ಅತ್ಯಾಚಾರ ಪ್ರಕರಣ: ಪ್ರಜ್ವಲ್​ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್​

ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಹಾಸನದ ಮಾಜಿ ಸಂಸದ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್‌ ರೇವಣ್ಣಗೆ ಕೋರ್ಟ್‌ ಇಂದು ಬಿಗ್‌ ಶಾಕ್‌ ಕೊಟ್ಟಿದೆ. ಅತ್ಯಾಚಾರ ಪ್ರಕರಣದದಿಂದ ತನ್ನನ್ನು ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ಪ್ರಜ್ವಲ್​ಗೆ ಜೈಲೇ ಗತಿ ಎಂಬಂತಾಗಿದೆ.

ಅತ್ಯಾಚಾರ ಪ್ರಕರಣ: ಪ್ರಜ್ವಲ್​ ರೇವಣ್ಣಗೆ ಮತ್ತೊಂದು ಶಾಕ್ ಕೊಟ್ಟ ಕೋರ್ಟ್​
Prajwal Revanna
Edited By:

Updated on: Apr 22, 2025 | 4:53 PM

ಬೆಂಗಳೂರು, (ಏಪ್ರಿಲ್ 22): ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಅತ್ಯಾಚಾರ ಪ್ರಕರಣದಿಂದ ಕೈಬಿಡುವಂತೆ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special Court) ವಜಾಗೊಳಿಸಿ ಆದೇಶ ಹೊರಡಿಸಿದೆ.  ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ. ಆದ್ದರಿಂದ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಆದ್ರೆ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ​ ಜಡ್ಜ್​ ಸಂತೋಷ್ ಗಜಾನನ ಭಟ್ ಅವರು ಕ್ರೈಮ್ ನಂಬರ್ 20ರಲ್ಲಿ ಪ್ರಜ್ವಲ್​ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಇದರಿಂದ ಸದ್ಯ ಅಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಪ್ರಜ್ವಲ್​ ರೇವಣ್ಣಗೆ ಹಿನ್ನಡೆಯಾಗಿದೆ.

ಕೆ.ಆರ್‌ ನಗರ (KR Nagara) ಸಂತ್ರಸ್ತ ಮಹಿಳೆ ಅತ್ಯಾಚಾರ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ, ಆದ್ದರಿಂದ ಪ್ರಕರಣದಿಂದ ತನ್ನನ್ನು ಕೈಬಿಡುವಂತೆ ಪ್ರಜ್ವಲ್‌ ರೇವಣ್ಣ ಪರ ವಕೀಲರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಸಹ ಈಗಾಗಲೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಇದೇ ವೇಳೆ ಆರೋಪಿ ಮೇಲಿರುವ ಆರೋಪಗಳನ್ನು ನ್ಯಾಯಾಧೀಶರು ಒತ್ತಿ ಹೇಳಿದ್ರು, ಆರೋಪ ಓದಿ ಹೇಳುವಾಗ ನ್ಯಾಯಾಧೀಶರ ಮುಂದೆಯೇ ಕೈ ಮುಗಿದು ಪ್ರಜ್ವಲ್‌ ರೇವಣ್ಣ ಕಣ್ಣೀರು ಹಾಕಿದ್ದರು.

ಇದನ್ನೂ ಓದಿ: ಇನ್ನೊಂದು ತಿಂಗಳಲ್ಲಿ ಪ್ರಜ್ವಲ್​ ರೇವಣ್ಣ ಜೈಲಿನಿಂದ ಹೊರಬರ್ತಾರೆ: ಸೂರಜ್ ರೇವಣ್ಣ

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಗಳು ಹೈಕೋರ್ಟ್​ನಲ್ಲಿ ವಜಾಗೊಂಡಿವೆ. ಅಲ್ಲದೇ ಸುಪ್ರೀಂಕೋರ್ಟ್​ನಲ್ಲೂ ಸಹ ವಜಾಗೊಂಡಿತ್ತು. ಸದ್ಯ ಪ್ರಜ್ವಲ್ ರೇವಣ್ಣ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಇದನ್ನೂ ಓದಿ
ಮಹಿಳೆ ಅಪಹರಣ ಕೇಸ್: ಭವಾನಿ ರೇವಣ್ಣಗೆ ವಿಧಿಸಿದ್ದ ಷರತ್ತು ಸಡಿಲಿಸಿದ ಕೋರ್ಟ್
ಅತ್ಯಾಚಾರ ಪ್ರಕರಣ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್!
ಅಶ್ಲೀಲಕ್ಕೂ ಒಂದು ಮಿತಿ ಇರಬೇಕ: ಪ್ರಜ್ವಲ್​ ರೇವಣ್ಣಗೆ ಹೈಕೋರ್ಟ್‌ ಚಾಟಿ
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ, ಜಾಮೀನು ಅರ್ಜಿ ವಜಾ

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಪ್ರಜ್ವಲ್​ ರೇವಣ್ಣ ಅವದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಮಾಜಿಕ ಜಾಲತಾಣದಲ್ಲಿ ಹರಿದಾಡಲು ಆರಂಭಿಸಿದವು. ಈ ವಿಡಿಯೋದಲ್ಲಿ ಇದ್ದಾರೆ ಎನ್ನಲಾದ ಸಂತ್ರಸ್ತೆ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರ ವಿರುದ್ಧ ದೂರು ದಾಖಲಿಸಿದರು. ಬಳಿಕ, ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಸರ್ಕಾರ ಪ್ರಕರಣದ ತನಿಖೆ ನಡೆಸಲು ಎಸ್​ಐಟಿ ತಂಡ ರಚಿಸಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಜ್ವಲ್​ ರೇವಣ್ಣ ವಿದೇಶಕ್ಕೆ ಪಲಾಯನ ಮಾಡಿದ್ದರು. ಆದರೆ, ಎಸ್​ಐಟಿ ಅಧಿಕಾರಿಗಳ ತಾಂತ್ರಿಕ ನಡೆಯಿಂದ ಪ್ರಜ್ವಲ್​ ರೇವಣ್ಣನನ್ನು ಬಂಧಿಸುವಲ್ಲಿ ಯಶ್ವಿಸಿಯಾಯಿತು. ಪ್ರಕರಣದ ತನಿಖೆ ನಡೆಸಿದ ಎಸ್​ಐಟಿ 1,632 ಪುಟಗಳ ಚಾರ್ಚ್​​ಶೀಟ್​​ ಅನ್ನು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ​ ಸಲ್ಲಿಸಿತ್ತು. ಚಾರ್ಚ್​ಶೀಟ್​ನಲ್ಲಿ ಮನೆ ಕೆಲಸದಾಕೆಗೆ ಲೈಂಗಿಕ್​ ದೌರ್ಜನ್ಯ ನೀಡಿರುವುದು ಉಲ್ಲೇಖವಾಗಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:46 pm, Tue, 22 April 25