ವಿದೇಶಿ ಕನ್ನಡಿಗರ ಸಹಾಯದಿಂದ ಒಟ್ಟು 1 ಸಾವಿರ ಆಕ್ಸಿ ಬ್ಯಾಂಕ್ಗಳನ್ನು ಸ್ಥಾಪಿಸುತ್ತೇವೆ. ಆಟೋರಿಕ್ಷಾ ಚಾಲಕರು ರೋಗಿಗಳ ಮನೆಗೆ ಕಾನ್ಸಂಟ್ರೇಟರ್ಗಳನ್ನು ತಲುಪಿಸುತ್ತಾರೆ. ಪೇಟಿಎಂ ಕಂಪನಿಯಿಂದ ಜಯನಗರದ ಆಸ್ಪತ್ರೆಗೆ 350 ಕಾನ್ಸಂಟ್ರೇಟರ್ಗಳು ಬರಲಿದೆ. ಈ ಸೇವೆ ಸಂಪೂರ್ಣ ಉಚಿತವಾಗಿರಲಿದೆ ಎಂದು ಅವರು ಮಾಹಿತಿ ನೀಡಿದರು.
ಈಗಾಗಲೇ 100 ಜನ ಕೋವಿಡ್ ಸೋಂಕಿತರಿಗೆ ಹಾಗೂ ಕೋವಿಡ್ ಚಿಕಿತ್ಸೆ ಪಡೆದು ಗುಣಮುಖರಾದ 150 ರೋಗಿಗಳಿಗೆ ಮನೆಗೇ ಕಾನ್ಸನ್ಟ್ರೇಟರ್ ಸೇವೆ ಒದಗಿಸಲಾಗಿದೆ. ಕೊವಿಡ್ನ ಅಲ್ಪ ಗುಣಲಕ್ಷಣಗಳನ್ನು ಹೊಂದಿದ ಹಲವು ರೋಗಿಗಳ ಆರೋಗ್ಯದಲ್ಲಿ ಆಕ್ಸಿಜನ್ ಕೊರತೆಯಿಂದ ಒಮ್ಮೆಗೆ ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತಿರುವ ಪ್ರಕರಣಗಳು ಕಂಡುಬರುತ್ತಿವೆ. ಆಸ್ಪತ್ರೆ ಬೆಡ್ ಹಂಚಿಕೆಗಿಂತ ಪೂರ್ವದಲ್ಲಿ ಆಕ್ಸಿಜನ್ ಒದಗಿಸಿದಲ್ಲಿ ರೋಗಿಗಳಿಗೆ ಅತ್ಯಂತ ಹೆಚ್ಚಿನ ಸಹಾಯವಾಗಲಿದ್ದು, ಮನೆಯಲ್ಲಿ ಇದ್ದುಕೊಂಡೇ ರೋಗಿಗಳಿಗೆ ಚಿಕಿತ್ಸೆ ನೀಡಬಹುದು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದರು.
ಕೊವಿಡ್-19 ಸೋಂಕಿನಿಂದ ಬಳಲುತ್ತಿರುವ ನಾಗರಿಕರು, ಕೊವಿಡ್ ರಕ್ಷಾ ಸಹಾಯವಾಣಿ 080 6191 4960 ಸಂಖ್ಯೆಗೆ ಕರೆ ಮಾಡಿದಲ್ಲಿ ಸ್ವಯಂಸೇವಕರು ಕರೆಗೆ ಸ್ಪಂದಿಸಿ ಆಕ್ಸಿಜನ್ ಕಾನ್ಸನ್ಟ್ರೇಟರ್ ಅನ್ನು ಅವರ ಮನೆಗೇ ನೇರವಾಗಿ ತಲುಪಿಸಲಾಗುತ್ತದೆ. ರೋಗಿಗಳ ಹೆಸರು, ವಯಸ್ಸು,ದೂರವಾಣಿ ಸಂಖ್ಯೆ,ಆಕ್ಸಿಜನ್ ಸ್ಯಾಚುರೇಷನ್ ಪ್ರಮಾಣ, ಆರೋಗ್ಯ ಸ್ಥಿತಿಗತಿಗಳ ವಿವರಗಳನ್ನು ಸಲ್ಲಿಸಿದ ನಂತರ ಆಧಾರ್ ಕಾರ್ಡ್, ಪಲ್ಸ್ ಆಕ್ಸಿಮೀಟರ್ ರೀಡಿಂಗ್ ನೊಂದಿಗೆ ರೋಗಿಯ ಫೋಟೋ ಕಳುಹಿಸಬೇಕಾಗುತ್ತದೆ. ಎಂ ಪಿ ಕಚೇರಿಯ ಸ್ವಯಂಸೇವಕರು ಡಾಕ್ಟರ್ ಪ್ರಿಸ್ಕ್ರಿಪ್ಷನ್ ಧೃಢೀಕರಿಸಿಕೊಂಡ ನಂತರ ಆಕ್ಸಿಜನ್ ಕಾನ್ಸನ್ಟ್ರೇಟರ್ ಅನ್ನು ನೇರವಾಗಿ ಮನೆಗೆ ತಲುಪಿಸುವ ವ್ಯವಸ್ಥೆಯನ್ನು ಆಟೋ ಅಥವಾ ಗೂಡ್ಸ್ ವೆಹಿಕಲ್ ಗಳಿಂದ ಮಾಡಲಿದ್ದಾರೆ. ಸುರಕ್ಷತೆಗಾಗಿ 3 ಸಾವಿರ ರೂ,ಗಳ ಡಿಪಾಸಿಟ್ ಅನ್ನು ಪಡೆಯಲಾಗುತ್ತಿದ್ದು, ಕಾನ್ಸನ್ಟ್ರೇಟರ್ ಮರಳಿ ಪಡೆಯುವಾಗ ಅದನ್ನು ಹಿಂದಿರುಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಇದನ್ನೂ ಓದಿ: ಸಂಸದೆ ಸುಮಲತಾ ಅಂಬರೀಷ್ ವಿಶೇಷ ಸಂದರ್ಶನ: ‘ಕರ್ತವ್ಯ ದೋಷದಿಂದ ಒಂದು ಜೀವ ಹೋದ್ರೂ ಅದಕ್ಕೆ ನಾವೇ ಜವಾಬ್ದಾರಿ…’
ಕೊವಿಡ್ ನಿಭಾಯಿಸಲು ನರೇಂದ್ರ ಮೋದಿಗೆ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆಯಿಂದ 6 ಸಲಹೆ
(Bengaluru south MP Tejasvi Surya star Oxygen bank from the help of foreign Kannadigas)