AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಜಾತಿ ಸಮೀಕ್ಷೆಗೆಂದು ಹೋದ ಶಿಕ್ಷಕಿಗೆ ಹೃದಯಾಘಾತ; ಶಿಕ್ಷಕರಿಗೆ ಗಣತಿಯ ಹೆಸರಿನಲ್ಲಿ ಒತ್ತಡದ ಶಿಕ್ಷೆ

Caste census: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆಂದು ಹೋದ ಶಾಲಾ ಶಿಕ್ಷಕಿ ಯಶೋಧ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಸಮೀಕ್ಷೆ ನಡೆಸುತ್ತಿರುವಾಗಲೇ ಕುಸಿದು ಬಿದ್ದಿದ್ದ ಶಿಕ್ಷಕಿಯನ್ನು ಸ್ಥಳೀಯರು ಕೂಡಲೆ ಆಸ್ಪತ್ರೆಗೆ ರವಾನಿಸಿದ್ದಾರೆ. ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ವೈದ್ಯರು ಆಪರೇಷನ್ ಮಾಡಿ ಸ್ಟಂಟ್ ಅಳವಡಿಸಿದ್ದಾರೆ.

ಬೆಂಗಳೂರು: ಜಾತಿ ಸಮೀಕ್ಷೆಗೆಂದು ಹೋದ ಶಿಕ್ಷಕಿಗೆ ಹೃದಯಾಘಾತ; ಶಿಕ್ಷಕರಿಗೆ ಗಣತಿಯ ಹೆಸರಿನಲ್ಲಿ ಒತ್ತಡದ ಶಿಕ್ಷೆ
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ವೇಳೆ ಶಿಕ್ಷಕಿಗೆ ಹೃದಯಾಘಾತ
ಭಾವನಾ ಹೆಗಡೆ
|

Updated on: Oct 12, 2025 | 10:52 AM

Share

ಬೆಂಗಳೂರು, ಅಕ್ಟೋಬರ್ 12: ಹಲವಾರು ವಿರೋಧದ ನಡುವೆಯೂ ಕರ್ನಾಟಕದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದೆ. ಈ ಸಮೀಕ್ಷೆಗೆ ಶಾಲಾ ಶಿಕ್ಷಕರನ್ನು ಸಮೀಕ್ಷಕರಾಗಿ ಆಯೋಜಿಸಿಲಾಗಿದೆ. ಈ ಹಿನ್ನೆಲೆ ಸಮೀಕ್ಷೆಗೆಂದು ಹೋದ ವೇಳೆ ಶಿಕ್ಷಕರೊಬ್ಬರು ಹೃದಯಾಘಾತಕ್ಕೆ ಒಳಗಾಗಿರುವ ಘಟನೆ ನಡೆದಿದೆ. ಸ್ಥಳೀಯರ ಸಮಯ ಪ್ರಜ್ಞೆಯಿಂದ ಶಿಕ್ಷಕಿ ಆಸ್ಪತ್ರೆಗೆ ದಾಖಲಾಗಿದ್ದು, ಸ್ಟಂಟ್ ಅಳವಡಿಸಲಾಗಿದೆ.

ಊಟ, ನೀರಿಲ್ಲದೆ ಗಣತಿಯಲ್ಲಿ ತೊಡಗಿದ್ದ ಶಿಕ್ಷಕಿ

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದಲ್ಲಿ ಸಮೀಕ್ಷೆಗೆಂದು ಹೋದ ಶಾಲಾ ಶಿಕ್ಷಕಿ ಯಶೋಧ ಹೃದಯಾಘಾತದಿಂದ ಕುಸಿದು ಬಿದ್ದಿದ್ದಾರೆ. ಇವರು ಬೊಮ್ಮಸಂದ್ರದ ಸರ್ಕಾರಿ ಶಾಲೆಯಲ್ಲಿ ದೈಹಿಕ ಶಿಕ್ಷಕಿಯಾಗಿ ಕೆಲಸ ನಿರ್ವಹಿಸುತ್ತಿದ್ದು, ಬೊಮ್ಮಸಂದ್ರದ ಗಣತಿಯ ಜವಾಬ್ದಾರಿ ಹೊತ್ತಿದ್ದರು. ಸಮೀಕ್ಷೆ ನಡೆಸುತ್ತಿರುವಾಗಲೇ ಕುಸಿದು ಬಿದ್ದಿದ್ದ ಶಿಕ್ಷಕಿಯನ್ನು ಸ್ಥಳೀಯರು ಕೂಡಲೆ ಆಸ್ಪತ್ರೆಗೆ ರವಾನಿಸಿದ್ದಾರೆ. ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಯಲ್ಲಿ ವೈದ್ಯರು ಆಪರೇಷನ್ ಮಾಡಿ ಸ್ಟಂಟ್ ಅಳವಡಿಸಿದ್ದಾರೆ. ಸಮೀಕ್ಷೆಯ ಕಾರಣದಿಂದಾಗಿ ಗ್ರಾಮದ ಮನೆ ಮನೆಗೆ ತೆರಳಿ ತನಗೊಪ್ಪಿಸಿದ ಕೆಲಸ ಮಾಡುತ್ತಿದ್ದ ಶಿಕ್ಷಕಿ ತೀವ್ರ ಒತ್ತಡದಿಂದ ಹೃದಯಾಗಾತಕ್ಕೆ ಒಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ ಜಾತಿಗಣತಿ ಕಾರ್ಯ ವೇಳೆ ಇದುವರೆಗೂ ಮೂವರು ಶಿಕ್ಷಕರು ಸಾವು, ಪರಿಹಾರ ಘೋಷಿಸಿದ ಸಿಎಂ

ಸಮೀಕ್ಷೆಯಲ್ಲಿ ತೊಡಗಿರುವ ಶಿಕ್ಷಕರಿಗೆ ಹೆಚ್ಚಾದ ಒತ್ತಡ

ಕರ್ನಾಟಕದಲ್ಲಿ ನಡೆಯುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಕೆಲಸದಲ್ಲಿ ನಿರತರಾಗಿರುವ ಶಿಕ್ಷಕರು ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಬಿಸಿಲು, ಮಳೆ, ಗಾಳಿ ಎನ್ನದೆ ಮನೆ ಮನೆ ಓಡಾಟ ನಡೆಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ಊಟ, ನೀರಿಲ್ಲದೆ ಒದ್ದಾಡುತ್ತಿದ್ದಾರೆ. ಸಮೀಕ್ಷೆ ಪೂರ್ಣಗೊಳ್ಳದೆ ಹೋದರೆ ಶಿಕ್ಷಕರಿಗೆ ನೋಟೀಸ್ ಕಳುಹಿಸಲಾಗುತ್ತದೆ. ಇದರ ನಡುವೆ ಅಮಾನತ್ತಿನ ಭಯದಲ್ಲಿ ಹೆಚ್ಚಿನ ಒತ್ತಡ ಅನುಭವಿಸಿ ಈ ಪರಿಸ್ಥಿತಿ ಎದುರಾಗುತ್ತಿದೆ ಎಂದು ಹೇಳಲಾಗುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಅಮೆರಿಕದ ವ್ಯಾಪಾರ ಒಪ್ಪಂದವು ಕೃಷಿ ವಲಯವನ್ನು ರಕ್ಷಿಸುತ್ತೆ: ಪಿಯೂಷ್ ಗೋಯಲ್
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಡ್ಯಾನ್ಸ್ ಬಳಿಕ ಪ್ರೀತಮ್ ಆಡಿದ ಮಾತಿಗೆ ಸುಸ್ತಾದ ಆ್ಯಂಕರ್ ಅನುಶ್ರೀ
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಪತ್ನಿಯ ಚಿಕಿತ್ಸೆಗೆಂದು ಇಟ್ಟಿದ್ದ ಸಾಲದ ಹಣವನ್ನೇ ಹೊತ್ತೊಯ್ದ ಕದೀಮರು!
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಎಸ್​ಐಆರ್ ವಿರುದ್ಧದ ಅರ್ಜಿಯ ಬಗ್ಗೆ ಖುದ್ದು ವಾದ ಮಾಡಲು ಬಂದ ಮಮತಾ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ಸಿದ್ದಾಪುರ ಕೊಲೆ ಪ್ರಕರಣ: ಕಮಲಾಕರ್ ಭಟ್ ಸೇರಿ ನಾಲ್ವರಿಗೆ ನ್ಯಾಯಾಂಗ ಬಂಧನ
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
ನಿಮ್ಮ ಮಕ್ಕಳ ಕೈಹಿಡಿದು ರಸ್ತೆ ದಾಟಿಸಿ, ಇಲ್ಲವಾದ್ರೆ ಹೀಗೆ ಅಪಘಾತವಾಗಬಹುದು
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!
SSLC ವಿದ್ಯಾರ್ಥಿಗಳ ಪರೀಕ್ಷೆ ಮುಗಿಯುವವರೆಗೂ ಟಿವಿ–ಮೊಬೈಲ್ ಆಫ್!