ಬೆಂಗಳೂರು ಕಾಲ್ತುಳಿತ ಪ್ರಕರಣ: ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು..!

ಐಪಿಎಲ್ ಸೀಸನ್ 18ರಲ್ಲಿ ಆರ್ ಸಿಬಿ ಮೊದಲ ಬಾರಿಗೆ ಚಾಂಪಿಯನ್ ಆಗಿದ್ದು, ಇದೇ ಖುಷಿಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಆಯೋಜನೆ ಮಾಡಲಾಗಿತ್ತು. ಆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ಜೀವ ಕಳೆದುಕೊಂಡಿದ್ದಾರೆ. ಈ ಪ್ರಕರಣವನ್ನ ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಆರ್​ ಸಿಬಿ ಮ್ಯಾನೇಜ್​ ಮೆಂಟ್, ಕೆಎಸ್​ ಸಿಎ ಪೊಲೀಸ್ ಅಧಿಕಾರಿಗಳನ್ನು ತಲೆದಂಡ ಮಾಡಿದೆ. ಇದರ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ವಿರುದ್ಧವೂ ಸಹ ಎಫ್​ಐಆರ್ ದಾಖಲಿಸುವಂತೆ ಕೂಗು ಕೇಳಿಬಂದಿದೆ.

ಬೆಂಗಳೂರು ಕಾಲ್ತುಳಿತ ಪ್ರಕರಣ: ವಿರಾಟ್ ಕೊಹ್ಲಿ ವಿರುದ್ದವೂ ದೂರು ದಾಖಲು..!
Virat Kohli
Updated By: ರಮೇಶ್ ಬಿ. ಜವಳಗೇರಾ

Updated on: Jun 06, 2025 | 6:25 PM

ಬೆಂಗಳೂರು, (ಜೂನ್ 06): ಆರ್​ಸಿಬಿ (RCB) ವಿಜಯೋತ್ಸವ ಕಾರ್ಯಕ್ರಮದಲ್ಲಿ ಸಂಭವಿಸಿದ ಕಾಲ್ತುಳಿತದಿಂದ(Bengaluru stampede Case)  11 ಅಭಿಮಾನಿಗಳು ದಾರುಣವಾಗಿ ಜೀವ ಕಳೆದುಕೊಂಡಿದ್ದಾರೆ. ಈ ಸಂಬಂಧ RCB, KSCA, DNA ವಿರುದ್ಧ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ಕೆಲವರನ್ನು ಬಂಧನ ಸಹ ಮಾಡಿದ್ದಾರೆ. ಅಲ್ಲದೇ ಕಾಲ್ತುಳಿತದಲ್ಲಿ ಗಾಯಗೊಂಡ ಓರ್ವ ವ್ಯಕ್ತಿ ಆರ್​ಸಿಬಿ ಫ್ರಾಂಚೈಸಿ ವಿರುದ್ಧ ದೂರು ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಆರ್​ ಸಿಬಿ ಸ್ಟಾರ್​ ಪ್ಲೇಯರ್ ವಿರಾಟ್ ಕೊಹ್ಲಿ (Virat kohli) ವಿರುದ್ಧವೂ ಸಹ ಎಫ್​ಐಆರ್ ದಾಖಲಿಸುವಂತೆ ನೈಜ ಹೋರಾಟಗಾರರ ವೇದಿಕೆ ಆಗ್ರಹಿಸಿದೆ. ಆದ್ರೆ, ಮೊದಲಿಗೆ ದೂರು ದಾಖಲಿಸಿಕೊಳ್ಳಲು ಹಿಂದೇಟು ಹಾಕಿದ್ದ ಕಬ್ಬನ್ ಪಾರ್ಕ್ ಪೊಲೀಸರು ಕೊನೆಗೂ ದೂರು ದಾಖಲಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ವಿರುದ್ದವೂ ಕೂಡ ಎಫ್​ಐಆರ್ ದಾಖಲಿಸುವಂತೆ ನೈಜ ಹೋರಾಟಗಾರರ ವೇದಿಕೆ ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಗೆ ದೂರು ನೀಡಲು ಆಗಮಿಸಿದೆ. ಆದ್ರೆ, ಕಬ್ಬನ್ ಪಾರ್ಕ್ ಪೊಲೀಸರು ದೂರು ಪಡೆಯಲು ಹಿಂದೇಟು ಹಾಕಿದ್ದರು.

ಕೊನೆಗೂ ದೂರು ಸ್ವೀಕರಿಸಿದ ಪೊಲೀಸರು

ಹಲವು ಗಂಟೆಗಳ ಬಳಿಕ ಕೊನೆಗೂ ವಿರಾಟ್ ಕೊಹ್ಲಿ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ನೈಜ ಹೋರಾಟಗಾರರ ವೇದಿಕೆಯ ಎಚ್ ಎಂ ವೆಂಕಟೇಶ್ ಅವರಿಂದ ದೂರು ಸ್ವೀಕರಿಸಿದ್ದು, ಎಫ್ ಐ ಆರ್ ಜೊತೆಗೆ ಕೊಹ್ಲಿ ವಿರುದ್ಧದ ದೂರನ್ನು ಪರಿಗಣಿಸುವುದಾಗಿ ಕಬ್ಬನ್ ಪಾರ್ಕ್ ಪೊಲೀಸರು ಹಿಂಬರಹ ನೀಡಿದ್ದಾರೆ.

ಇದನ್ನೂ ಓದಿ
Stamped: RCB ವಿರುದ್ಧ ಕಬ್ಬನ್​ ಪಾರ್ಕ್ ಠಾಣೆಯಲ್ಲಿ​ ಮತ್ತೆರಡು ಕೇಸ್​
ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದ ಕರ್ನಾಟಕ ಪೊಲೀಸರು ದಾಖಲಿಸಿದ FIR!
RCB ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ ಸೇರಿ ನಾಲ್ವರ ಬಂಧನ
ಎಡಿಜಿಪಿ ದರ್ಜೆ ಅಧಿಕಾರಿ ಸಸ್ಪೆಂಡ್, ಕರ್ನಾಟಕ ಪೊಲೀಸ್ ಇತಿಹಾಸದಲ್ಲೇ ಮೊದಲು

ಇದನ್ನೂ ಓದಿ: RCB ಮಾರ್ಕೆಟಿಂಗ್‌ ಮುಖ್ಯಸ್ಥನಿಗೆ ಸದ್ಯಕ್ಕಿಲ್ಲ ರಿಲೀಫ್‌: ಹೈಕೋರ್ಟ್ ಕಟಕಟೆಯಲ್ಲಿ ಏನೇನಾಯ್ತು?

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಹಲವು ಜನರು ಮೃತಪಟ್ಟು ಅನೇಕರು ಗಾಯಗೊಂಡಿದ್ದಾರೆ. ಈ ದುರಂತದ ಬಗ್ಗೆ ಆರ್‌ಸಿಬಿ ತಂಡ ಸಂತಾಪ ಸೂಚಿಸಿದ್ದು, ವಿರಾಟ್ ಕೊಹ್ಲಿ ಆರ್‌ಸಿಬಿಯ ಸಂತಾಪ ಸಂದೇಶವನ್ನು ಮರುಹಂಚಿಕೊಂಡಿದ್ದಾರೆ. ಕೆಲವರು ಕೊಹ್ಲಿ ಅವರ ಪ್ರತಿಕ್ರಿಯೆಗೆ ಅಸಮಾಧಾನ ವ್ಯಕ್ತಪಡಿಸಿದರೆ, ಇನ್ನು ಕೆಲವರು ಅವರ ಕೆಲಸವನ್ನು ಸಮರ್ಥಿಸಿದ್ದಾರೆ.

ಘಟನೆ ಬೆನ್ನಲ್ಲೆ ಆರ್​ಸಿಬಿ ಸಂತಾಪ ಸೂಚಿಸಿ ಪೋಸ್ಟ್ ಒಂದನ್ನು ಹಾಕಿದೆ. ಇದೇ ಪೋಸ್ಟ್​ನ ಕೊಹ್ಲಿ ರೀ-ಶೇರ್ ಮಾಡಿಕೊಂಡಿದ್ದಾರೆಯೇ ಹೊರತು ಬೇರೆ ಯಾವುದೇ ಪ್ರತ್ಯೇಕ ಪೋಸ್ಟ್ ಹಾಕಿಲ್ಲ. ಇದಕ್ಕೆ ಅನೇಕರು ಅಪಸ್ವರ ತೆಗೆದಿದ್ದಾರೆ. ಇನ್ನೂ ಕೆಲವರು ಕೊಹ್ಲಿ ಆರ್​ಸಿಬಿ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಹೀಗಾಗಿ, ಅವರು ಆರ್​ಸಿಬಿ ಪೋಸ್ಟ್​ನ ರೀ-ಶೇರ್ ಮಾಡಿಕೊಂಡು ಸಂತಾಪ ಸೂಚಿಸಿದ್ದರಲ್ಲಿ ತಪ್ಪಿಲ್ಲ ಎಂದಿದ್ದಾರೆ.

ಅರೆಸ್ಟ್‌ ವಿರಾಟ್‌ ಕೊಹ್ಲಿ ಟ್ರೆಂಡ್‌

ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಲಂಡನ್‌ಗೆ ತೆರಳಿದ್ದಾರೆ ಎಂಬ ವದಂತಿ ಹಬ್ಬಿದೆ. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ “ಅರೆಸ್ಟ್‌ ವಿರಾಟ್‌ ಕೊಹ್ಲಿ” ಟ್ರೆಂಡ್‌ ಆಗಿದ್ದು, ಇಂತಹ ದುಃಖದ ಸಮಯದಲ್ಲಿ ಈ ಜೋಡಿ ಹೇಗೆ ವಿದೇಶ ಪ್ರವಾಸ ಕೈಗೊಳ್ಳಲು ಸಾಧ್ಯ ಎಂದು ಖಾರವಾಗಿ ಪ್ರಶ್ನಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಸಂಭವಿಸಿ 11 ಜನ ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಆದರೆ ವಿರಾಟ್‌ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ಇದಕ್ಕೂ ತಮಗೂ ಸಂಬಂಧವಿಲ್ಲ ಎಂಬಂತೆ ಲಂಡನ್‌ ಪ್ರವಾಸ ಕೈಗೊಂಡಿದ್ದಾರೆ. ಸರ್ಕಾರ ಈ ದುರಂತಕ್ಕೆ ಸಂಬಂಧಿಸಿದಂತೆ ಈಗಾಗಲೇ ಆರ್‌ಸಿಬಿ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆ ಅವರನ್ನು ಬಂಧಿಸಿದೆ. ಆದರೆ ವಿರಾಟ್‌ ಕೊಹ್ಲಿ ಬಂಧನ ಏಕಿಲ್ಲ” ಎಂದು ಹಲವು ನೆಟ್ಟಿಗರು ಆಕ್ರೋಶಭರಿತರಾಗಿ ಪ್ರಶ್ನಿಸಿದ್ದಾರೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ (Chinnaswamy Staduim) ಹೊರಭಾಗದಲ್ಲಿ ನಡೆದ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟು 40ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬರೋದನ್ನು ನೋಡಲು 2-3 ಲಕ್ಷ ಅಭಿಮಾನಿಗಳು ಸೇರಿದ್ದು ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ. ಊಹೆಗೂ ಮೀರಿದ ಜನರು ಬಂದಿದ್ದರಿಂದ ದುರ್ಘಟನೆ ಸಂಭವಿಸಿದೆ. ಇನ್ನು ಘಟನೆ ನಡೆಯುವ ವೇಳೆ ವಿರಾಟ್ ಕೊಹ್ಲಿ ಕೂಡ ಇದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:00 pm, Fri, 6 June 25