ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ

ಡಿಟೋನೇಟರ್ ತಂತ್ರಜ್ಞಾನದಿಂದ ತಯಾರಾಗುವ ಸ್ಪೋಟಕವೇ ಗ್ರೆನೇಡ್. ಇದು ಸೇಫ್ಟಿ ಫಿನ್ ಅಥವಾ ಕಾಟರ್ ಪಿನ್​​​ನಿಂದ ನಿಯಂತ್ರಿಸಲ್ಪಡುತ್ತದೆ.

ಬೆಂಗಳೂರಿನಲ್ಲಿ ಹ್ಯಾಂಡ್​​ ಗ್ರೆನೇಡ್ ಪತ್ತೆ; ಪೊಲೀಸರಲ್ಲಿ ಹೆಚ್ಚಿದ ಆತಂಕ, ಎಲ್ಲೆಡೆ ಕಟ್ಟೆಚ್ಚರ
ಸಾಂದರ್ಭಿಕ ಚಿತ್ರ
Follow us
Prajwal Kumar NY
| Updated By: Ganapathi Sharma

Updated on:Jul 20, 2023 | 4:01 PM

ಬೆಂಗಳೂರು, ಜುಲೈ 20: ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಬಂಧನಕ್ಕೊಳಗಾಗಿದ್ದ ಐವರು ಶಂಕಿತ ಉಗ್ರರ ಪೈಕಿ ಒಬ್ಬನ ನಿವಾಸದಲ್ಲಿ ಹ್ಯಾಂಡ್​​ ಗ್ರೆನೇಡ್(live hand grenade) ಪತ್ತೆಯಾಗಿರುವುದು ಪೊಲೀಸರಲ್ಲಿ (CCB Police) ಆತಂಕಕ್ಕೆ ಕಾರಣವಾಗಿದೆ. ಶಂಕಿತ ಉಗ್ರ ಜಾಹೀದ್​​ನ (Zahid Tabrez) ಕೊಡಿಗೆಹಳ್ಳಿಯಲ್ಲಿರುವ ಮನೆಯಲ್ಲಿ 4 ಗ್ರೆನೇಡ್ ಪತ್ತೆಯಾಗಿದೆ. ಈವರೆಗೂ ರಾಜ್ಯದಲ್ಲಿ ಜೀವಂತ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿರಲಿಲ್ಲ ಎನ್ನಲಾಗಿದೆ. ಆದರೆ, ಇದೀಗ ಸಿಲಿಕಾನ್ ಸಿಟಿಯಲ್ಲಿ ಒಂದೇ ಬಾರಿಗೆ ನಾಲ್ಕು ಸಜೀವ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದೆ.

ಈ ಹಿಂದೆ 2021ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿ ಐದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿದ್ದವು. ಆದರೆ, ಅವುಗಳು 40 ವರ್ಷಗಳಷ್ಟು ಹಳೆಯವು ಎನ್ನಲಾಗಿದ್ದು, ನೆಲದಡಿಯಲ್ಲಿ ಪತ್ತೆಯಾಗಿದ್ದವು.

ನಂತರ 2022 ರಲ್ಲಿ ಅಥಣಿ ಬಳಿಯ ಶಾಲೆಯೊಂದರಲ್ಲಿ ಒಂದು ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿತ್ತು. ಮಕ್ಕಳು ಚೆಂಡು ಎಂದು ಭಾವಿಸಿ ಆಟವಾಡುವಾಗ ಪತ್ತೆಯಾಗಿದ್ದ ಅದು ನಿರ್ಜೀವ ಗ್ರೆನೇಡ್ ಆಗಿತ್ತು. ಆನಂತರ ಇದೇ ಮೊದಲ ಬಾರಿಗೆ ಗ್ರೆನೇಡ್, ಅದೂ ಸಜೀವ ಗ್ರೆನೇಡ್ ಪತ್ತೆಯಾಗಿದೆ.

ಗ್ರೆನೇಡ್ ಎಂದರೇನು?

ಡಿಟೋನೇಟರ್ ತಂತ್ರಜ್ಞಾನದಿಂದ ತಯಾರಾಗುವ ಸ್ಪೋಟಕವೇ ಗ್ರೆನೇಡ್. ಇದು ಸೇಫ್ಟಿ ಫಿನ್ ಅಥವಾ ಕಾಟರ್ ಪಿನ್​​​ನಿಂದ ನಿಯಂತ್ರಿಸಲ್ಪಡುತ್ತದೆ. ಈ ಹ್ಯಾಂಡ್ ಗ್ರೆನೇಡ್​​​ಗಳಲ್ಲಿ ರಾಸಾಯನಿಕ ಗ್ರೆನೇಡ್​​ಗಳು, ಸ್ಟನ್ ಗನ್ ಗ್ರೆನೇಡ್​​​ಗಳು, ಭಾರಿ ಸ್ಪೋಟಕದ ಗ್ರೆನೇಡ್​​​ಗಳು ಹೀಗೆ ಹಲವು ವಿಧಗಳಿವೆ. ಇವುಗಳು ಕೇವಲ ಕೆಲವೊಂದು ಆಡಿಗಳಷ್ಟು ಮಾತ್ರ ಪರಿಣಾಮ ಬೀರುತ್ತವೆ. ಆದರೆ ವಿದೇಶಿ ಗ್ರೆನೇಡ್​​​ಗಳಾದ Dam51, mk3a2 ಗ್ರೆನೇಡ್​​ಗಳು ಭಾರಿ ಪ್ರಮಾಣ ಸ್ಪೋಟ ಉಂಟುಮಾಡುತ್ತವೆ. 40 ಮೀಟರ್ ನಿಂದ 200 ಮೀಟರ್ ವರೆಗೂ ಈ ಗ್ರೆನೇಡ್ ಗಳು ಪರಿಣಾಮ ಬೀರುತ್ತವೆ. ಹೀಗಾಗಿ ಈಗ ಸಿಕ್ಕಿರುವ ಗ್ರೆನೇಡ್​​​ಗಳ ಬಗ್ಗೆ ಸಿಸಿಬಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಬಂಧಿತ ಶಂಕಿತ ಉಗ್ರನ ಮನೆಯಲ್ಲಿ 4 ಗ್ರೆನೇಡ್​ ಪತ್ತೆ, ಸಿಸಿಬಿ ಶಾಕ್

ಖಚಿತ ಮಾಹಿತಿ ಮೇರೆಗೆ ಪೊಲೀಸರು ಬಾಂಬ್ ಸ್ಕ್ವಾಡ್ ಕರೆದುಕೊಂಡು ಹೋಗಿ ಆರೋಪಿಯ ಮನೆಯಲ್ಲಿ ಪರಿಶೀಲನೆ ನಡೆಸಿದ್ದರು. ಇದೇ ವೇಳೆ ಸಜೀವ ಹ್ಯಾಂಡ್ ಗ್ರೆನೇಡ್ ಪತ್ತೆಯಾಗಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Thu, 20 July 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್