AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್​ನ ಕೆಲ ಬುದ್ಧಿಜೀವಿಗಳು ಬೆಡ್ ಬ್ಲಾಕಿಂಗ್ ಹಗರಣದ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ: ಸಂಸದ ತೇಜಸ್ವಿ ಸೂರ್ಯ

Bed Blocking Scam: ಈ ಹಗರಣದ ಹಿಂದೆ ನೂರಾರು ಜನ ಇದ್ದಾರೆ. ಹಗರಣ ಹೊರತಂದವರನ್ನೇ ತೇಜೋವಧೆ ಮಾಡುವ ಕೆಲಸ ಆಗುತ್ತಿದೆ. ಸಾವಿರಾರು ಬೆಡ್ ಬ್ಲಾಕ್ ದಂದೆ ನಡೆದಿದೆ. ನೂರಾರು ಜನರ ಮೇಲೆ ಎಫ್​ಐಆರ್ ಆಗಲಿದೆ. ಆದರೆ ಇಡೀ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಆಗುತ್ತಿದೆ. ತನಿಖೆಯ ದಾರಿ ತಪ್ಪಿಸಲು ಕಾಂಗ್ರೆಸ್ ಹೊರಟಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದರು.

ಕಾಂಗ್ರೆಸ್​ನ ಕೆಲ ಬುದ್ಧಿಜೀವಿಗಳು ಬೆಡ್ ಬ್ಲಾಕಿಂಗ್ ಹಗರಣದ ತನಿಖೆಯ ದಾರಿ ತಪ್ಪಿಸುತ್ತಿದ್ದಾರೆ: ಸಂಸದ ತೇಜಸ್ವಿ ಸೂರ್ಯ
ಸಂಸದ ತೇಜಸ್ವಿ ಸೂರ್ಯ
guruganesh bhat
|

Updated on: May 29, 2021 | 3:04 PM

Share

ಬೆಂಗಳೂರು: ಕಾಂಗ್ರೆಸ್ ಬೆಡ್ ಬ್ಲಾಕ್ ದಂಧೆ ತನಿಖೆ ದಾರಿತಪ್ಪಿಸುತ್ತಿದೆ. ಕಾಂಗ್ರೆಸ್​ನವರ ಜತೆ ಇರುವ ಒಂದೆರಡು ಬುದ್ದಿ ಜೀವಿಗಳು ಪ್ರಕರಣ ತನಿಖೆ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ನಾನು ಮತ್ತು ಶಾಸಕ ಸತೀಶ್ ರೆಡ್ಡಿ ಈ ವಿಷಯವನ್ನು ಇಷ್ಟಕ್ಕೆ ಬಿಡುವುದಿಲ್ಲ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಸಂಸದ ತೇಜಸ್ವಿ ಸೂರ್ಯ ಬೊಮ್ಮನಹಳ್ಳಿಯ ಆರ್.ಎಂ.ಆರ್.ಪಾರ್ಕ್ ನಲ್ಲಿ ಕೋವಿಡ್ ಕೇರ್ ಸೆಂಟರ್ ಚಾಲನೆ ನೀಡಿ ಆರೋಪಿಸಿದರು.

ನಾವು ಬೆಡ್ ಬ್ಲಾಕಿಂಗ್ ಹಗರಣದ ಹತ್ತು ದಿನದ ಡಾಟಾ ಮಾತ್ರ ತೆಗೆದುಕೊಂಡಿದ್ದೇವೆ. ಸಿಸಿಬಿ ಎಲ್ಲ ಮಾಹಿತಿಯನ್ನು ಸಂಗ್ರಹಿಸಿ ತನಿಖೆ ನಡೆಸುತ್ತಿದೆ. ಇದು ಕೇವಲ ಬೊಮ್ಮನಹಳ್ಳಿ ಭಾಗದಲ್ಲಿ ಮಾತ್ರ ನಡೆದಿಲ್ಲ. ಈ ಹಗರಣ ಇಡೀ ಬೆಂಗಳೂರು ವ್ಯಾಪ್ತಿಯಲ್ಲಿ ನಡೆದಿದೆ. ಈ ಹಗರಣದ ಹಿಂದೆ ನೂರಾರು ಜನ ಇದ್ದಾರೆ. ಹಗರಣ ಹೊರತಂದವರನ್ನೇ ತೇಜೋವಧೆ ಮಾಡುವ ಕೆಲಸ ಆಗುತ್ತಿದೆ. ಸಾವಿರಾರು ಬೆಡ್ ಬ್ಲಾಕ್ ದಂದೆ ನಡೆದಿದೆ. ನೂರಾರು ಜನರ ಮೇಲೆ ಎಫ್​ಐಆರ್ ಆಗಲಿದೆ. ಆದರೆ ಇಡೀ ಪ್ರಕರಣದ ದಿಕ್ಕು ತಪ್ಪಿಸುವ ಕೆಲಸ ಆಗುತ್ತಿದೆ. ತನಿಖೆಯ ದಾರಿ ತಪ್ಪಿಸಲು ಕಾಂಗ್ರೆಸ್ ಹೊರಟಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದರು.

ಏನಿದು ಪ್ರಕರಣ? ಬಿಬಿಎಂಪಿ ಕೊವಿಡ್ ವಾರ್ ರೂಂನಲ್ಲಿ ಏಜೆನ್ಸಿಯವರು ಹೋಂ ಐಸೋಲೇಶನ್​ನಲ್ಲಿ ಇರುವವರ ಹೆಸರಿನಲ್ಲಿ ಬೆಡ್ ಬ್ಲಾಕ್ ಮಾಡುತ್ತಿದ್ದಾರೆ. ಬೆಡ್​ನ ಕೃತಕ ಅಭಾವ ಸೃಷ್ಟಿಸಿ 4 ಸಾವಿರಕ್ಕೂ ಹೆಚ್ಚು ಬೆಡ್​ಗಳ ಅವ್ಯವಹಾರ ಬೆಂಗಳೂರಿ‌ನಾದ್ಯಂತ ನಡೆಯುತ್ತಿದೆ. ಓರ್ವ ವ್ಯಕ್ತಿಯ ಹೆಸರಿನಲ್ಲಿ 12 ಆಸ್ಪತ್ರೆಗಳಲ್ಲಿ ಬೆಡ್ ಬುಕ್ಕಿಂಗ್ ಆಗಿದೆ. ರಾತ್ರೋರಾತ್ರಿ ಈ ಅವ್ಯವಹಾರ ನಡೆಯುತ್ತಿದೆ. ಇದು ಭ್ರಷ್ಟಾಚಾರ ಅಲ್ಲ, ಕೊಲೆ ಎಂದು ಸಂಸದ ತೇಜಸ್ವಿ ಸೂರ್ಯ ಆರೋಪಿಸಿದ್ದರು.

ಬೆಂಗಳೂರಿನಲ್ಲಿ ಯಾವುದೇ ವ್ಯಕ್ತಿಗೆ ಕೊರೊನಾ ಸೋಂಕು ಇದೆ ಎಂಬುದು ಖಚಿತವಾದ ತಕ್ಷಣ ಬಿಯು ನಂಬರ್  ವಾರ್​ ರೂಂಗೆ ಬರುತ್ತದೆ. ಉದಾಹರಣೆಗೆ ಬಸವನಗುಡಿ ನಿವಾಸಿಗೆ ಸೋಂಕು ಖಚಿತವಾದ ತಕ್ಷಣ ಬೆಂಗಳೂರು ಸೌತ್ ವಾರ್​ ರೂಂಗೆ ವಿವರ ಹೋಗುತ್ತೆ. ತಕ್ಷಣ ವಾರ್ ರೂಂನಿಂದ ಸೋಂಕಿತರಿಗೆ ಕರೆ ಮಾಡಿ ಕೊರೊನಾ ಲಕ್ಷಣಗಳು ಇವೆಯೇ ಎಂದು ವಿಚಾರಿಸಲಾಗುತ್ತದೆ. ಹೋಂ ಐಸೋಲೆಶನ್​ನಲ್ಲಿ ಇರುವವರ ಹೆಸರಲ್ಲಿ ಬಿಬಿಎಂಪಿ ವಾರ್ ರೂಂನಲ್ಲಿ ಕುಳಿತ ಅಧಿಕಾರಿಗಳು ಆಸ್ಪತ್ರೆಗಳ ಬೆಡ್​ಗಳನ್ನು ಬ್ಲಾಕ್ ಮಾಡ್ತಾರೆ. ಅವರ್ಯಾರೂ ಸರ್ಕಾರಿ ಅಧಿಕಾರಿಗಳಲ್ಲ. ಯಾವುದೋ ಏಜೆನ್ಸಿಯವರು. ಹೋಂ ಐಸೋಲೇಶನ್​ನಲ್ಲಿ ಇರುವವರ ಹೆಸರಲ್ಲಿ ಬೆಡ್ ಬ್ಲಾಕ್ ಮಾಡಿದ ತಕ್ಷಣ ಸಾರ್ವಜನಿಕರಿಗೆ ಬೆಡ್ ಇಲ್ಲ ಎಂದು ವೆಬ್​ಸೈಟ್​ನಲ್ಲಿ ತೋರಿಸುತ್ತದೆ. ಆದರೆ ನಿಜಕ್ಕೂ ಆ ಬೆಡ್ ಖಾಲಿ ಇರುತ್ತೆ. ಹೀಗೆ ಬೆಡ್ ಅವ್ಯವಸ್ಥೆ ಇದೆ ಎಂದು ಕೃತಕ ಅಭಾವ ಸೃಷ್ಟಿಸಲಾಗಿದೆ ಎಂದು ಅವರು ದೂರಿದ್ದರು.

ತದ ನಂತರ ಪ್ರಕರಣದ ಹಿಂದೆ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಇದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಸದ್ಯ ಸಿಸಿಬಿ ಪ್ರಕರಣದ ತನಿಖೆ ನಡೆಸುತ್ತಿದೆ.

ಇದನ್ನೂ ಓದಿ: Bed Blocking Case: ಬೆಡ್ ಬ್ಲಾಕಿಂಗ್ ಪ್ರಕರಣ: ತೇಜಸ್ವಿ ಸೂರ್ಯ ಹಾಗೂ ಸತೀಶ್ ರೆಡ್ಡಿ ಬಂಧಿಸುವಂತೆ ಕಮಲ್ ಪಂತ್​ಗೆ ದೂರು

ಸಂಸದ ತೇಜಸ್ವಿ ಸೂರ್ಯ ಮತ್ತಿತರರ ವಿರುದ್ಧದ ಪಿಐಎಲ್ ರಾಜಕೀಯ ಪ್ರೇರಿತವಾದದ್ದು; ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್

(Bengaluru South MP Tejaswi Surya accused intellectuals with Congress are misguided the bed blocking scam investigation)

‘ನಮಗೆ ಮೋಸ ಆಗಿದ್ದು ನಿಜ’; ಪುಷ್ಪಾ ಬಗ್ಗೆ ಕಲಾವಿದೆ ಸ್ವರ್ಣ ಬೇಸರ
‘ನಮಗೆ ಮೋಸ ಆಗಿದ್ದು ನಿಜ’; ಪುಷ್ಪಾ ಬಗ್ಗೆ ಕಲಾವಿದೆ ಸ್ವರ್ಣ ಬೇಸರ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
‘ಇದು ಕದಂಬರ ಬಗೆಗಿನ ಕಥೆ ಅಲ್ಲ’; ಸ್ಟೋರಿ ಬಗ್ಗೆ ರಿಷಬ್ ಸ್ಪಷ್ಟನೆ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ರಾಜಸ್ಥಾನದಲ್ಲಿ ಸಿಬ್ಬಂದಿಯನ್ನು ಒತ್ತೆಯಾಳಾಗಿರಿಸಿ ಪೆಟ್ರೋಲ್ ಬಂಕ್ ಲೂಟಿ
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ಮೋದಿ ಮನೆ ಮುಂದೆ ರಸ್ತೇಲಿ ಎಷ್ಟು ಗುಂಡಿಗಳಿವೆ ನೋಡಿ: ಡಿಕೆ ಶಿವಕುಮಾರ್
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ವಿದ್ಯುತ್ ಕಂಬ ಏರಿ ತಂತಿ ಹಿಡಿದು ನೇತಾಡಿದ ಮಕ್ಕಳು
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ದಸರಾ ದೀಪಾಲಂಕಾರ: ಲೈಟಿಂಗ್ಸ್​ನಿಂದ ಝಗಮಗಿಸುತ್ತಿರುವ ಮೈಸೂರು ರಸ್ತೆಗಳ ನೋಡಿ
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ಇಂದೋರ್​​ನಲ್ಲಿ ಭಾರಿ ಮಳೆಗೆ ಕಟ್ಟಡ ಕುಸಿತ, ಇಬ್ಬರು ಸಾವು
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ 2ನೇ ದಿನ: ಬ್ರಹ್ಮಚಾರಿಣಿ ಪೂಜೆಯ ಮಹತ್ವ, ಫಲಗಳೇನು? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ನವರಾತ್ರಿ ಎರಡನೇ ದಿನದ ದ್ವಾದಶ ರಾಶಿ ಭವಿಷ್ಯ ಹೇಗಿದೆ? ಇಲ್ಲಿದೆ ನೋಡಿ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ
ಪಂಜಾಬ್‌ಗೆ ಕೂಡಲೆ ಪ್ರವಾಹ ಪರಿಹಾರ ಪ್ಯಾಕೇಜ್ ಘೋಷಿಸಿ;ರಾಹುಲ್ ಗಾಂಧಿ ಒತ್ತಾಯ