ಬೆಂಗಳೂರು ಕಾಲ್ತುಳಿತ: ಯಾವುದೇ ನಿರ್ದೇಶನ ನೀಡದೇ ಪಿಐಎಲ್ ವಿಚಾರಣೆ ಜೂ 12ಕ್ಕೆ ಮುಂದೂಡಿದ ಹೈಕೋರ್ಟ್
ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆ ಮಾಡಲಾಗಿದೆ. ಸರ್ಕಾರದ ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೈಕೋರ್ಟ್ ತಿಳಿಸಿದ್ದು, ಯಾವುದೇ ನಿರ್ದೇಶನ ನೀಡದೇ ವಿಚಾರಣೆಯನ್ನು ಜೂನ್ 12ಕ್ಕೆ ಮುಂದೂಡಿದೆ.

ಬೆಂಗಳೂರು, ಜೂನ್ 10: ನಗರದ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತದಲ್ಲಿ ಆರ್ಸಿಬಿಯ (RCB) 11 ಅಭಿಮಾನಿಗಳ ಸಾವು ರಾಜ್ಯ ಸರ್ಕಾರಕ್ಕೆ ಭಾರಿ ತಲೆ ನೋವಾಗಿದೆ. ಈ ವಿಚಾರವಾಗಿ ಹೈಕಮಾಂಡ್ ಜೊತೆ ಚರ್ಚಿಸಲು ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಗೆ ಹೋಗಿದ್ದಾರೆ. ಇತ್ತ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮಾಡಿದ ಹೈಕೋರ್ಟ್ (high court), ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ಮಧ್ಯಂತರ ಅರ್ಜಿ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಯಾವುದೇ ನಿರ್ದೇಶನ ನೀಡದೇ ಅರ್ಜಿಗಳ ವಿಚಾರಣೆಯನ್ನು ಜೂ.12 ಮಧ್ಯಾಹ್ನ 2.30ಕ್ಕೆ ಮುಂದೂಡಿದೆ.
ದುರಂತದ ಬಳಿಕ ಯಾವುದೇ ಪ್ರಕರಣಗಳನ್ನು ದಾಖಲಾಗಿರಲಿಲ್ಲ. ಹೈಕೋರ್ಟೇ ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿತ್ತು. ಹಲವರಿಂದ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ವಿಚಾರಣೆಗೆ ಮನವಿ ಹಿನ್ನೆಲೆ ನ್ಯಾ.ವಿ.ಕಾಮೇಶ್ವರ ರಾವ್ ಮತ್ತು ನ್ಯಾ.ಸಿ.ಎಂ.ಜೋಶಿ ಅವರ ಪೀಠದಿಂದ ಇಂದು ವಿಚಾರಣೆ ಮಾಡಿದ್ದು, ಸರ್ಕಾರದ ಪ್ರತಿಕ್ರಿಯೆ ಬಂದ ಬಳಿಕ ತೀರ್ಮಾನ ನೀಡುವುದಾಗಿ ಹೇಳಿ ಜೂ.12 ಮಧ್ಯಾಹ್ನ 2.30ಕ್ಕೆ ವಿಚಾರಣೆಯನ್ನು ಮುಂದೂಡಲಾಗಿದೆ.
ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯವೆಂದ ಬಿವೈ ವಿಜಯೇಂದ್ರ: ಸಿಎಂಗೆ ಬಹಿರಂಗ ಪತ್ರ
ಜೂನ್ 5ರಂದು ನಡೆದ ವಿಚಾರಣೆಯಲ್ಲಿ ಘಟನೆಯ ಸಂಪೂರ್ಣ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಕೋರ್ಟ್ ಸೂಚಿಸಿತ್ತು. ಆದರೆ ಸರ್ಕಾರ ಯಾವುದೇ ವರದಿ ಸಲ್ಲಿಸಿಲ್ಲ. ವಿಚಾರಣೆ ವೇಳೆ ಸರ್ಕಾರದಿಂದ ಇನ್ನೂ ವರದಿ ಏಕೆ ಸಲ್ಲಿಸಿಲ್ಲ ಎಂದು ಹೈಕೋರ್ಟ್ ಪ್ರಶ್ನೆ ಮಾಡಿದೆ. ಈ ವೇಳೆ ಹೈಕೋರ್ಟ್ಗೆ ಎಜಿ ಶಶಿಕಿರಣ್ ಶೆಟ್ಟಿ ಉತ್ತರಿಸಿದ್ದು, ನಾವು ನ್ಯಾಯಾಂಗ ತನಿಖೆಗೆ ಆದೇಶ ನೀಡಿದ್ದೇವೆ ಎಂದರು.
ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ ಬೆನ್ನಲ್ಲೇ ಎಚ್ಚೆತ್ತ ಆರೋಗ್ಯ ಇಲಾಖೆ: ಇನ್ಮುಂದೆ ಆರೋಗ್ಯ ಇಲಾಖೆಯ ಅನುಮತಿ ಕಡ್ಡಾಯ
ಮ್ಯಾಜಿಸ್ಟೀರಿಯಲ್ ತನಿಖೆ, ನ್ಯಾಯಾಂಗ ತನಿಖೆ ವರದಿ ಸಲ್ಲಿಸುತ್ತೇವೆ. ತನಿಖೆಗೆ ಮೊದಲೇ ಸರ್ಕಾರ ತೀರ್ಮಾನಿಸಿದೆ ಎಂದು ವಿವಾದ ಬೇಡ. ಹೀಗಾಗಿ ಒಂದು ತಿಂಗಳು ಕಾಲಾವಕಾಶ ನೀಡುವಂತೆ ಎಜಿ ಶಶಿಕಿರಣ್ ಶೆಟ್ಟಿ ಮನವಿ ಮಾಡಿದರು. ಜೂನ್ 12ರೊಳಗೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:21 am, Tue, 10 June 25