದ್ದಾನೆ. ಕಳ್ಳನ ಕೈಚಳಕ ಮೆಡಿಕಲ್ ಶಾಪ್​ನಲ್ಲಿ ಅಳವಡಿಸಿದ್ದ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ. ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ವೇಗದ ಶತಕ ಸಿಡಿಸಿ ಹೆಡ್ ದಾಖಲೆ ಮುರಿದ ಕ್ಲಾಸೆನ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಸೋಪಿಗೆ ತಮನ್ನಾ ಭಾಟಿಯಾ ಏಕೆ ಬೇಡ, ಸ್ಪಷ್ಟ ಕಾರಣ ನೀಡಿದ ಸಂಸದ ಯದುವೀರ್
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ